ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯರು ಅಡುಗೆ ಮಾಡುವಾಗ ಚಿಕ್ಕ ಪುಟ್ಟ ಸುಟ್ಟ ಗಾಯಗಳಾಗುವುದು ಸಾಮಾನ್ಯದ ಸಂಗತಿ. ಇಂತಹ ಚಿಕ್ಕ ಸುಟ್ಟ ಗಾಯಗಳನ್ನು ಕಡಿಮೆಗೊಳಿಸುವಂತ ಔಷಧಗಳು ನಮ್ಮ ಮನೆಯಲ್ಲೇ ಇರುತ್ತವೆ. ಅಂತಹ ಕೆಲವು ಮನೆಮದ್ದು ಇಲ್ಲಿವೆ..
ಸುಟ್ಟ ಗಾಯಕ್ಕೆ ತಕ್ಷಣವೇ ಟೂತ್ ಪೇಸ್ಟ್ ಹಚ್ಚಿಕೊಂಡಲ್ಲಿ ಸುಟ್ಟ ಗಾಯದಿಂದಾಗುವ ಉರಿ ಶಮನವಾಗುತ್ತದೆ.ಶರೀರದ ಭಾಗ ಸುಟ್ಟ ತಕ್ಷಣವೇ ಹಸಿ ಮಣ್ಣನ್ನು ಆ ಭಾಗಕ್ಕೆ ಹಚ್ಚುವುದರಿಂದ ಉರಿ ಕಡಿಮೆಯಾಗುತ್ತದೆ ಮತ್ತು ಗುಳ್ಳೆಗಳು ಏಳುವುದಿಲ್ಲ.
ಸುಟ್ಟ ಭಾಗಕ್ಕೆ ಸತತವಾಗಿ ನೀರು ಬಿಡುತ್ತಿದ್ದಲ್ಲಿ ಗಾಯದ ಉರಿ ಕಡಿಮೆಯಾಗುತ್ತದೆ.ಚರ್ಮ ಸುಟ್ಟಿದ್ದ ಭಾಗಕ್ಕೆ ಅರಿಸಿನವನ್ನು ಹಚ್ಚುವುದರಿಂದ ನೋವು ಕಡಿಮೆಯಾಗುತ್ತದೆ. ಜೇನುತುಪ್ಪಕ್ಕೆ ತ್ರಿಪಲಾಚೂರ್ಣವನ್ನು ಬೆರೆಸಿ ಸುಟ್ಟ ಗಾಯಕ್ಕೆ ಹಚ್ಚುವುದರಿಂದ ಗಾಯ ವಾಸಿಯಾಗುತ್ತದೆ.
ಬಿಳಿ ಎಳ್ಳನ್ನು ಚೆನ್ನಾಗಿ ತೇಯ್ದು ಸುಟ್ಟ ಗಾಯಕ್ಕೆ ಹಚ್ಚಿದಲ್ಲಿ ಉರಿ ಕಡಿಮೆಯಾಗುತ್ತದೆ. ಸುಟ್ಟ ಕಲೆಗಳು ಕೂಡ ಉಳಿಯುವುದಿಲ್ಲ.ತೆಂಗಿನೆಣ್ಣೆ ಕೂಡ ಸುಟ್ಟ ಗಾಯಕ್ಕೆ ಒಳ್ಳೆಯ ಔಷಧ. ಇದರಿಂದ ನೋವು ಶಮನವಾಗುತ್ತದೆ.
ತುಳಸಿ ಎಲೆಯ ರಸವನ್ನು ಸುಟ್ಟ ಗಾಯಕ್ಕೆ ಹಚ್ಚುವುದರಿಂದ ಸುಟ್ಟ ಗಾಯದ ಉರಿ ಕಡಿಮೆಯಾಗುತ್ತದೆ.ಎಳೆ ಬಿದಿರನ್ನು ತೇಯ್ದು ಸುಟ್ಟ ಭಾಗಕ್ಕೆ ಹಚ್ಚಿದರೆ ಗಾಯದ ಉರಿಯನ್ನು ನಿಯಂತ್ರಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…
ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…
ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.
ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…
ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…
ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…