ಸುದ್ದಿ

ಉದ್ಯೋಗದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಇಲ್ಲಿದೆ ಶುಭ ಸುದ್ದಿ, ಇನ್ಮುಂದೆ ಖಾಸಗಿ ವಲಯದಲ್ಲೂ ಮೀಸಲಾತಿ…!

82

ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ.

ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ.

ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ ಪ್ರಕಾರ ಸರ್ಕಾರದಿಂದ ವಿವಿಧ ಸೌಲಭ್ಯ, ತೆರಿಗೆ ಸೇರಿ ರಿಯಾಯಿತಿ ಪಡೆಯುತ್ತಿರುವ ಖಾಸಗಿ ಉದ್ದಿಮೆಗಳು ಅರ್ಹತೆ ಅನುಭವ ಹಾಗೂ ಇತರೆ ಅಗತ್ಯಗಳಿಗೆ ಒಳಪಟ್ಟು 15 ವರ್ಷಗಳಿಂದ ರಾಜ್ಯದಲ್ಲಿ ವಾಸವಾಗಿರುವ ಕನ್ನಡ ಓದಲು, ಬರೆಯಲು ಸಮರ್ಥವಾಗಿರುವವರನ್ನು ನೇಮಕಾತಿ ಮಾಡಿಕೊಳ್ಳಲು ತಿಳಿಸಲಾಗಿದೆ.

ವಿಕಲಚೇತನರಿಗೆ ಶೇ. 5ರಷ್ಟು ಮೀಸಲಾತಿ ನೀಡಲು ಅವಕಾಶವಿದೆ. ನಿಯಮವಳಿ ಸಿದ್ಧಪಡಿಸಿ ಸಾರ್ವಜನಿಕ ಆಕ್ಷೇಪಣೆ ಆಹ್ವಾನಿಸಿದ್ದು, 30 ದಿನಗಳ ಕಾಲಾವಕಾಶ ನೀಡಲಾಗಿದೆ. ಮುಂದಿನ ಅಧಿವೇಶನದಲ್ಲಿ ಇದನ್ನು ಮಂಡಿಸಲಾಗುವುದು ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • karnataka

    ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

  • ಆರೋಗ್ಯ

    ತೂಕ ಇಳಿಸಲು ಬಯಸುವವರು ಸೀಬೇಕಾಯಿ ಸೇವಿಸಬಹುದು..!ತಿಳಿಯಲು ಈ ಲೇಖನ ಓದಿ..

    ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.

  • ಸುದ್ದಿ

    ದಯವಿಟ್ಟು ನಮ್ಮನ್ನು ಮರೆಯಬೇಡಿ. ಬಿರಾದರ್ ಅವರ ನೋವಿನ ಮಾತು!

    ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…

  • ಜ್ಯೋತಿಷ್ಯ

    ಈ ದಿನದ ಭವಿಷ್ಯ ಹೇಗಿದೆ ಇಲ್ಲಿ ನೋಡಿ ತಿಳಿಯಿರಿ…

    ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ.  ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…

  • ಸುದ್ದಿ

    ಪ್ಲಾಸ್ಟಿಕ್ ಬಳಕೆಯನ್ನು ನಿಷೇದ ಮಾಡಿ, ಇಲ್ಲದಿದ್ದರೆ ಬಿಬಿಎಂಪಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು – ಡಾ. ಕೆ. ಸುಧಾಕರ್ ಹೇಳಿಕೆ …!

    ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.  ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ  ಬ್ರಿಗೇಡ್…

  • ವಿಚಿತ್ರ ಆದರೂ ಸತ್ಯ

    21 ವರ್ಷದ ತಂಗಿಯ ಮದುವೆ 10 ವರ್ಷದ ಬಾಲಕನೊಂದಿಗೆ ಮಾಡಿಸಿದ ಅಣ್ಣ..!ತಿಳಿಯಲು ಈ ಲೇಖನ ಓದಿ..

    ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್‌ ನಗರದ ಭಾಂಗ್‌ಸಿಕ್‌ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.