ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷ ಶಾಲಾ ಆವರಣದಲ್ಲಿ 150 ಗಿಡ ನೆಡುತ್ತೇವೆ, ಆದರೆ ದನಗಳು ದಾಳಿನಡೆಸಿ ಎಲ್ಲವೂ ಹಾಳಾಗುತ್ತವೆ. ಹಾಗಾಗಿ,ಶಾಲೆಗೆ ಕಾಂಪೌಂಡ್ ಕಟ್ಟಿಸಲು ಮೊದಲ ಆದ್ಯತೆ ನೀಡುತ್ತೇನೆ..’ನಟ ಪುನೀತ್ ರಾಜ್ಕುಮಾರ್ ನಡೆಸಿಕೊಡುವ ರಿಯಾಲಿಟಿ ಶೋ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಭಾಗವಹಿಸಿ 6.4 ಲಕ್ಷ ರೂ. ಗೆದ್ದ ತಾಲೂಕಿನ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆ.ಎನ್. ತೇಜಸ್ ಅವರ ಮನದಾನದ ಮಾತುಗಳಿವು.

ರಿಯಾಲಿಟಿ ಶೋಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನಡೆಸಿದ ಪರೀಕ್ಷೆ ಬರೆದು ಆಯ್ಕೆಯಾದ ವಿದ್ಯಾರ್ಥಿ ತೇಜಸ್ ಜಿಲ್ಲೆಗೆ ಕೀರ್ತಿತಂದಿದ್ದಾನೆ. ಕಟ್ಟಾಯ ಶಾಲೆಗೆ ಭೇಟಿ ನೀಡಿದ್ದ ಕೋಟ್ಯಧಿಪತಿ ತಂಡ ಎಲ್ಲ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತ್ತು. ಹೆಚ್ಚು ಅಂಕಗಳಿಸಿದ ತೇಜಸ್, ನಟ ಪುನೀತ್ ರಾಜ್ಕುಮಾರ್ ಎದುರಿಗೆ ಹಾಟ್ ಸಿಟ್ನಲ್ಲಿ ಕುಳಿತು 15ರಲ್ಲಿ11 ಪ್ರಶ್ನೆಗೆ ಸರಿ ಉತ್ತರ ನೀಡಿ ಹಣ ಗೆದ್ದಿರುವುದು ಮಾತ್ರವಲ್ಲದೆ ತನ್ನ ಶಾಲೆಯ ಮೇಲಿನ ಪ್ರೀತಿ ವ್ಯಕ್ತಪಡಿಸಿ ಜನರ ಮನ ಗೆದ್ದಿದ್ದಾನೆ.ತೇಜಸ್ ಕೋಟ್ಯಧಿಪತಿ ಹಾಟ್ ಸೀಟ್ಗೆ ಏರಿದ್ದು ಶಾಲೆಯ ಶಿಕ್ಷಕರಿಗೆಲ್ಲ ಅತೀ ವಸಂತಸ ತಂದಿದೆ.

ಡಾಕ್ಟರ್ ಆಗುವ ಆಸೆ: ನಾನು ಗೆದ್ದಿರುವ 6.4 ಲಕ್ಷರೂಪಾಯಿಯಲ್ಲಿ ಅಕ್ಕನ ಮದುವೆ ಮಾಡುತ್ತೇನೆ ಹಾಗೂ ಶಾಲೆಯ ಕಾಂಪೌಂಡ್ ಕಟ್ಟಿಸುತ್ತೇನೆ ಎನ್ನುತ್ತಾನೆ ವಿದ್ಯಾರ್ಥಿ ತೇಜಸ್. ಬಡ ಕುಟುಂಬದಲ್ಲೇ ಬೆಳೆದ ನಾನು ಲಕ್ಷಾಂತರ ರೂಪಾಯಿ ನೋಡುತ್ತಿರುವುದು ಇದೇ ಮೊದಲು. ಭವಿಷ್ಯದಲ್ಲಿ ಡಾಕ್ಟರ್ ಆಗಬೇಕೆಂಬ ಕನಸು ಕಂಡಿದ್ದೇನೆ.

ಕನ್ನಡದ ಕೋಟ್ಯಧಿಪತಿ ಮೂಲಕ ರಾಜ್ಯಾದ್ಯಂತ ಪರಿಚಿತನಾಗಲು ಸಹಕರಿಸಿದ ಶಾಲೆಯ ಎಲ್ಲ ಶಿಕ್ಷಕರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ತೇಜಸ್ ಹೇಳಿದ್ದಾನೆ.ತಂದೆ ನಂಜಪ್ಪ ಕೃಷಿ ಕೆಲಸಮಾಡಿಕೊಂಡಿದ್ದು, ತಾಯಿ ಗೌರಮಣಿ ಸರ್ಕಾರಿ ಶಾಲೆಯಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿ ತೇಜಸ್ ಬುದ್ಧಿವಂತ. ಸರ್ಕಾರಿ ಶಾಲೆ ಮೇಲಿನ ಆತನ ಪ್ರೀತಿ ಮೆಚ್ಚುವಂಥದ್ದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು…
ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…
ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮ ಭಾರತ. ಇಲ್ಲಿ ಪ್ರತಿ ಕಿಲೋಮೀಟರ್ ಗೂ ನಮ್ಮ ಸಂಸ್ಕೃತಿ , ಸಂಪ್ರದಾಯ, ಭಾಷೆ , ಪದ್ಧತಿ ಬದಲಾಗುತ್ತ ಹೋಗುತ್ತದೆ. ಇಲ್ಲಿ ಪ್ರತೀ ರಾಜ್ಯಕ್ಕೂ ತನ್ನದೇ ಆದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಕಲೆ , ಆಚಾರ ವಿಚಾರಗಳು ಇವೆ. ಅಂತೆಯೇ ತನ್ನದೇ ಆದ ವಿಶಿಷ್ಟ ಅಡುಗೆ ಶೈಲಿಗಳನ್ನು ಈ ರಾಜ್ಯಗಳು ಹೊಂದಿವೆ. ಇಡ್ಲಿ , ವಡೆ, ಮಸಾಲ ದೋಸೆ ತಮಿಳು ನಾಡಿನಲ್ಲಿ ಸುಪ್ರಸಿದ್ದ. ಈ ತಿಂಡಿಗಳ ಹೆಸರು ಕೇಳಿದೊಡನೆಯೇ ಹೊರ ಜನರಿಗೆ…
ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.
ಚೆನ್ನೈನ 65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿರುವ ಮನಕಲಕುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ವಾಸಿಸಲು ಮನೆ ಇಲ್ಲದ ಕಾರಣದಿಂದಾಗಿ ಕರುಪ್ಪಾಯಿ ಅವರು ಶೌಚಾಲಯದ ಕೋಣೆಯಲ್ಲೇ ವಾಸವಾಗಿದ್ದಾರೆ. ವೃದ್ಧೆ ಕರುಪ್ಪಾಯಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿ ಅದರಿಂದ ಬರುವ ಹಣದಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವೃದ್ಧೆ, ಹಿರಿಯ ನಾಗರಿಕ ಪಿಂಚಣಿಗಾಗಿ ನಾನು ಅನೇಕ ಬಾರಿ ಅರ್ಜಿ ಸಲ್ಲಿಸಿದ್ದೇನೆ. ಅದು ಆಗದಿದ್ದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ….
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.