ಸುದ್ದಿ

ಮೋದಿಗೆ ವೋಟ್ ಹಾಕಿ ನನ್ನ ಜೊತೆ ಸಮಸ್ಯೆಯನ್ನು ಬಗೆಹರಿಸಿ ಅಂತೀರಾ… ಆಕ್ರೋಶದಿಂದ ಸಿಎಂ !

28

ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು.

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು ಹೇಳಿ ಪ್ರತಿಭಟನಾಕಾರರ ಮೇಲೆ ಕೂಗಾಡಿದರು. ಅಷ್ಟೇ ಅಲ್ಲ ನಾನು ಗ್ರಾಮವಾಸ್ತವ್ಯ ಮಾಡುವುದಿಲ್ಲ ಎಂದು ಹೇಳಿದರು.

ನಂತರ ಸಿಎಂ ತಮ್ಮ ಸಿಟ್ಟನ್ನು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಮೇಲೆ ಹೊರ ಹಾಕಿದರು. ಗರಂ ಆಗಿದ್ದ ಸಿಎಂ ಅವರನ್ನು ನಾಡಗೌಡ ಅವರು ಸಮಾಧಾನಪಡಿಸಿ, ಯಾವನ್ರೀ ಅವನು ಎಸ್ಪಿ ಎಂದು ಪೊಲೀಸ್ ಅಧಿಕಾರಿಗಳ ಮೇಲೆ ತಮ್ಮ ಕೋಪವನ್ನು ಹೊರಹಾಕಿದರು.

ನಂತರ ಬಸ್‍ನಲ್ಲೇ ಕುಳಿತು ಮನವಿ ಸ್ವೀಕಾರ ಮಾಡಿದ ಮುಖ್ಯಮಂತ್ರಿಗಳು, ಮಾನ್ವಿ ತಾಲೂಕಿನ ಕಲ್ಲೂರಿಗೆ ಕುಡಿಯುವ ನೀರಿನ ಸರಬರಾಜು ಯೋಜನೆ ಮತ್ತು ಪದವಿ ಕಾಲೇಜು ತೆರಯುವ ಭರವಸೆ ನೀಡಿದರು. ಇದೇ ವೇಳೆ ಕಿವಿ ಕೇಳದ ಗ್ರಾಮದ ಮಗುವೊಂದರ ಚಿಕಿತ್ಸೆಗೆ ಹಣ ನೀಡುವ ಭರವಸೆ ನೀಡಿ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಬರುವಂತೆ ಸೂಚನೆ ನೀಡಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಐಟಿ ದಾಳಿ ವೇಳೆ ಪುನೀತ್ ರಾಜಕುಮಾರ್ ಮನೆ ಮುಂದೆ ಸಚಿವ ಡಿಕೆ.ಶಿವಕುಮಾರ್ ಬಂದಿದ್ದೇಕೆ ಗೊತ್ತಾ..?

    ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು…

  • ದೇಶ-ವಿದೇಶ

    ಕಡೆಗೂ ಬಂತು ಆಪಲ್ ಐಫೋನ್ ನಲ್ಲಿ ಕನ್ನಡ ಕೀಬೋರ್ಡ್ !ಇದು ಕನ್ನಡಿಗರಿಗೆ ಸಂದ ಜಯ….ಮುಂದೆ ಓದಿ…..

    ಟೆಕ್ ದೈತ್ಯ ಕಂಪನಿ ಆಪಲ್, ಅದರ ಕೀಬೋರ್ಡ್ ಆಪರೇಟಿಂಗ್ ಸಿಸ್ಟಮ್, ಐಒಎಸ್ 2ರ ಇತ್ತೀಚಿನ ಆವೃತ್ತಿಯಲ್ಲಿ ಕನ್ನಡ

  • ಸುದ್ದಿ

    ಕೇವಲ 13 ವಯಸ್ಸಿನಲ್ಲೆ 135 ಪುಸ್ತಕ ಬರೆದು 4 ವಿಶ್ವದಾಖಲೆ ನಿರ್ಮಿಸಿದ ಪೋರ…..!

    ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…

  • ಸುದ್ದಿ

    ಮೊದಲ ದಿನದ ಪ್ರದರ್ಶನದಲ್ಲೇ ದಾಖಲೆ ಬರೆದ ‘ಪೈಲ್ವಾನ್’…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…

  • ಸುದ್ದಿ

    ‘ಪಿತೃ ಪಕ್ಷ’ಕ್ಕೂ ಮಹಾಭಾರತದ ಕರ್ಣನಿಗೂ ಏನು ಸಂಬಂಧ ಗೊತ್ತ….!

    ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….