ಸಿನಿಮಾ

ಶಿವಣ್ಣನ ಕಾರನ್ನು ಚೆಕ್ ಪೋಸ್ಟ್ ನಲ್ಲಿ ತಪಾಸಣೆ ಮಾಡಿದ ಚುನಾವಣಾ ಸಿಬ್ಬಂದಿ..ಕಾರಲ್ಲಿ ಸಿಕ್ಕಿದ್ದೇನು?

By admin

March 30, 2019

ಲೋಕಸಭೆ ಚುನಾವಣೆ  ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ತಡೆಗೆ ಚುನಾವಣಾ ಆಯೋಗ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ.

ಎಲ್ಲಾ ಕಡೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಗೌರಿಬಿದನೂರು ಬಳಿ ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ಇದ್ದ ಸಿಬ್ಬಂದಿಗೆ ಅಚ್ಚರಿಯಾಗಿದೆ.

ಚುನಾವಣಾ ಸಿಬ್ಬಂದಿ ರಾಜ್ಯ ಹೆದ್ದಾರಿಯಲ್ಲಿ ಬಂದ ಕಾರು ತಡೆದು ಪರಿಶೀಲನೆ ನಡೆಸಲು ಮುಂದಾದಾಗ, ಕಾರಿನಲ್ಲಿ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಇರುವುದು ಕಂಡುಬಂದಿದೆ. ಕಾರು ನಿಲ್ಲಿಸಿದ ಕೂಡಲೇ ಕಾರಿನಿಂದ ಇಳಿದ ಶಿವಣ್ಣ ಅವರನ್ನು ಕಂಡು ಚೆಕ್ ಪೋಸ್ಟ್ ಅಧಿಕಾರಿಗಳು ಅಚ್ಚರಿಯಾಗಿದ್ದಾರೆ.

ಬಳಿಕ ಕಾರು ಪರಿಶೀಲನೆ ನಡೆಸಿದ್ದಾರೆ. ಬಿಗ್ ಸ್ಟಾರ್ ಆಗಿದ್ದರೂ ಕೂಡ ಶಿವಣ್ಣ ಜನಸಾಮಾನ್ಯರಂತೆ ಚುನಾವಣಾ ಸಿಬ್ಬಂದಿ ಕಾರು ತಪಾಸಣೆ ಮಾಡಲು ಸಹಕರಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎನ್ನಲಾಗಿದೆ. ಶಿವಣ್ಣ ಅವರನ್ನು ಕಂಡು ಖುಷಿಯಾದ ಚುನಾವಣಾ ಸಿಬ್ಬಂದಿ ಅವರೊಂದಿಗೆ ಫೋಟೋ, ಸೆಲ್ಫಿ ತೆಗೆದುಕೊಂಡಿದ್ದಾರೆ. ಬಳಿಕ ಶಿವಣ್ಣ ಚಿತ್ರೀಕರಣಕ್ಕಾಗಿ ತೆರಳಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಗೀತಾ ಶಿವರಾಜಕುಮಾರ್ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಶಿವಣ್ಣ ಪ್ರಚಾರ ನಡೆಸಿದ್ದರು. ಈ ಬಾರಿ ಅವರು ಚುನಾವಣೆ ಪ್ರಚಾರದಿಂದ ದೂರ ಉಳಿಯುವುದಾಗಿ ಹೇಳಿದ್ದಾರೆ.