ಸುದ್ದಿ

ರೈತರಿಗೆ ಬಂಪರ್ ಸುದ್ದಿ ಕೊಟ್ಟ ಕುಮಾರಣ್ಣ..!

131

ಡಿಸೆಂಬರ್ ಒಳಗೆ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ, ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.

ಬ್ಯಾಂಕುಗಳಿಗೆ 4 ಕಂತುಗಳಲ್ಲಿ ರೈತರ ಸಾಲ ಮನ್ನಾದ ಮೊತ್ತವನ್ನು ಪಾವತಿಸಲು ಚಿಂತನೆ ನಡೆದಿತ್ತಾದರೂ, 2 ಕಂತುಗಳಲ್ಲಿ ಸಾಲಮನ್ನಾ ಮೊತ್ತವನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಂಪೂರ್ಣವಾಗಿ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ.

ರಾಜ್ಯ ಬಜೆಟ್ ನಲ್ಲಿ ಅನುದಾನ ಮೀಸಲಿಡುವ ಮೂಲಕ  ರೈತರ ಸಾಲ ಮನ್ನಾ ಟೀಕಿಸಿದವರಿಗೆ ಉತ್ತರ ನೀಡಲಾಗಿದೆ ಎಂದು ಸಿಎಂ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ