ಸುದ್ದಿ

ಮೋದಿಗೆ ವೋಟ್ ಹಾಕಿ ನನ್ನ ಜೊತೆ ಸಮಸ್ಯೆಯನ್ನು ಬಗೆಹರಿಸಿ ಅಂತೀರಾ… ಆಕ್ರೋಶದಿಂದ ಸಿಎಂ !

37

ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು.

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು ಹೇಳಿ ಪ್ರತಿಭಟನಾಕಾರರ ಮೇಲೆ ಕೂಗಾಡಿದರು. ಅಷ್ಟೇ ಅಲ್ಲ ನಾನು ಗ್ರಾಮವಾಸ್ತವ್ಯ ಮಾಡುವುದಿಲ್ಲ ಎಂದು ಹೇಳಿದರು.

ನಂತರ ಸಿಎಂ ತಮ್ಮ ಸಿಟ್ಟನ್ನು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಮೇಲೆ ಹೊರ ಹಾಕಿದರು. ಗರಂ ಆಗಿದ್ದ ಸಿಎಂ ಅವರನ್ನು ನಾಡಗೌಡ ಅವರು ಸಮಾಧಾನಪಡಿಸಿ, ಯಾವನ್ರೀ ಅವನು ಎಸ್ಪಿ ಎಂದು ಪೊಲೀಸ್ ಅಧಿಕಾರಿಗಳ ಮೇಲೆ ತಮ್ಮ ಕೋಪವನ್ನು ಹೊರಹಾಕಿದರು.

ನಂತರ ಬಸ್‍ನಲ್ಲೇ ಕುಳಿತು ಮನವಿ ಸ್ವೀಕಾರ ಮಾಡಿದ ಮುಖ್ಯಮಂತ್ರಿಗಳು, ಮಾನ್ವಿ ತಾಲೂಕಿನ ಕಲ್ಲೂರಿಗೆ ಕುಡಿಯುವ ನೀರಿನ ಸರಬರಾಜು ಯೋಜನೆ ಮತ್ತು ಪದವಿ ಕಾಲೇಜು ತೆರಯುವ ಭರವಸೆ ನೀಡಿದರು. ಇದೇ ವೇಳೆ ಕಿವಿ ಕೇಳದ ಗ್ರಾಮದ ಮಗುವೊಂದರ ಚಿಕಿತ್ಸೆಗೆ ಹಣ ನೀಡುವ ಭರವಸೆ ನೀಡಿ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಬರುವಂತೆ ಸೂಚನೆ ನೀಡಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ನೆನೆಸಿಟ್ಟ ಒಣದ್ರಾಕ್ಷಿ ದಿನಾ ಒಂದೆರಡು ತಿಂದ್ರೆ, ಏನೆಲ್ಲಾ ಲಾಭವಿದೆ ಗೊತ್ತಾ?

    ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ. ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ…

  • ಸುದ್ದಿ

    ಬೀಳುವ ಹಂತದಲ್ಲಿ ಶಿಥಿಲಗೊಂಡಿದ್ದ ಸರ್ಕಾರೀ ಶಾಲೆಯ ಅಭಿವೃದ್ಧಿಗೆ ಮುಂದಾದ ಸಂಸದ ಜಿಸಿ ಚಂದ್ರಶೇಖರ್..!

    ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….

  • ಪ್ರೇಮ

    ಆಕೆ ನನಗೆ ಸ್ವಲ್ಪ ಉಸಿರಾಟದ ತೊಂದರೆಯಾಗಿದೆ ಎಂದಳು – ಒಂದು ಪ್ರೆಮ ಕಥೆ 2 ನಿಮಿಷ ಸಮಯ ವಿದ್ದರೆ ಓದಿ

    ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.

  • inspirational

    ಗ್ರೀನ್ ಟೀ ಆರೋಗ್ಯಕರ ಪ್ರಯೋಜನಗಳು

    ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.  ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…

  • ಜ್ಯೋತಿಷ್ಯ

    ಮಂತ್ರಾಲಯದ ಪ್ರಭುಗಳನ್ನು ನೆನೆಯುತ್ತಾ ಗುರುವಾರದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…

  • ಉಪಯುಕ್ತ ಮಾಹಿತಿ

    ರಾಜ್ಯಸರ್ಕಾರದಿಂದ ಗರ್ಭಿಣಿ ಮತ್ತು ಬಾಣಂತಿಯರಿಗೆ “ಮಾತೃಪೂರ್ಣ”ಯೋಜನೆ ಬಾಗ್ಯ!ಇದರ ಬಗ್ಗೆ ನೀವೂ ತಿಳಿಯಿರಿ ಮತ್ತು ನಿಮ್ಮವರಿಗೆ ಶೇರ್ ಮಾಡಿ ತಿಳಿಸಿ…

    ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.