ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್ನ್ನು ಹೆಚ್ಚಿಸುವುದಿಲ್ಲ.

ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆಯೆ? ಈ ಪ್ರಶ್ನೆಗೆ ಪ್ರಖ್ಯಾತ ಪೌಷ್ಟಿಕ ತಜ್ಞ ರುಜುತಾ ದಿವೆಕರ್, ಗೋಡಂಬಿ ಮೂಲತಃ ಭಾರತ ಮತ್ತು ಆಫ್ರಿಕಾದ ಬೆಳೆ. ಇದು ಬದಾಮಿಯಂತೆ ದೇಹಕ್ಕೆ ಒಳ್ಳೆಯದು. ಗೋಡಂಬಿಯಲ್ಲಿ ಕೊಲೆಸ್ಟ್ರಾಲ್ ಅಂಶಗಳಿಲ್ಲ. ಗೋಡಂಬಿ ಎಂಬುದು ಪೋಷಕಾಂಶಗಳ ತವರುಮನೆ. ಇದು ಸಕ್ಕರೆ ಕಾಯಿಲೆ ಇರುವವರ ಪಾದಗಳಿಗೆ ಒಳ್ಳೆಯದು. ಬೊಗಸೆ ತುಂಬ ಗೋಡಂಬಿಗಳನ್ನು ಪ್ರತಿನಿತ್ಯ ಸೇವಿಸುವದರಿಂದ ಕಾಲು ಸೆಳೆತ ಇನ್ನಿಲ್ಲವಾಗುತ್ತದೆ. ಅಲ್ಲದೆ, ರಕ್ತದಲ್ಲಿನ ಸಕ್ಕರೆ ಅಂಶವನ್ನು ಸಮತೋಲನವಾಗಿಡಬಹುದು ಎನ್ನುತ್ತಾರೆ.ಒಂದು ಮೋಸಂಬಿ ಹಣ್ಣಿಗಿಂತ ಗೋಡಂಬಿ 5 ಪಟ್ಟು ಹೆಚ್ಚು ವಿಟಮಿನ್ ಸಿ ಹೊಂದಿರುತ್ತದೆ. ದೇಹದಲ್ಲಿನ ಉಷ್ಣಾಂಶ ಹೆಚ್ಚಿಸಲು ವಿಟಮಿನ್ ಸಿ ಉಪಯೋಗಕಾರಿ .

ಸಹಾಯಕವಾದ ಫೈಬರ್‌ಗಳನ್ನು ಹೊಂದಿದೆ
ಗೋಡಂಬಿ ಅಥವಾ ಕ್ಯಾಶೀವ್ ನಟ್‌ಗಳಲ್ಲಿ ಆಹಾರದ ಫೈಬರ್ ಅಂಶ ಹೊಂದಿದ್ದು, ಇದನ್ನು ನಮ್ಮ ದೇಹ ಉತ್ಪಾದನೆ ಮಾಡದ ಕಾರಣ ಅದನ್ನು ಹೊರಗಿನಿಂದ ಸೇವಿಸಬೇಕಾಗುತ್ತದೆ. ಇದರಿಂದ ಜೀರ್ಣ ಶಕ್ತಿ ಹೆಚ್ಚಾಗಲಿದ್ದು, ಜೀರ್ಣಾಂಗ ಸಂಬಂಧಿ ರೋಗಗಳನ್ನು ಕಡಿಮೆ ಮಾಡುತ್ತದೆ.
ಹೃದಯ ರೋಗವನ್ನು ನಿಯಂತ್ರಣದಲ್ಲಿಡುತ್ತದೆ
ಗೋಡಂಬಿ ಎಲ್‌ಡಿಎಲ್ ಕೊಲೆಸ್ಟರಾಲ್ ಅನ್ನು ಕಡಿಮೆ ಮಾಡುತ್ತದೆ. ಅಲ್ಲದೆ, ಎಚ್‌ಡಿಎಲ್ ಕೊಲೆಸ್ಟರಾಲ್ ಒಯ್ಯುವ ಸಾಮಥ್ಯವನ್ನು ಹೆಚ್ಚಿಸುತ್ತದೆ. ಇದರಿಂದ ಹೃದಯ ರೋಗ ಬರುವ ಅಪಾಯವನ್ನು ತಗ್ಗಿಸುತ್ತದೆ. ಆದರೆ, ಉಪ್ಪು ಅಂಶ ಹೆಚ್ಚಿರುವ ಅಥವಾ ಹುರಿದ ಗೋಡಂಬಿಯಲ್ಲದಂತೆ ನೋಡಿಕೊಳ್ಳಿ.
ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ
ಗೋಡಂಬಿಯಲ್ಲಿ ಒಮೆಗಾ 3 ಅಂಶವಿರುವುದರಿಂದ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಇನ್ನು, ಹಸಿವಾದಾಗ ಬೊಗಸೆಯಷ್ಟು ಗೋಡಂಬಿ ತಿಂದರೆ
ಅದರಿಂದ ಹೆಚ್ಚು ಕಾಲ ಹೊಟ್ಟೆ ತುಂಬುವಂತೆಯೂ ನೋಡಿಕೊಳ್ಳುತ್ತದೆ.

ಕಣ್ಣಿಗೆ ಸೋಂಕು ಹರಡದಂತೆ ತಡೆಯಲು ಸಹಾಯ ಮಾಡುತ್ತದೆ
ವಾತಾವರಣದಲ್ಲಿ ಹೆಚ್ಚು ಮಾಲಿನ್ಯವಿದ್ದರೂ ಸಹ ಗೋಡಂಬಿಯನ್ನುತಿನ್ನುವುದರಿಂದ ಕಣ್ಣಿಗೆ ಸೋಂಕು ಬರದಂತೆ ತಡೆಯುತ್ತದೆ. ಯಾಕೆಂದರೆ ಇದು ಪ್ರಬಲ ಆ್ಯಂಟಿಆಕ್ಸಿಡೆಂಟ್ ಪಿಗ್ಮೆಂಟ್ ಹೊಂದಿದೆ. ಹೀಗಾಗಿ, ರೆಟಿನಾ ಮೇಲೆ ರಕ್ಷಣಾತ್ಮಕ ಪದರವನ್ನು ಸೃಷ್ಟಿ ಮಾಡಲಿದ್ದು, ಇದರಿಂದ ಹಾನಿಕರ ಯುವಿ ಕಿರಣಗಳನ್ನು ತಡೆಯುತ್ತದೆ.
ನಿಮ್ಮ ಚರ್ಮಕ್ಕೆ ಒಳ್ಳೆಯದು
ಗೋಡಂಬಿ ಮೆಗ್ನೀಷಿಯಂ, ಝಿಂಕ್, ಕಬ್ಬಿಣ ಹಾಗೂ ಫಾಸ್ಫರಸ್ ಅಂಶ ಹೆಚ್ಚಿರುತ್ತದೆ. ಅಲ್ಲದೆ, ಪ್ರೋಟೀನ್‌ಗಳು ಹಾಗೂ ಸೆಲೆನಿಯಂ ಸೇರಿ ಆ್ಯಂಟಿಆಕ್ಸಿಡೆಂಟ್ಸ್ ಸಹ ಹೆಚ್ಚಿರುತ್ತದೆ.. ಅದರಿಂದ ನಿಮ್ಮ ಚರ್ಮಕ್ಕೆ ಒಳ್ಳೆಯದು. ಜತೆಗೆ, ಗೋಡಂಬಿ ತಿನ್ನುವುದಾಗಲೀ, ಗೋಡಂಬಿ ಎಣ್ಣೆಯನ್ನು ನೆತ್ತಿ ಮೇಲೆ ಹಚ್ಚಿಕೊಳ್ಳುವುದರಿಂದ ಚರ್ಮ ಹಾಗೂ ಕೂದಲಿಗೆ ಮೆಲಾನಿನ್ ಪಿಗ್ಮೆಂಟ್ ಉತ್ಪತ್ತಿಯಾಗಲು ನೆರವಾಗುತ್ತದೆ. ಇನ್ನೊಂದೆಡೆ, ಕೂದಲಿಗೆ ನಯವಾದ ವಿನ್ಯಾಸವನ್ನೂ ಇದು ನೀಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು
ಇಂದು ಗುರುವಾರ, 22/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಚಂದನಾ ಅವರು ಟಾಸ್ಕ್ ಮಾಡಿ ಮೈ…
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್ ನಗರದ ಭಾಂಗ್ಸಿಕ್ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.
ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ ….