ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು. ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ.
ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ ಜತೆಯಲ್ಲಿದ್ದಾರೆ. ನನ್ನ ಎಲ್ಲ ತಪ್ಪುಗಳನ್ನು ಅವಳು ಕ್ಷಮಿಸಿದ್ದಾಳೆ ಎಂದು ಪತ್ನಿಯನ್ನು ಹೊಗಳಿದರು.
ಇಂದಿನ ಕಲಾಪ ಇತಿಹಾಸದಲ್ಲಿ ದಾಖಲಾಗುವಂತಹದ್ದಾಗಿದೆ. ನಾನು ಸಂತೋಷವಾಗಿ ಮುಖ್ಯಮಂತ್ರಿ ಹುದ್ದೆ ತೊರೆಯುಯಲು ನಾನು ಸಿದ್ಧವಾಗಿದ್ದೇನೆ ಎಂದರು.
ಸಾಮಾಜಿಕ ತಾಣಗಳ ಮೇಲೆ ಕೆಂಡಾಮಂಡಲ
ಸಮಾಜಿಕ ತಾಣಗಳೇ ಇಂದು ಎಲ್ಲವನ್ನೂ ಹಾಳು ಮಾಡುತ್ತಿದೆ. ಯುವಕರು ಕುಲಗೆಡುತ್ತಿದ್ದಾರೆ. ದೇಶದ ಸಂಸ್ಕೃತಿಯನ್ನು ಹಾಳಳು ಮಾಡಲು ಸೋಷಿಯಲ್ ಮೀಡಿಯಾಗಳು ಹೊರಟಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಂಗಳವಾರ ಕಲಾಪ ಆರಂಭವಾದರೂ ನಾನು ಹೋಟೆಲ್ ನಲ್ಲಿ ಕುಳಿತು ಆರಾಮವಾಗಿ ಕುಳಿತಿದ್ದೇನೆ ಎಂದು ಹೇಳಲಾಗುತ್ತಿತ್ತು. ಅಲ್ಲಿ ನಾನು ಸುಮ್ಮನೆ ಕುಳಿತಿಲ್ಲ. ನಾನು ಸಿದ್ಧತೆ ನಡೆಸುತ್ತಿದ್ದೆ. ಜನರ ತೆರಿಗೆ ಹಣವನ್ನು ಹೋಟೆಲ್‌ನಲ್ಲಿ ಕುಳಿತು ಪೋಲು ಮಾಡಲಾಗುತ್ತಿದೆ ಎಂದೆಲ್ಲ ಹೇಳಲಾಗಿದೆ. ಈ ಎಲ್ಲ ವಿಚಾರಗಳು ಸಾಕಷ್ಟು ಬೇಸರ ಉಂಟು ಮಾಡಿದೆ.
ರಾಜ್ಯ ರಾಜಕಾರಣ ಟ್ರೋಲಿಗರಿಗೆ ಬಾಡೂಟ…. ಏನೆಲ್ಲ ಮಾಡಿದಾರೆ ನೋಡಿ!
ನಮ್ಮ ಸರಕಾರ ಅಧಿಕಾರಕ್ಕೆ ಬಂದಾಗಿಂದಲೂ ಅಪಪ್ರಾಚಾರ ಮಾಡಲಾಗುತ್ತುದೆ. ಸೋಷಿಯಲ್ ಮೀಡಿಯಾದಲ್ಲಿ ಮನಬಂದಂತೆ ಪೋಸ್ಟ್ ಹಾಕಲಾಗಿದೆ. ರೈತರ ವಿಚಾರದಲ್ಲಿ ಸುಳ್ಳು ಹೇಳಲು ನಾನು ಹೋಗುವುದಿಲ್ಲ. ಈ ಹಿಂದಿನ ಬಿಜೆಪಿ ಜತೆಗಿನ ಮೈತ್ರಿ ಸರಕಾರದ ಪತನದ ಬಳಿಕ ನನ್ನನ್ನು ವಚನ ಭ್ರಷ್ಟ ಎನ್ನಲಾಗುತ್ತಿದೆ. ವಿಶ್ವಾಸಮತ ಯಾಚಿಸದೇ ಯಡಿಯೂರಪ್ಪ ಅವರು ರಾಜೀನಾಮೆ ನೀಡಿದರು. ನಾನು ಅಧಿಕಾರ ಅವರಿಗೆ ಹಸ್ತಾಂತರಿಸಿದ್ದೆ. ನನ್ನಿಂದ ಯಾವುದೇ ತಪ್ಪಾಗಿಲ್ಲ. ಪದೇ ಪದೇ ನನ್ನನ್ನು ವಚನ ಭ್ರಷ್ಟ ಅನ್ನಬೇಡಿ. ಈ ಬಗ್ಗೆ ನಿಮ್ಮ ಕಾರ್ಯಕರ್ತರಿಗೆ ತಿಳಿಸಿ ಹೇಳುವಂತೆ ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…
ಐಸ್ ಕ್ರೀಮ್ ತಿನ್ನೋ ಈ ವಿಡಿಯೋ ನೋಡಿ ನಿಮ್ಗೆ ನಗು ಬರ್ದೇ ಇರಲ್ಲ…
ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು…
ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್‌ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..
ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…
ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ. 1998ರ ಅಕ್ಟೋಬರ್-ಡಿಸೆಂಬರ್‌ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು. ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್‌ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ. 1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ…