ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್ ಬಾಲಯ್ಯ ರವರು ಮಾತನಾಡಿ, ಪಾರದರ್ಶಕವಾಗಿ ಕಟ್ಟಡ ಕಾರ್ಮಿಕ ನೋಂದಾಯಿತ ಜ್ಯೇಷ್ಟತಾ ಆಧಾರದ ಮೇಲೆ ಫಲಾನುಭವಿಗಳ ಮಕ್ಕಳಿಗೆ ನೇರವಾಗಿ ಶಾಲಾ ಕಿಟ್ಗಳನ್ನು ವಿತರಣೆ ಮಾಡುತ್ತಿದ್ದು, ಕೋಲಾರ ಕಾರ್ಮಿಕ ಇಲಾಖೆಯ ಪ್ರಾಮಾಣಿಕ ಅಧಿಕಾರಿಗಳ ಸಹಕಾರದಿಂದ ನಮ್ಮ ಸಂಘ 250ಕ್ಕೂ ಹೆಚ್ಚು ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ಮತ್ತು ಆಯುಷ್ಮಾನ್ ಕಾರ್ಡ್ ವಿತರಿಸಲಾಗಿದೆ ಹಾಗೂ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ನೂರಾರು ಕಾರ್ಮಿಕರಿಗೆ ಆರೋಗ್ಯ ತಪಾಸಣೆಯನ್ನು ಯಶಸ್ವಿಯಾಗಿ ನಡೆಸಲು ಸಾಧ್ಯವಾಯಿತು ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಧನ್ಯವಾದಗಳನ್ನು ತಿಳಿಸಿದು. ಇದೇ ವೇಳೆ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ನೀಡಲು ನಿರ್ಧರಿಸಲಾಗಿದ್ದು, ಅದರಂತೆ ಕೋಲಾರ ಜಿಲ್ಲೆಗೆ 3000 ಕಿಟ್ಗಳು ಸ್ವೀಕೃತವಾಗಿದ್ದು, ಇವುಗಳನ್ನು ತಾಲ್ಲೂಕುವಾರು ಅಂದರೆ, ಕೋಲಾರ-750, ಮುಳಬಾಗಿಲು ಮತ್ತು ಶ್ರೀನಿವಾಸಪುರ-750, ಬಂಗಾರಪೇಟೆ-500, ಮಾಲೂರು-500 ಮತ್ತು ಕೆಜಿಎಫ್-500 ಒಟ್ಟು 3000 ಕಿಟ್ಗಳು ಸ್ವೀಕೃತಿಯಾಗಿರುತ್ತವೆ. ಸದರಿ ಕಿಟ್ಗಳನ್ನು ಪಾರದರ್ಶಕವಾಗಿ ಹಾಗೂ ನೇರವಾಗಿ ಫಲಾನುಭವಿಗಳ ಮಕ್ಕಳಿಗೆ ವಿತರಿಸಬೇಕಾಗಿರುವುದರಿಂದ ನೋಂದಾಯಿತ ಕಾರ್ಮಿಕರಗುರುತಿನಚೀಟಿ. ಕಾರ್ಮಿಕರ ಮತ್ತು ಮಗುವಿನ ಆಧಾರ್ಕಾರ್ಡ್ ಪ್ರತಿ. ವಿದ್ಯಾರ್ಥಿ 01 ರಿಂದ 05ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ ಈ ಎಲ್ಲಾ ದಾಖಲೆಗಳೊಂದಿಗೆ ಫಲಾನುಭವಿಯೇ ನೇರವಾಗಿ ಎಲ್ಲಾ ತಾಲ್ಲೂಕು ಮಟ್ಟದ ಕಾರ್ಮಿಕ ನಿರೀಕ್ಷಕರ ಕಛೇರಿಗೆ ಭೇಟಿ ನೀಡಿ ಈ ಮೇಲಿನ ದಾಖಲೆಗಳನ್ನು ಸಲ್ಲಿಸಿದ ನಂತರ ಕಟ್ಟಡ ಕಾರ್ಮಿಕರ ನೋಂದಣಿಯ ಕಾರ್ಡ್ ಜೇಷ್ಠತೆಯ ಆಧಾರದ ಮೇಲೆ ಪರಿಶೀಲನೆಗೊಂಡ ನಂತರ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ಗಳನ್ನು ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಗಳಲ್ಲಿ ನೀಡಲಾಗುವುದು.
ಮುಂದುವರೆದು, 06 ತರಗತಿಯಿಂದ 08ನೇ ತರಗತಿಯವರೆಗಿನ ಶಾಲಾ ಮಕ್ಕಳಿಗೆ ಶಾಲಾ ಕಿಟ್ಗಳನ್ನು ನೀಡಲು ನಿರ್ದರಿಸಲಾಗಿರುತ್ತದೆ. ಕೋಲಾರ-750, ಮುಳಬಾಗಿಲು ಮತ್ತು ಶ್ರೀನಿವಾಸಪುರ-750, ಮಾಲೂರು-500, ಬಂಗಾರಪೇಟೆ-500 ಮತ್ತು ಕೆಜಿಎಫ್-500 ಒಟ್ಟು 3000 ಕಿಟ್ಗಳು ಸ್ವೀಕರಿಸಲಾಗುವುದು, ಈಗಾಗಲೇ ಬಂಗಾರಪೇಟೆ ತಾಲ್ಲೂಕಿಗೆ 500 ಕಿಟ್ಗಳು ಸ್ವೀಕೃತಿಯಾಗಿರುತ್ತವೆ. ಅದರಂತೆ, ಉಳಿದ ತಾಲ್ಲೂಕುಗಳಿಗೆ ಶಾಲಾ ಕಿಟ್ಗಳು ಸ್ವೀಕೃತಿಯಾದ ನಂತರ ಸದರಿ ಕಿಟ್ಗಳನ್ನು ಪಾರದರ್ಶಕವಾಗಿ ಹಾಗೂ ನೇರವಾಗಿ ಫಲಾನುಭವಿಗಳ ಮಕ್ಕಳಿಗೆ ವಿತರಿಸಬೇಕಾಗಿರುವುದರಿಂದ ನೋಂದಾಯಿತ ಕಾರ್ಮಿಕರ ಗುರುತಿನಚೀಟಿ. ಕಾರ್ಮಿಕರ ಮತ್ತು ಮಗುವಿನ ಆಧಾರ್ಕಾರ್ಡ್ ಪ್ರತಿ. ವಿದ್ಯಾರ್ಥಿ 06 ರಿಂದ 08ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ ಈ ಎಲ್ಲಾ ದಾಖಲೆಗಳೊಂದಿಗೆ ಫಲಾನುಭವಿಯೇ ನೇರವಾಗಿ ಎಲ್ಲಾ ತಾಲ್ಲೂಕು ಮಟ್ಟದ ಕಾರ್ಮಿಕ ನಿರೀಕ್ಷಕರ ಕಛೇರಿಗೆ ಭೇಟಿ ನೀಡಿ ಈ ಮೇಲಿನ ದಾಖಲೆಗಳನ್ನು ಸಲ್ಲಿಸಿದ ನಂತರ ಕಟ್ಟಡ ಕಾರ್ಮಿಕರ ನೋಂದಣಿಯ ಕಾರ್ಡ್ ಜೇಷ್ಠತೆಯ ಆಧಾರದ ಮೇಲೆ ಪರಿಶೀಲನೆಗೊಂಡ ನಂತರ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ಗಳನ್ನು ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಗಳಲ್ಲಿ ನೀಡಲಾಗುವುದು ಎಂದು ಕೋಲಾರ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಿಟ್ಜರ್ಲ್ಯಾಂಡ್ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.
ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…
ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು. ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್. ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ….
ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….