ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು.
ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ, ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ಎಲ್ಲರಲ್ಲೂ ಆಶ್ಚರ್ಯ ಮೂಡಿಸಿದೆ. ಹೋಮ ಕುಂಡದ ಸುತ್ತಲೂ ಬಗೆಬಗೆಯ ಹಣ್ಣುಗಳಿದ್ದರೂ ಯಾವುದನ್ನೂ ತಿನ್ನದೆ ಪ್ರಸಾದ ಸೇವಿಸಿದೆ.
ನಂತರ ಉದ್ಧರಣೆಯಿಂದ ನೀರು ನೀಡಿದಾಗ ಕೈ ತೊಳೆದುಕೊಂಡು ಯಾರಿಗೂ ತೊಂದರೆ ಕೊಡದೆ ಮನೆಯಿಂದ ಹೊರಹೋಗಿದೆ. ಈ ದೃಶ್ಯವನ್ನು ಕಣ್ಣಾರೆ ಕಂಡ ನೆರೆದಿದ್ದವರು ಮಂಗ ಹಣ್ಣನ್ನ ಬಿಟ್ಟು ಮೊಸರನ್ನ ತಿಂದು ಕೈತೊಳೆದುಕೊಂಡು ವಾಪಸ್ಸಾಗಿದ್ದನ್ನು ಕಂಡು ಆಶ್ಚರ್ಯಕ್ಕೀಡಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…
ಮೆರಿನಾ ಗಾರ್ಡನ್ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್ಗೆ ಸ್ಲಮ್ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್ ಕಂಪ್ಲೇಂಟ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ.
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.
ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು. ಅಮಾನತಿನ…
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಜಿಯೋ ಕಂಪನಿ ಫ್ರೀ ಫೋನ್ ಕೊಡುವುದಾಗಿ ಹೇಳಿದ ದಿನವೇ, ಎಲ್ಲರಲ್ಲೂ ಮೂಡಿದ ಪ್ರಶ್ನೆ ಏನಂದರೆ ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದೆಂದು? ಅಂದರೆ ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ.