ಸುದ್ದಿ

12 ಕಿರು ಬಂದರುಗಳನ್ನು ಅಭಿವೃದ್ಧಿಪಡಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

30

ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮ್ಯಾರಿಟೈಮ್ ಮಂಡಳಿಗೆ ಶೀಘ್ರದಲ್ಲಿಯೇ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿಗಳು ಇದೇ ವೇಳೆ ಭರವಸೆ ನೀಡಿದರು. ಕಾರವಾರ ಬಂದರಿನ 2 ನೇ ಹಂತದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದ್ದು, ಬಂದರಿನ ಉತ್ತರಕ್ಕೆ 1258 ಮೀ. ಉದ್ದದ ಬರ್ತ್ ನ್ನು ವಿಸ್ತರಿಸಲು ವಿಸ್ಕೃತಾ ಯೋಜನಾ ವರದಿಯನ್ನು ತಯಾರಿಸಿದ್ದು, ಸರ್ಕಾರದ ಅನುಮೋದನೆಗೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ಸಾಗರಮಾಲಾ ಕೋಸ್ಟಲ್ ಬರ್ತ್ ಯೋಜನೆಯಡಿ ಪ್ರಸಕ್ತ ಕಾಲಿಗೆ 54.10 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಲಾಗಿದ್ದು, ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಟೆಂಡರ್ ಕರೆದು ಕಾರ್ಯಾದೇಶ ನೀಡಲಾಗಿದೆ ಹಾಗೂ ಕಾರವಾರ ಕೋಸ್ಟಲ್ ಬರ್ತ್ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ಕರಾವಳಿ ಪ್ರದೇಶದಲ್ಲಿ ಕಡಲು ಕೊರೆತ ಪದೇ ಪದೇ ಉಂಟಾಗಿ ಸ್ಥಳೀಯರಿಗೆ ತೊಂದರೆಯಾಗುತ್ತಿದ್ದು, ಈ ಬಗ್ಗೆ ಧೀರ್ಘಾವಧಿ ಪರಿಹಾರ ಕಂಡುಕೊಳ್ಳಬೇಕು, ಕಡಲ ಬದಿಯಲ್ಲಿರುವ ಜನರಿಗೆ ಪುನವರ್ಸತಿ ಕಲ್ಪಿಸುವ ಬಗ್ಗೆ ಪರಿಶೀಲಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ