govt, ಕರ್ನಾಟಕ

ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನದಲ್ಲಿ KSRTC ವೋಲ್ವೊ ಬಸ್‌ಗೆ ಪ್ರಶಸ್ತಿ, ಯಾಕೆ ಗೊತ್ತಾ.?

51

ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್‌ಆರ್‌ಟಿಸಿ) ವೋಲ್ವೊ ಬಸ್‌ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್‌  ಕ್ಲಬ್‌ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ.

ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್‌ಗಳು ಹೆಚ್ಚಿನ ಮೈಲೇಜ್‌ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್‌ ಇಂಟರ್‌ನ್ಯಾಷನಲ್‌ನ ಅಧ್ಯಕ್ಷ ಹಕನ್‌ ಅಗ್ನೆವಾಲ್‌ ಅವರು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಬೆಂಗಳೂರು ಕೇಂದ್ರೀಯ ವಿಭಾಗದ ಒಂದು ಮಲ್ಟಿ ಆಕ್ಸಲ್‌ ವೋಲ್ವೊ ಬಸ್‌ ಮತ್ತು ಒಂದು ಸಿಂಗಲ್‌ ಆಕ್ಸಲ್‌ ವೋಲ್ವೊ ಬಸ್‌ ದುರಸ್ತಿ ಇಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿವೆ. ಇತರೆ 13 ವಾಹನಗಳು 18 ಲಕ್ಷ ಕಿ.ಮೀ. ಸಂಚರಿಸಿವೆ.

ಇವೆಲ್ಲವೂ ದೂರದ ಮಾರ್ಗಗಳಲ್ಲಿ ಓಡುತ್ತಿವೆ. ಮಂಗಳೂರು ವಿಭಾಗದ ವೋಲ್ವೊ ಬಸ್‌ 21.5 ಲಕ್ಷ, 14 ವೋಲ್ವೊ ಬಸ್‌ಗಳು 18 ಲಕ್ಷ ಮತ್ತು ಮೈಸೂರು ಗ್ರಾಮಾಂತರ ವಿಭಾಗದ 4 ವೋಲ್ವೊ ವಾಹನಗಳು 19 ಲಕ್ಷ ಕಿ.ಮೀ. ಕ್ರಮಿಸಿವೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ಮೋದಿ ವಿಚಾರದಲ್ಲಿ ಶುರುವಾದ ವಾದದಿಂದ,ಇವರ ಮದುವೆಯೇ ರದ್ದಾಯಿತು..!

    ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.

  • ಆಧ್ಯಾತ್ಮ

    ರುದ್ರಾಕ್ಷಿ ಧರಿಸುವುದರ ಹಿಂದಿದೆ ನಿಮಗೆ ಗೊತ್ತಿಲ್ಲದ ವೈಜ್ಞಾನಿಕ ಸತ್ಯ! ಹಾಗಾದ್ರೆ ರುದ್ರಾಕ್ಷಿ ಮಹತ್ವ ಏನು ಗೊತ್ತಾ???

    ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.

  • ಸಿನಿಮಾ

    ದೊಡ್ಮನೆ ಅಮ್ಮ “ಪಾರ್ವತಮ್ಮ ರಾಜ್ ಕುಮಾರ್” ವಿಧಿವಶ

    ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

  • ಸುದ್ದಿ

    ಕೋಟಿ ಕೋಟಿ ಬೆಲೆಬಾಳುವ ಕಾರುಗಳ ಯಜಮಾನ ‘ಲೂನಾ’ ದಲ್ಲಿ ಪಯಣ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್‍ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…

  • corona, Health, karnataka, ಆರೋಗ್ಯ, ಕರ್ನಾಟಕ

    ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

    ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ   ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…

    Loading

  • ಜ್ಯೋತಿಷ್ಯ

    ಗುರು ರಾಯರ ಕೃಪೆಯಿಂದ ನಿಮ್ಮ ರಾಶಿಗಳಿಗೆ ಶುಭ ಯೋಗವಿದ್ದು ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…