ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ.
ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ.
ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಹೇಳುವುದು ಸರಿಯಲ್ಲ. ಸೈನಿಕರ ಬಗ್ಗೆ ಕೀಳಾಗಿ ಮಾತನಾಡಬಾರದು ಎಂದು ಬಿಜೆಪಿ ಹೇಳಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ, ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಭಾಷಣದ ವಿಡಿಯೋ ಎಡಿಟ್ ಮಾಡಿ, ತಮಗೆ ಬೇಕಾದಂತೆ ಜೋಡಿಸಿ ತಮ್ಮ ಚಾರಿತ್ರ್ಯವಧೆಗೆ ಬಿಜೆಪಿ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಹಳೆಯ ಕುತಂತ್ರವನ್ನು ಮುಂದುವರೆಸಿದ್ದು, ನನ್ನ ಹೇಳಿಕೆಯನ್ನು ತಿರುಚಿದೆ. ಎಡಿಟ್ ಮಾಡಿದ ವಿಡಿಯೋ ಅಪ್ಲೋಡ್ ಮಾಡಿ ಚಾರಿತ್ರ್ಯವಧೆಗೆ ಪ್ರಯತ್ನಿಸಿದೆ ಎಂದು ಆರೋಪಿಸಿದ್ದಾರೆ.
ಸೇನೆಗೆ ಸೇರುವ ಎಲ್ಲರೂ ಶ್ರೀಮಂತರಾಗಿರುವುದಿಲ್ಲ. ಎರಡು ಹೊತ್ತಿನ ಊಟಕ್ಕೂ ಪರದಾಡುವ ಅನೇಕ ಯುವಕರಿದ್ದಾರೆ. ಅಂತಹ ಅಮಾಯಕರ ಜೀವದೊಂದಿಗೆ ಪ್ರಧಾನಿ ಮೋದಿ ಚೆಲ್ಲಾಟವಾಡುತ್ತಿದ್ದಾರೆ.
ಮತಕ್ಕಾಗಿ ಸೈನಿಕರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ನಾನು ಹೇಳಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…
ಬೆಂಗಳೂರು, ಜೂನ್ 7: ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಅರ್ಧಗಂಟೆ ಮಳೆಗೆ ವಿವಿಧೆಡೆ ಒಟ್ಟು 83 ಮರಗಳು ಧರೆಗುರುಳಿವೆ. ರಾಜರಾಜೇಶ್ವರಿನಗರ ಹಾಗೂ ಬಸವನಗುಡಿಯಲ್ಲಿ ಅತಿ ಹೆಚ್ಚು ಮರಗಳು ಬಿದ್ದಿದೆ ಅತಿ ಹೆಚ್ಚು ಹಾನಿಯೂ ಉಂಟಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಲ್ಲಿ ನೋಡಿದರೂ ಮರ ಉರುಳಿರುವುದು, ಟ್ರಾನ್ಸ್ಫಾರ್ಮರ್ ವಾಹನಗಳ ಮೇಲೆ ಬಿದ್ದಿರುವುದು, ವಿದ್ಯುತ್ ಕಂಬಗಳು ಧರೆಗುರಳಿರುವುದು, ಟ್ರಾಫಿಕ್ ಜಾಮ್ ನೋಡಿ ಅರ್ಧ ಗಂಟೆ ಮಳೆ ಎಷ್ಟೊಂದು ಅವಾಂತರವನ್ನು ಸೃಷ್ಟಿಸಿದೆ. ಬಸವನಗಗುಡಿ, ಕೆಂಗೇರಿ, ರಾಜರಾಜೇಶ್ವರಿನಗರ, ಗಿರಿನಗರ ಪ್ರದೇಶದಲ್ಲಿ ಅತಿ ಹೆಚ್ಚು…
ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.
ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮ ಭಾರತ. ಇಲ್ಲಿ ಪ್ರತಿ ಕಿಲೋಮೀಟರ್ ಗೂ ನಮ್ಮ ಸಂಸ್ಕೃತಿ , ಸಂಪ್ರದಾಯ, ಭಾಷೆ , ಪದ್ಧತಿ ಬದಲಾಗುತ್ತ ಹೋಗುತ್ತದೆ. ಇಲ್ಲಿ ಪ್ರತೀ ರಾಜ್ಯಕ್ಕೂ ತನ್ನದೇ ಆದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಕಲೆ , ಆಚಾರ ವಿಚಾರಗಳು ಇವೆ. ಅಂತೆಯೇ ತನ್ನದೇ ಆದ ವಿಶಿಷ್ಟ ಅಡುಗೆ ಶೈಲಿಗಳನ್ನು ಈ ರಾಜ್ಯಗಳು ಹೊಂದಿವೆ. ಇಡ್ಲಿ , ವಡೆ, ಮಸಾಲ ದೋಸೆ ತಮಿಳು ನಾಡಿನಲ್ಲಿ ಸುಪ್ರಸಿದ್ದ. ಈ ತಿಂಡಿಗಳ ಹೆಸರು ಕೇಳಿದೊಡನೆಯೇ ಹೊರ ಜನರಿಗೆ…
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…
ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…