ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ.
ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ.
ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ ಹೊರಡುವುದಿಲ್ಲ.
ಕೊತ್ತಂಬರಿ ಬೀಜ ಮತ್ತು ಒಣಶುಂಠಿಯ ಕಷಾಯ ತಯಾರಿಸಿ ಕುಡಿಯುವುದರಿಂದ ಹೊಟ್ಟೆ ಉಬ್ಬರ, ಅಜೀರ್ಣ ಹೊಟ್ಟೆನೋವು ಈ ದೋಷಗಳು ಗುಣವಾಗುವವು.
ಕೊತ್ತಂಬರಿಯಲ್ಲಿ ಪಿತ್ತಶಾಮಕ ದಾಹಶಾಮಕ ಜೀರ್ಣಕಾರಕ ಕಫ್ ನಾಶಕ ಗುಣವಿರುವುದು. ಆದುದರಿಂದ ಪಿತ್ತ ವಿಕಾರಗಳನ್ನು ಶಾಂತಗೊಳಿಸಲು, ಬಾಯಾರಿಕೆ ಹೋಗಲಾಡಿಸಲು, ಜೀರ್ಣಶಕ್ತಿ ಹೆಚ್ಚಿಸಲು ಕೆಮ್ಮು ಮತ್ತು ದಮ್ಮು ನಿವಾರಿಸಲು ಕೊತ್ತಂಬರಿ ಉಪಯೋಗಿಸಬಹುದು.
ಕೊತ್ತಂಬರಿ ಬೀಜದ ಚೂರ್ಣವನ್ನು ಜೇನುತುಪ್ಪದಲ್ಲಿ ಕಲಿಸಿ ನಾಲಿಗೆಯ ಮೇಲೆ ಹಚ್ಚಿಕೊಂಡು ಚಪ್ಪರಿಸುವುದರಿಂದ ಬಾಯಿಹುಣ್ಣು ಗುಣವಾಗುವುದು.