News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಗುಡ್ ನ್ಯೂಸ್ ; ಅಂತೂ ಇಂತು ರಾಜ್ಯಕ್ಕೆ ನೆರೆ ಪರಿಹಾರವನ್ನು ಘೋಷಿಸಿದ ಕೇಂದ್ರ ಸರ್ಕಾರ…!!

37

ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು  [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು  ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ.

ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್​ಡಿಆರ್​ಎಫ್​) ಒಟ್ಟು1813.75 ಕೋಟಿ ರೂ. ಮಧ್ಯಂತರ ಹಣವನ್ನು ಬಿಡುಗಡೆ ಮಾಡಲಾಗಿದೆ. ಅದರಲ್ಲಿ, ಬಿಹಾರಕ್ಕೆ400 ಕೋಟಿ ಹಣ ಮಂಜೂರು ಮಾಡಿದರೆ, ಕರ್ನಾಟಕ ನೆರೆ ಪರಿಹಾರಕ್ಕೆ1200 ಕೋಟಿ ನೀಡಲಾಗಿದ.

ರಾಜ್ಯದಲ್ಲಿ ಪ್ರವಾಹದಿಂದ ಒಟ್ಟಾರೆ 38ಸಾವಿರ ಕೋಟಿ ರೂ. ನಷ್ಟ ಆಗಿದೆ ಎಂದು ಕೇಂದ್ರಕ್ಕೆ ವರದಿ ನೀಡಲಾಗಿತ್ತು. ಈ ಪೈಕಿ ತುರ್ತಾಗಿ3800 ಕೋಟಿ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿತ್ತು.   ಆದ್ರೆ ಕೇಂದ್ರ ಸರ್ಕಾರ ಸದ್ಯಕ್ಕೆ 1200 ಕೋಟಿ ರೂ. ಮಧ್ಯಂತರ ಪರಿಹಾರವನ್ನು ಮಾತ್ರ ಘೋಷಣೆ ಮಾಡಿದೆ.

ಬಿಹಾರ ಪ್ರವಾಹದ ಬಗ್ಗೆ ಪ್ರಧಾನಿ ಟ್ವೀಟ್​ ಮಾಡಿದ ಬಳಿಕ ರಾಜ್ಯದ ಕೆಂಗಣ್ಣಿಗೆ ಬಿಜೆಪಿ ಗುರಿಯಾಗಿತ್ತು.ರಾಜ್ಯದ ವಿರುದ್ಧ ಬಿಜೆಪಿ ಮಲತಾಯಿ ಧೋರಣೆ ತೋರುತ್ತಿದೆ ಎಂದು ಜನರು ಆಕ್ರೋಶ  ವ್ಯಕ್ತಪಡಿಸಿದ್ದರು. ಇದರ ನಡುವೆ ರಾಜ್ಯ ಸರ್ಕಾರ ಪ್ರವಾಹದ ನಷ್ಟ ಕುರಿತು ಸಲ್ಲಿಸಿದ್ದ ವರದಿಯನ್ನು ಇಂದು ಬೆಳಗ್ಗೆ ತಿರಸ್ಕರಿಸಿ ಮತ್ತೊಮ್ಮೆ  ಪರಿಶೀಲಿಸಿ ವರದಿ ಸಲ್ಲಿಸಿ ಎಂದು ಹೇಳಿತ್ತು. ಇದು ರಾಜ್ಯದ ಜನರ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಇನ್ನೇನು ಜನರು ಬೀದಿಗಿಳಿಯಲು ಸಜ್ಜಾಗುತ್ತಿದ್ದಂತೆಯೇ ಕೇಂದ್ರ ಸರ್ಕಾರ ಮಧ್ಯಂತರ ಪರಿಹಾರ ಘೋಷಣೆ ಮಾಡಿ ಬೀಸೋ ದೊಣ್ಣೆಯಿಂದ ಪಾರಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ಟೊಮೊಟೋದಲ್ಲಿದೆ ಸನ್ ಟ್ಯಾನ್ ಕಡಿಮೆ ಮಾಡುವ ಗುಣಗಳು..!ತಿಳಿಯಲು ಈ ಲೇಖನ ಓದಿ…

    ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.

  • ಕ್ರೀಡೆ

    ಐಪಿಎಲ್ ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ!ವೇಳಾಪಟ್ಟಿ ಪ್ರಕಟ..ಮೊದಲ ಮ್ಯಾಚ್ RCB ವರ್ಸಸ್.?

    ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ. ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ,…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ ಕೃಷ್ಣ ಜನ್ಮಾಷ್ಟಮಿಯ ಈ ದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…

  • ದೇಗುಲ ದರ್ಶನ, ಸುದ್ದಿ

    ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿ ಜಾತ್ರ ಮಹೋತ್ಸವಕ್ಕೆ ಕ್ಷಣಗಣನೆ- ಯಾವಾಗ?ಇಲ್ಲಿದೆ ಸಂಪೂರ್ಣ ಮಾಹಿತಿ…

    ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಒಟ್ಟು 13 ದಿನ ನಡೆಯಲಿದೆ. ಅಶ್ವೀಜಮಾಸದ ಮೊದಲ ಗುರುವಾರ ಮಧ್ಯಾಹ್ನ12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತ ಸಾಗರಹರಿದು ಬರಲಿದೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು…

  • ಆಧ್ಯಾತ್ಮ

    ಮಹಿಳೆಯರು ತೆಂಗಿನ ಕಾಯಿ ಒಡೆಯಬಾರದು ಏಕೆ ಗೊತ್ತಾ?ಇಲ್ಲಿದೆ ನೋಡಿ ಕಾರಣ…

    ಹಿಂದೂ ಸಂಸ್ಕೃತಿಯಲ್ಲಿ ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡುವಂತಿಲ್ಲ. ಇದಕ್ಕೆ ಸಾಕಷ್ಟು ಬಾರಿ ವಿರೋಧವೂ ವ್ಯಕ್ತವಾಗುತ್ತದೆ. ತಲೆ-ಬುಡವಿಲ್ಲದೆ ಶಾಸ್ತ್ರಗಳನ್ನು ಮಾಡ್ತಾರೆಂದು ಕೆಲವರು ಆರೋಪ ಮಾಡ್ತಾರೆ. ಆದ್ರೆ ಹಿಂದೂ ಸಂಸ್ಕೃತಿಯಲ್ಲಿ ಅದಕ್ಕೆ ಸೂಕ್ತ ಕಾರಣಗಳನ್ನೂ ಹೇಳಲಾಗಿದೆ. ಮಹಿಳೆಯರು ಮಾಡಬಾರದ ಕೆಲಸಗಳಲ್ಲಿ ತೆಂಗಿನಕಾಯಿ ಒಡೆಯುವುದು ಒಂದು. ಹೌದು, ಹಿಂದೂ ಸಂಸ್ಕೃತಿ ಪ್ರಕಾರ ತೆಂಗಿನ ಕಾಯಿಯನ್ನು ಮಹಿಳೆಯರು ಒಡೆಯಬಾರದು. ಹಿಂದೂ ಧರ್ಮದ ಪ್ರಕಾರ ತೆಂಗಿನ ಕಾಯಿ ಪವಿತ್ರವೆಂದು ಪರಿಗಣಿಸಲಾಗಿದೆ. ಶುಭ ಸಮಾರಂಭಗಳಲ್ಲಿ ತೆಂಗಿನ ಕಾಯಿಯನ್ನು ಬಳಸಲಾಗುತ್ತದೆ. ಯಾವುದೇ ಹೊಸ ಕೆಲಸ ಆರಂಭಿಸುವಾಗ ತೆಂಗಿನ…

  • budget, karnataka

    6ನೇ ವೇತನ ಆಯೋಗದ ಗಾಳಿಸುದ್ದಿಗೆ ಕಿವಿ ಕೊಡಬೇಡಿ – ಇಲ್ಲಿದೆ ನಿಜವಾದ ಭಜೆಟ್ನ ಸುದ್ದಿ

    ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.