ಸುದ್ದಿ

ಚರ್ಚೆಗೆ ರೆಡಿ ಎಂದ ಸುಮಲತಾಗೆ ಟಾಂಗ್ ಕೊಟ್ಟ ಸಿಎಂ!ಕುಮಾರಸ್ವಾಮಿ ಹೇಳಿದ್ದೇನು?

149

ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ ಬಗ್ಗೆ ಚರ್ಚೆ ಮಾಡುತ್ತಾರೋ ಎಂದು ವ್ಯಂಗ್ಯವಾಡಿದ್ರು.

ಸುಮಲತಾ ಅವರ ಅಭಿವೃದ್ಧಿ ಏನಿದೆ ಎಂದು ಮತ್ತೆ ಪ್ರಶ್ನಿಸಿದ ಸಿಎಂ, ಅವರು ಇಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ. ಅಂಬರೀಶ್ ಸಂಸದರಾಗಿದ್ದಾಗ ಜನರ ಕಷ್ಟ-ಸುಖ ಕೇಳಿದ್ದಾರಾ. ಅಭಿವೃದ್ಧಿ ಬಗ್ಗೆ ಇವರ ಬಳಿ ನಾವು ಪಾಠ ಕಲಿಯಬೇಕಿಲ್ಲ ಎಂದು ವಾಗ್ದಾಳಿ ನಡೆಸಿದ್ರು.

ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಅಲೆ ಇದೆ. ನನಗೆ ಯಾವುದೇ ರೀತಿಯ ಆತಂಕಗಳು ಇಲ್ಲ. ಮಂಡ್ಯ ಜಿಲ್ಲೆಯ ಜನತೆ ಈಗಾಗಲೇ ತೀರ್ಮಾನ ಮಾಡಿದ್ದಾರೆ. ನಿಖಿಲ್ ಕುಮಾರಸ್ವಾಮಿಯನ್ನ ಆಯ್ಕೆ ಮಾಡಿ ಅಭಿವೃದ್ಧಿಗೆ ಚಾಲನೆ ಕೊಡುವ ದೃಷ್ಟಿಯಿಂದ ಈ ಅವಕಾಶವನ್ನು ಉಪಯೋಗ ಮಾಡಿಕೊಳ್ಳುವ ನಿರ್ಧಾರದಲ್ಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಮಗನಂತಿರುವ ದರ್ಶನ್ ಚುನಾವಣೆಯಲ್ಲಿ ನಿಂತಿರುವ ಸುಮಲಾತರವರ ಪರ ನಿಲ್ತಾರ? ದರ್ಶನ್ ಹೇಳಿದ್ದೇನು ಗೊತ್ತಾ?

    ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….

  • ಉಪಯುಕ್ತ ಮಾಹಿತಿ

    ನೀವು ಮದುವೆಯಾಗುವ ಹುಡುಗಿಯ ಕಾಲಿನ ಎರಡನೆಯ ಬೆರಳು ಉದ್ದವಿದ್ದರೆ ಏನಾಗುತ್ತದೆ ಗೊತ್ತಾ..!

    ಈಗಿನ ಕಾಲದಲ್ಲಿ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಆಲೋಚನೆಗಳನ್ನ ಇಟ್ಟುಕೊಂಡಿರುತ್ತಾರೆ, ತಾನು ಮದುವೆಯಾಗುವ ಸುಂದರವಾಗಿರಬೇಕು, ಒಳ್ಳೆಯ ಗುಣವನ್ನ ಹೊಂದಿರಬೇಕು ಮತ್ತು ಸಂಪ್ರದಾಯಸ್ಥ ಮನೆಯಿಂದ ಬರಬೇಕು ಎಂದು ಬಹಳ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ನಿರೀಕ್ಷೆಯನ್ನ ಹೊಂದಿರುತ್ತಾರೆ. ಇನ್ನು ಮುಖ್ಯವಾಗಿ ಕಾಲಿನ ಎರಡನೆಯ ಬೆರಳು ಉದ್ದವಾಗಿರುವ ಹುಡುಗಿಯರನ್ನ ಮದುವೆಯಾದರೆ ಅವರ ಜೀವನ ಹೇಗಿರುತ್ತದೆ ಮತ್ತು ಕಾಲಿನ ಬೆರಳಿನ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ ಅನ್ನುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ…

  • ಸುದ್ದಿ

    ಮೋದಿ ಹುಟ್ಟುಹಬ್ಬಕ್ಕೆ ಜೆಡಿಎಸ್ ಶಾಸಕರಿಂದ ವಿಶೇಷ ಪೂಜೆ….!

    ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…

  • ಸುದ್ದಿ

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಮನೆ ಖರೀದಿಸುವವರಿಗೆ ಬಂಪರ್ ಕೊಡುಗೆ..!ಇದನ್ನೊಮ್ಮೆ ಓದಿ..

    ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ  ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…

  • ವಿಚಿತ್ರ ಆದರೂ ಸತ್ಯ

    ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಹೇಗಾಯಿತು ಗೊತ್ತೇ? ಓದಿ ಇದನ್ನು

    ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಆಕಸ್ಮಿಕ ಮತ್ತು ಆಶ್ಚರ್ಯದ ಅನ್ವೇಷಣೆಯಾಗಿತ್ತು.. ಸ್ಪೇನ್ ನಲ್ಲಿ ಕ್ಯಾಂಟಾಬ್ರಿಯಾದ ಬಯೋಮೆಡಿಸಿನ್ ಮತ್ತು ಬಯೋಟೆಕ್ನಾಲಜಿ ವಿಶ್ವವಿದ್ಯಾನಿಲಯದ ವಿಜ್ಞಾನಿ ಮತ್ತು ಹವ್ಯಾಸಿ ಜೇನುಸಾಕಣೆಗಾರ್ತಿ ಫೆಡೆರಿಕಾ ಬೆರ್ಟೊಕ್ಚಿನಿಯು ತನ್ನ ಮನೆಯಲ್ಲಿ ಮೇಣದ ಹುಳುಗಳೊಂದಿಗೆ ಮುತ್ತಿಕೊಂಡಿರುವ ಜೇನು ಗೂಡುಗಳನ್ನು ನೋಡಿ ಬೇಸರಗೊಂಡು ಜೇನುಗೂಡಿನನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು, ಮೇಣದ ಹುಳುಗಳನ್ನು ಸಾಮಾನ್ಯ ಪ್ಲ್ಯಾಸ್ಟಿಕ್ ಶಾಪಿಂಗ್ ಬ್ಯಾಗ್ನಲ್ಲಿ ಇಟ್ಟುಹೋದರು. ಅವರು ಪ್ಲಾಸ್ಟಿಕ್ ಚೀಲವನ್ನು 6 7 ಗಂಟೆಗಳ ಬಳಿಕ ಅವರು ನೋಡಿದಾಗ, ಹುಳುಗಳು ಎಲ್ಲೆಡೆಯೂ ಪ್ಲಾಸ್ಟಿಕ್ ಅನ್ನು ಸಣ್ಣ…