ಸಿನಿಮಾ

ಮಾರುವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್ ನೋಡಿದ ಸ್ಟಾರ್ ನಟ..!ಅಲ್ಲಿ ದರ್ಶನ್ ಫ್ಯಾನ್ ಆಡಿದ ಮಾತು ಕೇಳಿ ಕಣ್ಣಿರಿ ಟ್ಟರು..!

414

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್‍ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ.

ನವರಸ ನಾಯಕ ಜಗ್ಗೇಶ್​ ಅವರು ಮಾರು ವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್​ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.
ನಟ ಜಗ್ಗೇಶ್ ಅವರು ಲುಂಗಿ, ಹವಾಯಿ ಚಪ್ಪಲಿ ಮತ್ತು ಮಂಕಿ ಕ್ಯಾಪ್ ಧರಿಸಿಕೊಂಡು ಚಿತ್ರಮಂದಿರಕ್ಕೆ ಹೋಗಿ ಯಾರಿಗೂ ಗುರುತು ಸಿಗದಂತೆ ‘ಕೆಜಿಎಫ್’ ಚಿತ್ರ ನೋಡಿದ್ದಾರೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮಾಡಿ ಹೇಳಿಕೊಂಡಿದ್ದಾರೆ.

ಜಗ್ಗೇಶ್ ಅವರು, “ಲುಂಗಿ, ಹವಾಯ್ ಚಪ್ಪಲಿ ಮತ್ತು ಮಂಕಿಕ್ಯಾಪ್ ಹಾಕಿ ಬಹಳ ದಿನದ ನಂತರ ಒಬ್ಬನೆ ಮುಂದಿನ ಕ್ಲಾಸ್‍ಗೆ ಹೋಗಿ ಕೆಜಿಎಫ್ ನೋಡಿದೆ. 38 ವರ್ಷದ ಹಿಂದೆ ನಾನು ಹೀಗೆ ಸಿನಿಮಾಗೆ ಹೋಗುತ್ತಿದ್ದೆ. ಸಾಮಾನ್ಯ ಜೀವನ ಎಂಜಾಯ್ ಮಾಡಲು ಹಾಗೆ ಹೋದದ್ದು.

ಸಿನಿಮಾ ಇಂಟರ್ ವಲ್‍ನಲ್ಲಿ ಕಾರಾಪುರಿ ತಿಂದು, ಟೀ ಕುಡಿದೆ ಮಜ ನೀಡಿತು. ಯಾರು ಗುರುತು ಹಿಡಿಯದಂತೆ ಜಾಗ್ರತೆ ವಹಿಸಿದೆ. ಕಾರಣ ಏಕಾಂತವಾಗಿ ಸಂತೋಷದಿಂದ ಇರಲು ಈ ರೀತಿಯಾಗಿ ಮಾಡಿದೆ” ಎಂದು ಟ್ವೀಟ್ ಮಾಡಿದ್ದಾರೆ.

2ಅಕ್ಷರದ ನಟ 3ಅಕ್ಷರದ ಮನಗಳ 2ಅಕ್ಷರದಿಂದ ಕಲಾಸೇವೆಯಲ್ಲಿ ಸಾರ್ಥಕ ಸಾಧನೆ ಮಾಡಿಬಿಟ್ಟ #hatsoff dear.. “ಯಶ್ ಕನ್ನಡ ಮನಗಳ ಖುಷಿ ಪಡಿಸಿದ” ನಿರ್ದೇಶಕ #neel ನೀನು ಅಸಮಾನ್ಯ ಪ್ರತಿಭೆ..ಕನ್ನಡವೆಂದರೆ ಇದ್ದ ತಾತ್ಸಾರ ಮನಸ್ಥಿತಿ ಬದಲಾಗುವಂತೆ ಮಾಡಿಬಿಟ್ಟಿರಿ..#hombalefilms ನಿಮ್ಮ ಎದೆಗಾರಿಕೆಗೆ ನನ್ನ ಸಲಾಂ.. #Kgf ನೋಡಿ ಖುಷ್ ಆದೆ..’

ನನ್ನಪಕ್ಕ ಸುಮಾರು 17ಪ್ರಾಯದ ಹುಡುಗ ಹೋಟೆಲ್ ಸರ್ವರ್ ಕೂತಿದ್ದ! ಅವನಜೊತೆ ದ್ವನಿಬದಲಾಯಿಸಿ ನಡುನಡುವೆ ಚರ್ಚಿಸುತ್ತಿದೆ ಪ್ರತಿಪ್ರಶ್ನೆಗೆ ಅವನ ಉತ್ತರ ಚಿಂದಿಅನ್ನುತ್ತಿದ್ದ!ಅವನು ಪಕ್ಕ ದರ್ಶನ #fan ಅಂತೆ!ಅವನು ಹೇಳಿದ ಮಾತು ಕಣ್ಣುಒದ್ದೆಯಾಯಿತು!ಕನ್ನಡ ಗೆಲ್ಲಬೇಕು ಸಾರ್ ಮಗಂದು ಬರಿ ಬೇರೆ ಭಾಷೆಗೆ ಜೈಅಂತಾರೆ ಈಗ ಅವರ ಪುಂಗಿಬಂದ್ ಅಂದ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಶುಂಠಿ ನೀರನ್ನು ಕುಡಿಯೋದ್ರಿಂದ ಆಗೋ ಪ್ರಯೋಜನಗಳನ್ನು ಕೇಳಿದ್ರೆ ಈಗ್ಲೇ ಕುಡಿಯೋದಕ್ಕೆ ಸ್ಟಾರ್ಟ್ ಮಾಡ್ತೀರಾ..!

    ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…

  • ಜೀವನಶೈಲಿ

    ಮಹಿಳೆಯರು ಕಾಲುಂಗುರವನ್ನು ದರಿಸುವುದರಿಂದ ಆಗುವ ಉಪಯೋಗಗಳು ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.

  • ಸಿನಿಮಾ

    ಆ್ಯಕ್ಷನ್ ಪ್ರಿನ್ಸ್ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡುತ್ತಿರುವುದೇಕೆ ಗೊತ್ತಾ?ಆ ಬಂಗಲೆಯ ಬಾಡಿಗೆ ಎಷ್ಟು ಗೊತ್ತಾ!

    ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್‍ವುಡ್‍ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…

  • ಸುದ್ದಿ

    ಮಾರಕ ಕಾಯಿಲೆಯಾದ ಏಡ್ಸ್ ಮತ್ತು ಕ್ಯಾನ್ಸರ್‌ಗೆ ಔಷಧಿಯನ್ನು ಕಂಡುಹಿಡಿದು ಎಲ್ಲರ ಮೆಚ್ಚುಗೆ ಪಡೆದ ರೈತ…!

    ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್‌ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…

  • inspirational

    ಹವಾ ಮಹಲ್

      ಇದು ಭಾರತದ ಜೈಪುರ್‌ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…