ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ.

ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ ಭೇಟಿ ಆಗಬೇಕು ಎಂದುಕೊಂಡಿದ್ದನು. ಈ ವೇಳೆ ‘ನಿಮ್ಮ ನೆಚ್ಚಿನ ನಟಿಯನ್ನ ಭೇಟಿ ಮಾಡುವ ಅವಕಾಶ’ ನಿಮಗೆ ಸಿಗಲಿದೆ ಎಂಬ ಪ್ರಕಟಣೆಯನ್ನು ಇನ್ಸ್ಟಾಗ್ರಾಮ್ ನಲ್ಲಿ ಗಮನಿಸಿದ್ದಾನೆ. ನಂತರ ಆ ಅಭಿಮಾನಿ ವೆಬ್ಪೇಜ್ ಆಡ್ಮಿನ್ನನ್ನು ಸಂಪರ್ಕಿಸಿ ಕಾಜಲ್ರನ್ನು ಭೇಟಿ ಮಾಡಿಸಿ ಎಂದು ಕೇಳಿಕೊಂಡಿದ್ದನು.

ಪ್ರಕಟಣೆ ಕೆಲವು ನಟಿಯರ ಪೈಕಿ ನಿಮ್ಮ ಕಾಜಲ್ ಅಗರ್ ವಾಲ್ ಅವರ ಫೋಟೋ ಕೂಡ ಹಾಕಲಾಗಿದ್ದು, ಅದರ ಮೇಲೆ ಕ್ಲಿಕ್ ಮಾಡಿದ ಯುವಕ ಮುಂದುವರೆಸುತ್ತಾ ಹೋಗಿದ್ದಾನೆ. ಆ ಪೇಜ್ ನಲ್ಲಿ ವ್ಯಕ್ತಿಗತವಾದ ಕೆಲವು ವಿವರಗಳನ್ನ ಕೇಳಲಾಗಿತ್ತು. ಕಾಜಲ್ ಭೇಟಿ ಮಾಡಬಹುದು ಎಂಬ ಆಸೆಯಿಂದ ಆ ಯುವಕ ತನಗೆ ಸಂಬಂಧಿಸಿದ ವಿವರಗಳನ್ನ ನೀಡಿದ್ದಾರೆ. ಜೊತೆಗೆ ಕೆಲವು ಫೋಟೊಗಳನ್ನು ಸಹ ಶೇರ್ ಮಾಡಿಕೊಂಡಿದ್ದಾನೆ. ಆತನ ಫೋಟೊಗಳನ್ನು ಗಮನಿಸಿದ ಸೈಬರ್ ಕಳ್ಳರು ಈತ ಶ್ರೀಮಂತ ಮನೆತನದ ಎಂಬುವುದನ್ನು ಅರಿತು ಆತನ ಫೋಟೋಗಳನ್ನು ಉಪಯೋಗಿಸಿ ಮಾರ್ಫಿಂಗ್ ಮಾಡಿ ಬ್ಲಾಕ್ ಮೇಲ್ ಮಾಡಲು ಶುರುಮಾಡಿದ್ದಾರೆ.

ವೆಬ್ಪೇಜ್ ಆಡ್ಮಿನ್ ಮೊದಲು ಅಭಿಮಾನಿಯ ಬಳಿ 50 ಸಾವಿರ ರೂ. ತೆಗೆದುಕೊಂಡಿದ್ದಾನೆ. ವೈಯಕ್ತಿಕ ಫೋಟೋವನ್ನು ಮಾರ್ಫ್ ಮಾಡಿ ವೈಯಕ್ತಿಕ ಮಾಹಿತಿಯನ್ನು ಲೀಕ್ ಮಾಡುತ್ತೇವೆ ಎಂದು ಹೆದರಿಸಿ 60 ಲಕ್ಷ ರೂ. ಕಸಿದುಕೊಂಡಿದ್ದಾರೆ. ಅಭಿಮಾನಿ 60 ಲಕ್ಷ ರೂ. ಕಳೆದುಕೊಂಡ ಮೇಲೆ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
21 ವರ್ಷದ ತಿರುಪುರ್ ಮೂಲಕದ ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…
ಮೆಕ್ಸಿಕೋದ ಕಾಲೇಜು ಯುವತಿ ಬಾಲ್ಕನಿ ಮೇಲೆ ತಲೆಕೆಳಗಾಗಿ ಯೋಗ ಮಾಡಲು ಹೋಗಿ, ಆಯಾತಪ್ಪಿ 80 ಅಡಿ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡಿ ಮತ್ತು ಪಾದದ ಕೀಲುಗಳನ್ನು ಮರುಜೋಡಣೆ ಮಾಡಿರುವುದರಿಂದ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆ ದೇಹದಲ್ಲಿ 110 ಮೂಳೆಗೆ ಮುರಿದಿವೆ. ತಲೆ, ಸೊಂಟದ ಭಾಗಕ್ಕೂ ಪೆಟ್ಟು ಬಿದ್ದಿದೆ. ಯುವತಿ ಅಪಾರ್ಟ್ಮೆಂಟ್ನ ಆರನೇ ಅಂತಸ್ತಿನಲ್ಲಿರುವ ತಮ್ಮ ಮನೆಯ ಬಾಲ್ಕನೆಯ ಕಂಬಿಯ ಮೇಲೆ…
ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ….
ವಿನೋದ್ ರಾಜ್ ಕನ್ನಡ ಚಿತ್ರರಂಗದ ನಾಯಕ ನಟರಲ್ಲಿ ಒಬ್ಬರು. ಖ್ಯಾತ ನಟಿ ಡಾ.ಲೀಲಾವತಿ ಅವರ ಪುತ್ರ. ಡ್ಯಾನ್ಸ್ ರಾಜಾ ಡ್ಯಾನ್ಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನಂಜುಂಡ, ಮಹಾಭಾರತ, ಶ್ರೀ ವೆಂಕಟೇಶ್ವರ ಮಹಿಮೆ, ನನಗೂ ಹೆಂಡ್ತಿ ಬೇಕು, ಯುದ್ಧಪರ್ವ, ನಾಯಕ, ಬನ್ನಿ ಒಂದ್ಸಲ ನೋಡಿ, ಗಿಳಿ ಬೇಟೆ, ಕ್ಯಾಪ್ಟನ್, ಬೊಂಬಾಟ್ ರಾಜ ಬಂಡಲ್ ರಾಣಿ, ರಂಭಾ ರಾಜ್ಯದಲ್ಲಿ ರೌಡಿ, ರಾಜಣ್ಣ, ದಳವಾಯಿ, ಸ್ನೇಹಲೋಕ, ಓಂ ಶಕ್ತಿ, ಬ್ರಹ್ಮ ವಿಷ್ಣು, ವಂದೇ ಮಾತರಂ, ರಾಷ್ಟ್ರಗೀತೆ,…
ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…