ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ.
ನವರಸ ನಾಯಕ ಜಗ್ಗೇಶ್ ಅವರು ಮಾರು ವೇಷದಲ್ಲಿ ಥಿಯೇಟರ್ಗೆ ಹೋಗಿ ಕೆಜಿಎಫ್ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ ಚಪ್ಪಲಿ ಮತ್ತು ಮಂಕಿ ಕ್ಯಾಪ್ ಧರಿಸಿಕೊಂಡು ಚಿತ್ರಮಂದಿರಕ್ಕೆ ಹೋಗಿ ಯಾರಿಗೂ ಗುರುತು ಸಿಗದಂತೆ ‘ಕೆಜಿಎಫ್’ ಚಿತ್ರ ನೋಡಿದ್ದಾರೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮಾಡಿ ಹೇಳಿಕೊಂಡಿದ್ದಾರೆ.
ಜಗ್ಗೇಶ್ ಅವರು, “ಲುಂಗಿ, ಹವಾಯ್ ಚಪ್ಪಲಿ ಮತ್ತು ಮಂಕಿಕ್ಯಾಪ್ ಹಾಕಿ ಬಹಳ ದಿನದ ನಂತರ ಒಬ್ಬನೆ ಮುಂದಿನ ಕ್ಲಾಸ್ಗೆ ಹೋಗಿ ಕೆಜಿಎಫ್ ನೋಡಿದೆ. 38 ವರ್ಷದ ಹಿಂದೆ ನಾನು ಹೀಗೆ ಸಿನಿಮಾಗೆ ಹೋಗುತ್ತಿದ್ದೆ. ಸಾಮಾನ್ಯ ಜೀವನ ಎಂಜಾಯ್ ಮಾಡಲು ಹಾಗೆ ಹೋದದ್ದು.
ಸಿನಿಮಾ ಇಂಟರ್ ವಲ್ನಲ್ಲಿ ಕಾರಾಪುರಿ ತಿಂದು, ಟೀ ಕುಡಿದೆ ಮಜ ನೀಡಿತು. ಯಾರು ಗುರುತು ಹಿಡಿಯದಂತೆ ಜಾಗ್ರತೆ ವಹಿಸಿದೆ. ಕಾರಣ ಏಕಾಂತವಾಗಿ ಸಂತೋಷದಿಂದ ಇರಲು ಈ ರೀತಿಯಾಗಿ ಮಾಡಿದೆ” ಎಂದು ಟ್ವೀಟ್ ಮಾಡಿದ್ದಾರೆ.
2ಅಕ್ಷರದ ನಟ 3ಅಕ್ಷರದ ಮನಗಳ 2ಅಕ್ಷರದಿಂದ ಕಲಾಸೇವೆಯಲ್ಲಿ ಸಾರ್ಥಕ ಸಾಧನೆ ಮಾಡಿಬಿಟ್ಟ #hatsoff dear.. “ಯಶ್ ಕನ್ನಡ ಮನಗಳ ಖುಷಿ ಪಡಿಸಿದ” ನಿರ್ದೇಶಕ #neel ನೀನು ಅಸಮಾನ್ಯ ಪ್ರತಿಭೆ..ಕನ್ನಡವೆಂದರೆ ಇದ್ದ ತಾತ್ಸಾರ ಮನಸ್ಥಿತಿ ಬದಲಾಗುವಂತೆ ಮಾಡಿಬಿಟ್ಟಿರಿ..#hombalefilms ನಿಮ್ಮ ಎದೆಗಾರಿಕೆಗೆ ನನ್ನ ಸಲಾಂ.. #Kgf ನೋಡಿ ಖುಷ್ ಆದೆ..’
ನನ್ನಪಕ್ಕ ಸುಮಾರು 17ಪ್ರಾಯದ ಹುಡುಗ ಹೋಟೆಲ್ ಸರ್ವರ್ ಕೂತಿದ್ದ! ಅವನಜೊತೆ ದ್ವನಿಬದಲಾಯಿಸಿ ನಡುನಡುವೆ ಚರ್ಚಿಸುತ್ತಿದೆ ಪ್ರತಿಪ್ರಶ್ನೆಗೆ ಅವನ ಉತ್ತರ ಚಿಂದಿಅನ್ನುತ್ತಿದ್ದ!ಅವನು ಪಕ್ಕ ದರ್ಶನ #fan ಅಂತೆ!ಅವನು ಹೇಳಿದ ಮಾತು ಕಣ್ಣುಒದ್ದೆಯಾಯಿತು!ಕನ್ನಡ ಗೆಲ್ಲಬೇಕು ಸಾರ್ ಮಗಂದು ಬರಿ ಬೇರೆ ಭಾಷೆಗೆ ಜೈಅಂತಾರೆ ಈಗ ಅವರ ಪುಂಗಿಬಂದ್ ಅಂದ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.