ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣೆಯವರೆಗೆ ತಣ್ಣಗಿದ್ದ ಆಪರೇಷನ್ ಕಮಲ ವಿಚಾರ ಮತದಾನ ಮುಗಿದ ಬಳಿಕ ತರೆಮರೆಯಲ್ಲಿ ಆರಂಭವಾಗಿದೆ ಎನ್ನಲಾಗಿದ್ದು, ಈಗ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ.
ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನ್ನಲಾಗಿದ್ದು ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಭಾನುವಾರ ಸಂಜೆ ಖಾಸಗಿ ಹೋಟೆಲ್ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ಮೊದಲ ಜೆಡಿಎಸ್ ಶಾಸಕಾಂಗ ಸಭೆ ಇದಾಗಿದೆ. ಸಭೆಯಲ್ಲಿ ಆಪರೇಷನ್ ಕಮಲದ ಬಗ್ಗೆ, ಲೋಕಸಭೆ ಕ್ಷೇತ್ರಗಳಲ್ಲಿನ ಸ್ಥಿತಿಗತಿ ಮತ್ತು ಶಾಸಕರ ಕ್ಷೇತ್ರವಾರು ಸಮಸ್ಯೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.
ರಮೇಶ್ ಜಾರಕಿಹೊಳಿ ಅವರ ಜೊತೆ ಮೈತ್ರಿ ಪಕ್ಷದ ಶಾಸಕರು ಸ್ನೇಹಿತರಾಗಿದ್ದಾರೆ. ಈ ನಿಟ್ಟಿನಲ್ಲಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಸಿಎಂ ನಿರ್ಧಾರ ಮಾಡಿದ್ದಾರೆ. ಹೀಗಾಗಿ ಶಾಸಕರು ಯಾರೂ ಯಾವುದೇ ಆಮಿಷಕ್ಕೆ ಬಲಿಯಾಗಬಾರದು. ಆಪರೇಷನ್ ಕಮಲ ಸಾಧ್ಯತೆ ಇದೆ. ಒಂದು ವೇಳೆ ಬಿಜೆಪಿಯಿಂದ ಆಫರ್ ಬಂದರೆ ತಕ್ಷಣವೇ ತಿಳಿಸಿ ಎಂದು ಸಿಎಂ ಈಗಾಗಲೇ ಶಾಸಕರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….
ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…
ಕ್ರೀಡಾ ಮತ್ತು ಕ್ರೀಡಾಕೂಟದಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಅಧಿಕೃತವಾಗಿ ಕರೆಯಲ್ಪಡುವ ರಾಜೀವ್ ಗಾಂಧಿ ಖೇಲ್ ರತ್ನ, ಇದು ಭಾರತದ ಗಣರಾಜ್ಯದ ಅತ್ಯುನ್ನತ ಕ್ರೀಡಾ ಗೌರವವಾಗಿದೆ. 1984 ರಿಂದ 1989 ರವರೆಗೆ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ. ಇದನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ವಾರ್ಷಿಕವಾಗಿ ನೀಡಲಾಗುತ್ತದೆ. ಸ್ವೀಕರಿಸುವವರನ್ನು (ಗಳು) ಸಚಿವಾಲಯವು ರಚಿಸಿದ ಸಮಿತಿಯಿಂದ ಆಯ್ಕೆಮಾಡಲಾಗುತ್ತದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ…
ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.
19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….