ಸುದ್ದಿ

ಚರ್ಚೆಗೆ ರೆಡಿ ಎಂದ ಸುಮಲತಾಗೆ ಟಾಂಗ್ ಕೊಟ್ಟ ಸಿಎಂ!ಕುಮಾರಸ್ವಾಮಿ ಹೇಳಿದ್ದೇನು?

145

ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ ಬಗ್ಗೆ ಚರ್ಚೆ ಮಾಡುತ್ತಾರೋ ಎಂದು ವ್ಯಂಗ್ಯವಾಡಿದ್ರು.

ಸುಮಲತಾ ಅವರ ಅಭಿವೃದ್ಧಿ ಏನಿದೆ ಎಂದು ಮತ್ತೆ ಪ್ರಶ್ನಿಸಿದ ಸಿಎಂ, ಅವರು ಇಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ. ಅಂಬರೀಶ್ ಸಂಸದರಾಗಿದ್ದಾಗ ಜನರ ಕಷ್ಟ-ಸುಖ ಕೇಳಿದ್ದಾರಾ. ಅಭಿವೃದ್ಧಿ ಬಗ್ಗೆ ಇವರ ಬಳಿ ನಾವು ಪಾಠ ಕಲಿಯಬೇಕಿಲ್ಲ ಎಂದು ವಾಗ್ದಾಳಿ ನಡೆಸಿದ್ರು.

ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಅಲೆ ಇದೆ. ನನಗೆ ಯಾವುದೇ ರೀತಿಯ ಆತಂಕಗಳು ಇಲ್ಲ. ಮಂಡ್ಯ ಜಿಲ್ಲೆಯ ಜನತೆ ಈಗಾಗಲೇ ತೀರ್ಮಾನ ಮಾಡಿದ್ದಾರೆ. ನಿಖಿಲ್ ಕುಮಾರಸ್ವಾಮಿಯನ್ನ ಆಯ್ಕೆ ಮಾಡಿ ಅಭಿವೃದ್ಧಿಗೆ ಚಾಲನೆ ಕೊಡುವ ದೃಷ್ಟಿಯಿಂದ ಈ ಅವಕಾಶವನ್ನು ಉಪಯೋಗ ಮಾಡಿಕೊಳ್ಳುವ ನಿರ್ಧಾರದಲ್ಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ