ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ.

ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ ಭಕ್ತಾದಿಗಳಿಗೆ ದರ್ಶನ ಪಡೆಯುವ ಅವಕಾಶ ಸಿಕ್ಕಿದೆ.ಈ ವರ್ಷ ಮತ್ತೆ ಆ ವಿಶೇಷ ಅವಧಿ ಬಂದಿದೆ. ಜುಲೈ 1ರ ಸೋಮವಾರದಿಂದ 48 ದಿನಗಳ ಕಾಲ ಅಂದರೆ ಆಗಸ್ಟ್ 17ರವರೆಗೆ ಭಕ್ತಾದಿಗಳಿಗೆ ದರ್ಶನದ ಅವಕಾಶ ಸಿಗಲಿದೆ. ಪ್ರತಿ ದಿನ ಬೆಳಗ್ಗೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡಬಹುದು.

ಮೊದಲ 40 ದಿನಗಳ ಕಾಲ ಅಂದರೆ ಜುಲೈ 1ರಿಂದ ಆಗಸ್ಟ್ 9ರವರೆಗೆ ಮಲಗಿಸಿದ ರೀತಿಯಲ್ಲಿ ದೇವರ ವಿಗ್ರಹವನ್ನು ಇರಿಸಲಾಗುತ್ತದೆ. ಬಳಿಕ ಕೊನೆಯ ಎಂಟು ದಿನಗಳು ಆಗಸ್ಟ್ 10ರಿಂದ 17ರವರೆಗೆ ನಿಂತಿರುವ ಭಂಗಿಯಲ್ಲಿ ವಿಗ್ರಹವನ್ನು ನಿಲ್ಲಿಸಲಾಗುತ್ತದೆ.

ಹಿನ್ನೆಲೆ ಏನು?
16ನೇ ಶತಮಾನದಲ್ಲಿ ಶ್ರೀ ವರದರಾಜ ಪೆರುಮಾಳ್ ದೇವಸ್ಥಾನದಲ್ಲಿ ಅಥಿ ವರದಾರ್ ಮೂರ್ತಿಗೆ ಮೂಜೆ ಮಾಡಲಾಗುತಿತ್ತು. ಆಗ ದೇವಸ್ಥಾನದ ಮೇಲೆ ದಾಳಿ ನಡೆದಾಗ ದೇವಿಯ ವಿಗ್ರಹವನ್ನು ದೇಗುಲದ ಕಲ್ಯಾಣಿಯಲ್ಲಿ ಬಚ್ಚಿಡಲಾಗಿತ್ತು. ಆದರೆ ದಾಳಿಯ ಬಳಿಕ ಬಂದ ದೇವಸ್ಥಾನದ ಸಿಬ್ಬಂದಿಗೆ ಅಥಿ ವರದಾರ್ ದೇವರ ಮೂಲ ವಿಗ್ರಹ ಎಲ್ಲಿದೆ ಎನ್ನುವ ವಿಚಾರ ತಿಳಿದಿರಲಿಲ್ಲ. ಆ ನಂತರ ಅಥಿ ವರದಾರ್ ದೇವರ ಇನ್ನೊಂದು ವಿಗ್ರಹ ಮಾಡಿಸಿ ಪೂಜೆ ಅದಕ್ಕೆ ಪೂಜೆ ಸಲ್ಲಿಸುತ್ತಿದ್ದರು.

ಆದರೆ 40 ವರ್ಷದ ಬಳಿಕ 17ಂ9ರಲ್ಲಿ ದೇವಸ್ಥಾನದ ಕಲ್ಯಾಣಿ ಕಾರಣಾಂತರಗಳಿಂದ ಖಾಲಿಯಾಗಿತ್ತು. ಆ ವೇಳೆ ಕಲ್ಯಾಣಿಯಲ್ಲಿ ಬಚ್ಚಿಟ್ಟಿದ್ದ ಅಥಿ ವರದಾರ್ ದೇವರ ಮೂಲ ವಿಗ್ರಹ ಪತ್ತೆಯಾಗಿತ್ತು. ಆ ಬಳಿಕ 40 ವರ್ಷಕ್ಕೊಮ್ಮೆ 48 ದಿನಗಳ ಕಾಲ ದೇವಿಯನ್ನು ನೀರಿನಿಂದ ಹೊರತೆಗೆದು ಪೂಜಿಸುವ ಸಂಪ್ರದಾಯ ಹುಟ್ಟಿಕೊಂಡಿತು.

ಸದ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮೂರು ತಾತ್ಕಾಲಿಕ ಬಸ್ ನಿಲ್ದಾಣವನ್ನು ಪಟ್ಟಣದ ಹೊರಗಡೆ ನಿರ್ಮಿಸಲಾಗಿದೆ. ಹಾಗೆಯೇ ಕಾರುಗಳು ಹಾಗೂ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಪಾರ್ಕಿಂಗ್ ವ್ಯವಸ್ಥೆಯನ್ನೂ ಕೂಡ ಮಾಡಲಾಗಿದೆ. ಅಷ್ಟೇ ಅಲ್ಲದೆ ಭಕ್ತಾದಿಗಳನ್ನು ಶ್ರೀ ವರದರಾಜ ಪೆರುಮಾಳ್ ದೇವಸ್ಥಾನಕ್ಕೆ ಕರೆತರಲು ದೋಣಿಯ ವ್ಯವಸ್ಥೆ ಕೂಡ ಇದೆ ಎಂದು ದೇವಾಲಯದ ಸಿಬ್ಬಂದಿ ಮಾಹಿತಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.
ಮನುಷ್ಯನ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗ ಎಂದರೆ ಅದು ಮೆದುಳು. ಮೆದುಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಆತ ಬುದ್ಧಿವಂತನಾಗುತ್ತಾನೆ, ಅಥವಾ ಆತ ಮಾನಸಿಕವಾಗಿ ಸ್ವಸ್ಥನಾಗಿದ್ದಾನೆ ಎಂದು ಹೇಳಬಹುದು. ಹಾಗಾದ್ರೆ ನಮ್ಮ ಮೆದುಳಿಗೆ ತೊಂದರೆ ಉಂಟು ಮಾಡುವ ಹತ್ತು ಹವ್ಯಾಸಗಳನ್ನು ತಿಳಿಯೋಣ..
ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ….
ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.
ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…
ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಬೇರೆಬೇರೆ ಇದ್ದ ಕಾರಣ ಮನೆಯವರು ಧಮಕಿ ಹಾಕಿದ ಘಟನೆ ವಿಜಯಪುರ ದಲ್ಲಿ ನಡೆದಿದೆ. ನಾವು ಒಬ್ಬರಿಗೊಬ್ಬರು ಪ್ರೀತಿಸಿದ್ದೆವೆ, ಮದುವೆ ಕೂಡ ಆಗಿದ್ದೆವೆ ಆದರೆ ನಮಗೆ ಜೀವನ ನಡೆಸಲು ಬಿಡುತ್ತಿಲ್ಲ. ಹೀಗಾಗಿ ನಮಗೆ ಬದಕಲು ಬಿಡಿ ಎಂದು ಪ್ರೇಮಿಗಳು ಅಂಗಲಾಚುತ್ತಿದ್ದಾರೆ. 5 ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳಿಗೆ ಪೋಷಕರೇ ವಿಲನ್ ಆಗಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ನಾವದಗಿತ ಶೃತಿ ಹಾಗೂ ಆಲಮೇಲ ಪಟ್ಟಣದ ಗೌತಮ್ ಪೋಷಕರ ವಿರೋಧದ ಮಧ್ಯೆಯೂ ಸೆಪ್ಟೆಂಬರ್ 25ರಂದು…