ಸುದ್ದಿ

ಇನ್ನು ಮುಂದೆ ದೇವಸ್ಥಾನಗಳಲ್ಲಿ ರಾಸಾಯನಿಕ ಮಿಶ್ರಿತ ಕುಂಕುಮ ಬಂದ್..!ಯಾಕೆ ಗೊತ್ತ?

28

ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ.

ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ ಸಮಸ್ಯೆ ಗಳಿಗೂ ಕಾರಣವಾಗುತ್ತದೆ. ನಿರ್ಲಕ್ಷಿಸಿದರೆ ಆರೋಗ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಿಂದ ಅಲರ್ಜಿ (ಬಿಂದಿ ಡರ್ಮಟೈಟಿಸ್‌) ಉಂಟಾಗುವ ಸಾಧ್ಯತೆ ಇದೆ. ಇದರಿಂದ ಕುಂಕುಮ ಹಚ್ಚಿ ಕೊಂಡ ಭಾಗದಲ್ಲಿ ಕೆರೆತ, ಸಣ್ಣ ನೀರಿನ ಗುಳ್ಳೆ ಕಾಣಿಸಿಕೊಳ್ಳಬಹುದು. ಇಂತಹ ಕುಂಕುಮಗಳಿಂದ ಜೀವಕಣ ಗಳು ನಾಶವಾಗಿ ಕ್ರಮೇಣ ಆ ಭಾಗ ಬೆಳ್ಳಗಾಗಲಿದೆ ಎಂದು ಚರ್ಮರೋಗ ತಜ್ಞರು ಹೇಳುತ್ತಾರೆ.

ಕೆಲವು ದೇಗುಲಗಳಲ್ಲಿ ರಾಸಾಯನಿಕ ಮಿಶ್ರಿತ ಕುಂಕುಮ ಬಳಸಲಾಗುತ್ತಿದೆ ಎಂದು ಭಕ್ತರಿಂದ ದೂರುಗಳು ಕೇಳಿ ಬಂದಿವೆ. ಭಕ್ತರ ಹಿತದೃಷ್ಟಿಯಿಂದ ರಾಸಾಯನಿಕ ಮಿಶ್ರಿತವೆಂದು ಕಂಡುಬಂದ ಕುಂಕುಮ ಖರೀದಿ, ಬಳಕೆ ಮಾಡದಂತೆ ಆದೇಶ ಹೊರಡಿಸಲಾಗುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ