ಸುದ್ದಿ

ಕುಮಾರಣ್ಣ ಬಜೆಟ್ ನಲ್ಲಿ ರೈತರಿಗಾಗಿ ಮತ್ತೊಂದು ಭರ್ಜರಿ ಆಫರ್…

By admin

February 09, 2019

ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ.

ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ.

ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ ರೂ. ಸಹಾಯಧನ ನೀಡಿದ್ದು, ಈ ವರ್ಷ ಅದನ್ನು 11,250 ಕೋಟಿ ರೂ.ಗೆ ಹೆಚ್ಚಿಸಲಾಗಿದೆ. ವಿದ್ಯುತ್ ಗುಣ ಮಟ್ಟವನ್ನು ಉತ್ತಮಪಡಿಸಲು 40,000 ಟ್ರಾನ್ಸ್ ಫಾರ್ಮರ್ ಅಳವಡಿಕೆ ಮಾಡಲಾಗುವುದೆಂದು ಬಜೆಟ್ ನಲ್ಲಿ ಹೇಳಲಾಗಿದೆ.