ಸುದ್ದಿ

ಕುರುಕ್ಷೇತ್ರ ಚಿತ್ರದ ಹೊಸ ಪೋಸ್ಟರ್ ನಲ್ಲೊಂದು ವಿಶೇಷತೆ, ಏನೆಂದು ತಿಳಿಯಿರಿ?

39

ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ.

ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್ ನಲ್ಲಿ ಅದನ್ನು ಬರೆದಿರಲಿಲ್ಲ. ಆದರೆ, ಈ ಪೋಸ್ಟರ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ 50ನೇ ಸಿನಿಮಾ ಎಂದು ಬರೆಯಲಾಗಿದೆ.

ಈ ಹಿಂದೆ ‘ಯಜಮಾನ’ ಅಥವಾ ‘ಕುರುಕ್ಷೇತ್ರ’ ಪೈಕಿ ಯಾವುದೇ ದರ್ಶನ್ 50ನೇ ಸಿನಿಮಾ ಎನ್ನುವ ಗೊಂದಲ ಇತ್ತು. ಹಾಗಾಗಿ ಹಳೆಯ ಪೋಸ್ಟರ್ ನಲ್ಲಿ 50ನೇ ಸಿನಿಮಾ ಎಂದು ಹಾಕಿರಲಿಲ್ಲ. ಇದರೊಂದಿಗೆ ಸಿನಿಮಾಗೆ ನಾಲ್ಕು ನಿರ್ದೇಶಕರು ಕೆಲಸ ಮಾಡಿದ್ದಾರೆ. ಹಾಗಾಗಿ, ನಾಗಣ್ಣ, ವಿ ನಾಗೇಂದ್ರ ಪ್ರಸಾದ್, ಎಸ್ ವಿ ಪ್ರಸಾದ್ ಹಾಗೂ ದೇವರಾಜ್ ಎಂದು ಹೆಸರು ಹಾಕಲಾಗಿದೆ.

ಈ ಸಿನಿಮಾವನ್ನು ಮುನಿರತ್ನ ನಿರ್ಮಾಣ ಮಾಡಿದ್ದಾರೆ. ದರ್ಶನ್, ಅಂಬರೀಶ್, ರವಿಚಂದ್ರನ್, ಅರ್ಜುನ್ ಸರ್ಜಾ, ನಿಖಿಲ್ ಕುಮಾರ್, ಶಶಿಕುಮಾರ್, ಭಾರತಿ ವಿಷ್ಣುವರ್ಧನ್ ಸೇರಿದಂತೆ ಸಾಕಷ್ಟು ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ