ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ
ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು.
ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ ಸೆಳೆದರು.

ತೆಪ್ಪೋತ್ಸವದ ಜತೆಗೆ ವಿಶಾಲಾಕ್ಷಿ ಸಮೇತ ಕಾಶಿ ವಿಶ್ವೇಶ್ವರ ಸ್ವಾಮಿಯ ಕಲ್ಯಾಣೋತ್ಸವವನ್ನು ಸಹಾ ಏರ್ಪಡಿಸಿದ್ದು, ಜನರನ್ನು ಭಕ್ತಿಸಾಗರದಲ್ಲಿ ಮುಳುಗಿಸಿತ್ತು.
ಚಳಿಯ ನಡುವೆಯೂ ಅಂತರ0ಗೆಯ ಕ್ಷೇತ್ರವನ್ನು ಒಂದು ಸಾವಿರ ಕೆಜಿ ಎಣ್ಣೆ ಹಾಕಿ ಲಕ್ಷಾಂತರ ಹಣತೆಗಳಿಂದ ಬೆಳಗಿಸಿದ್ದು, ವಿಶೇಷ ಹೂವಿನ ಅಲಂಕಾರವನ್ನು ನಡೆಸಿದ್ದು, ಕಲ್ಲು ಬಸವನ ಬಾಯಿಂದ ಸದಾ ನೀರು ಜಿನುಗುವ ಅಂತರ0ಗೆ ದೇವಾಲಯದ ಕಲ್ಯಾಣಿಯಲ್ಲಿ ತೆಪ್ಪೋತ್ಸವವನ್ನು ನಡೆಸಿದ್ದು ನೆರೆದಿದ್ದ ಸಹಸ್ರಾರು ಭಕ್ತರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಯಿತು.

ವಿಶಿಷ್ಟ ರೀತಿಯಲ್ಲಿ
ಶಿವನಿಗೆ ಅಲಂಕಾರ
ಪ್ರತಿ ವರ್ಷವೂ ಕಾಶಿ ವಿಶ್ವೇಶ್ವರಸ್ವಾಮಿಗೆ ಹೂವಿನ ಅಲಂಕಾರ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಇಡೀ ಗರ್ಭಗುಡಿಯನ್ನು ಕೈಲಾಸ,ಹಿಮ ಪರ್ವತದಂತೆ ಅಲಂಕರಿಸಲಾಗಿದ್ದು, ಗೌರಿಶಂಕರ ಶಿಖರದಲ್ಲಿ ಶಿವನು ಕುಳಿತಂತೆ ಮಾಡಿದ್ದು, ಜನತೆ ಶ್ರದ್ದಾಭಕ್ತಿಗಳಿಂದ ನಮಿಸಿ ಸಂಭ್ರಮಿಸಿದರು.
ಶಿವ ಲಕ್ಷ ದೀಪೋತ್ಸವ, ತೆಪ್ಪೋತ್ಸವಕ್ಕೆ ನಾದಸ್ವರ ಮತ್ತು ಸ್ಯಾಕ್ಯೋಫೋನ್ ವಾದನದ ಹಿಮ್ಮೇಳ ಗಮನ ಸೆಳೆಯಿತು.
ಮಧ್ಯರಾತ್ರಿ 1 ಗಂಟೆಯವರೆಗೂ ನಡೆದ ನಾದಸ್ವರ ಮತ್ತಿತರ ಕಾರ್ಯಕ್ರಮಗಳು ಭಕ್ತರನ್ನು ರಂಜಿಸಿದ್ದು, ಇಡೀ ಅಂತರಗ0ಗೆ ಹಣತೆಗಳಿಂದ ಕಂಗೊಳಿಸುತ್ತಿತ್ತು.
ಸ0ಜೆ ಆರು ಗಂಟೆಯಿ0ದಲೂ ಅಂತರ0ಗೆ ಬೆಟ್ಟದತ್ತ ತೆರಳಿದ ಭಕ್ತರ ಸಮೂಹವನ್ನು ನಿಯಂತ್ರಿಸುವಲ್ಲಿ ಪೊಲೀಸರು ಸಹಕರಿಸಿದರೆ, ಶಿವ ಲಕ್ಷ ದೀಪೋತ್ಸವದಲ್ಲಿ ಪಾಲ್ಗೊಂಡ ಎಲ್ಲಾ ಭಕ್ತಾಗಳಿಗೂ ಪ್ರಸಾದ ವಿನಿಯೋಗಿಸಲಾಯಿತು.
ಇಡೀ ರಾತ್ರಿ ಅಂತರಗ0ಗೆ ಬೆಟ್ಟದ ತಪ್ಪಲಿನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿ, ಜಾತ್ರೆಯ ಕಳೆ ಕಂಡು ಬಂತು. 
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಏಪ್ರಿಲ್, 2019) ನೀವು ಜೀವನವನ್ನು ಸಂತೋಷದಿಂದ ಅನುಭವಿಸಲು ಸಿದ್ಧವಾಗುತ್ತಿದ್ದ ಹಾಗೆ ನಿಮಗೆ ಸಂತೋಷ ಹಾಗೂ ಆನಂದ. ಇಂದು…
ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್ ಆ್ಯಪ್ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ 6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್ ಆಫ್ ಕಂಪನೀಸ್‌ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…
ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…
ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….
ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…