ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಗಾವಿ, ಚಿಕ್ಕೋಡಿ, ರಾಯಚೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಕೃಷ್ಣಾ ನದಿ ವ್ಯಾಪ್ತಿಯಲ್ಲಿರುವ ಬರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ಜಲಾವೃತವಾಗಿದ್ದು, ಕಾರು ಬೈಕ್‍ಗಳು ಆಟಿಕೆಯಂತಾಗಿವೆ, ಆದರೂ ಕೂಡ ವಾಹನ ಸವಾರರು ಮಾತ್ರ ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ.
ಬೆಳಗಾವಿಯ ದೆಸೂರು-ಖಾನಾಪೂರ ಮಧ್ಯೆ ಇರುವ ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೀರು ತುಂಬಿ ಹರಿಯುತ್ತಿದ್ದರೂ ಕೂಡ ವಾಹನ ಸವಾರರು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ವೇಗದಿಂದ ಹರಿಯುತ್ತಿರುವ ನೀರನ್ನೇ ಲೆಕ್ಕಿಸದೇ ವಾಹನ ಸವಾರರು ಕೊಳ್ಳ ದಾಟುತ್ತಿದ್ದಾರೆ. ಸ್ಥಳದಲ್ಲಿ ಯಾವುದೇ ಪೋಲಿಸರು ಇಲ್ಲದೆ ವಾಹನಸಾವರರು ಈ ರೀತಿ ಮಾಡುತ್ತಿದ್ದಾರೆ. ಕೂಡಲೇ ಅಪಾಯದ ಮಟ್ಟ ಮೀರಿ ನೀರು ಹರಿಯುವ ಸ್ಥಳಗಳಲ್ಲಿ ಪೋಲಿಸರನ್ನು ನಿಯೋಜಿಸುವಂತೆ ಜನರು ಒತ್ತಾಯಿಸಿದ್ದಾರೆ. ಅಲ್ಲದೆ ಜಿಲ್ಲಾಡಳಿತ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುನ್ನಚ್ಚರಿಕೆ ಕ್ರಮ ವಹಿಸಬೇಕಾಗಿದೆ.
ಇತ್ತ ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆ ಮುಂದುವರಿದಿದೆ. ಹೀಗಾಗಿ ಚಿಕ್ಕೋಡಿ ತಾಲೂಕಿನ ವೇದಗಂಗಾ, ಧೂಧಗಂಗಾ ಮತ್ತು ಕೃಷ್ಣಾ ನದಿ ನೀರಿನಲ್ಲಿ ಭಾರೀ ಏರಿಕೆಯಾಗಿದೆ. ಕೃಷ್ಣಾ ನದಿ ನೀರಿನ ಒಳಹರಿವು ಸುಮಾರು 1,09,211 ಲಕ್ಷ ಕ್ಯೂಸೆಕ್ ಆಗಿದ್ದು, ಹಿಪ್ಪರಗಿ ಜಲಾಶಯದಿಂದ 97,300 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಮಳೆಯಿಂದ 6 ಕೆಳ ಹಂತದ ಸೇತುವೆಗಳು ಜಲಾವೃತಗೊಂಡಿವೆ.
ಕೃಷ್ಣಾ ನದಿಯ ಕಲ್ಲೋಳ-ಯಡೂರು, ದೂಧಗಂಗಾ ನದಿಯ ಕಾರದಗಾ-ಭೋಜ, ಮಲಿಕವಾಡ-ದತ್ತವಾಡ, ವೇದಗಂಗಾ ನದಿಯ ಭೋಜವಾಡಿ-ಕುನ್ನೂರು, ಜತ್ರಾಟ-ಭಿವಶಿ, ಅಕ್ಕೋಳ -ಸಿದ್ನಾಳ ಸೇತುವೆಗಳು ಮುಳುಗಡೆಯಾಗಿವೆ. ಅಪಾಯದ ಮಟ್ಟ ಮೀರಿ ನದಿ ನೀರು ಹರಿಯುತ್ತಿದ್ದರೂ ಸೇತುವೆಗಳ ಮೇಲೆ ಜನರು ಸಂಚರಿಸುತ್ತಿದ್ದಾರೆ. ಅಧಿಕಾರಿಗಳ ಎಚ್ಚರಿಕೆಯ ಸಂದೇಶಕ್ಕೆ ಬೆಲೆ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಲಿಂಗಸುಗೂರಿನ ಶೀಲಹಳ್ಳಿ ಸೇತುವೆ ಮುಳುಗಡೆ ಹಂತದಲ್ಲಿದ್ದು, ದೇವದುರ್ಗಾ ತಾಲೂಕಿನ ಹೂವಿನಹಡಗಲಿ ಸೇತುವೆ ಮುಳುಗುವ ಸಾಧ್ಯತೆಯಿದೆ. ಸೇತುವೆ ಮುಳುಗಿದರೆ ಕಲಬುರಗಿ-ದೇವದುರ್ಗ ಮಧ್ಯೆ ವಾಹನ ಸಂಚಾರ ಸ್ಥಗಿತವಾಗಲಿದೆ. ಕೃಷ್ಣಾ ನದಿ ಪಾತ್ರದಲ್ಲಿ ಕಟ್ಟೆಚ್ಚರ ವಹಿಸುವಂತೆ, ನದಿಯಲ್ಲಿ ತೆಪ್ಪ ಹಾಕದಂತೆ ಸ್ಥಳೀಯರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.
ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.
ಮೆರಿನಾ ಗಾರ್ಡನ್ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್ಗೆ ಸ್ಲಮ್ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್ ಕಂಪ್ಲೇಂಟ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ.
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….