ಸುದ್ದಿ

ಗಾನ ಕೋಗಿಲೆ ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿತಿ ಗಂಭೀರ ; ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು..!

132

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.

ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ಲತಾ ಮಂಗೇಶ್ವರ್ ಅವರು ಧ್ವನಿ ನೀಡಿದ್ದು, ಭಾರತದ ಅತ್ಯುನ್ನತ ‘ಭಾರತ ರತ್ನ’ ಪ್ರಶಸ್ತಿಯನ್ನು 2001 ರಲ್ಲಿ ಪಡೆದಿದ್ದಾರೆ. ಒಟ್ಟಾರೆ ವಿವಿಧ ಭಾಷೆಯಲ್ಲಿ ಲತಾ ಮಂಗೇಶ್ಕರ್  ಅವರು 36 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅವರಿಗೆ 3 ರಾಷ್ಟ್ರೀಯ ಪ್ರಶಸ್ತಿ, 6 ಫಿಲ್ಮಫೇರ್ ಪ್ರಶಸ್ತಿ, ಪದ್ಮವಿಭೂಷಣ್, ಪದ್ಮಭೂಷಣ್, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗಳು ಲಭಿಸಿದೆ.

ನ್ಯುಮೋನಿಯಾದಿಂದ ಬಳಲುತ್ತಿರುವ ಅವರ ಸ್ಥಿತಿ ಗಂಭೀರವಾಗಿಯೇ ಇದೆ. ಕಳೆದ ಕೆಲವಾರು ಗಂಟೆಗಳಲ್ಲಿ ಉಸಿರಾಟ ಹಾಗೂ ಹೃದಯದ ಕೆಲಸದಲ್ಲಿ ಕೊಂಚ ಚೇತರಿಕೆ ಕಂಡು ಬಂದಿದೆ. ಕೃತಕ ಉಸಿರಾಟ ವ್ಯವಸ್ಥೆಯಲ್ಲೇ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಇಂಟರ್ನಲ್‌ ಮೆಡಿಸಿನ್‌ ವಿಭಾಗದ ವೈದ್ಯ ಡಾ. ಪ್ರತೀತ್‌ ಸಂದಾನಿ ಹೇಳಿದ್ದಾರೆ.

ಎಡ ಭಾಗದ ಹೃದಯ ಅಗತ್ಯ ಪ್ರಮಾಣದಲ್ಲಿ ರಕ್ತವನ್ನು ಪಂಪ್‌ ಮಾಡುತ್ತಿಲ್ಲ. ಇದೊಂದು ವಿಧವಾದ ಹೃದಯ ವೈಫಲ್ಯ ಎನ್ನುತ್ತೇವೆ. ದೇಹಕ್ಕೆ ಶುದ್ಧ ರಕ್ತವನ್ನು ತಲುಪಿಸುವಲ್ಲಿ ಎಡ ಭಾಗದ ಹೃದಯ ಅತ್ಯಂತ ಮುಖ್ಯ ಪಾತ್ರ ವಹಿಸುತ್ತದೆ. ಸದ್ಯ ಲತಾ ಮಂಗೇಶ್ಕರ್‌ ಅವರ ಆರೋಗ್ಯ ಸ್ಥಿತಿಯಲ್ಲಿ ಹೃದಯ ಹೆಚ್ಚಿನ ಸಾಮರ್ಥ್ಯ ಹಾಕಿ, ಸ್ವಲ್ಪ ಪ್ರಮಾಣದ ರಕ್ತವನ್ನಷ್ಟೇ ಹೃದಯದಿಂದ ಹೊರ ಕಳಿಸುತ್ತಿದೆ ಎಂದು ವೈದ್ಯರೊಬ್ಬರು ವಿವರಿಸಿದ್ದಾರೆ. ಈ ಕುರಿತು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ