ಸುದ್ದಿ

ಸಹಕಾರಿ ಬ್ಯಾಂಕ್ ಗಳಿಂದ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ‘ಬಿಗ್ ಶಾಕ್’

29

ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ.

ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು,

ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ.

ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ ಇಲಾಖೆಯ ಮೂಲಕ ಸಲ್ಲಿಕೆಯಾಗಿದ್ದ ಸುಮಾರು 1450 ಕೋಟಿ ರೂ. ಬಿಡುಗಡೆಗೆ ಬ್ರೇಕ್ ಹಾಕಲಾಗಿದೆ ಎಂದು ಹೇಳಲಾಗಿದೆ.

ಇದರಿಂದಾಗಿ ರೈತರಿಗೆ ಹೊಸ ಸಾಲ ಸಿಗುತ್ತಿಲ್ಲ. ಬಹುತೇಕ ಸಹಕಾರಿ ಸಂಸ್ಥೆಗಳು ಆರ್ಥಿಕವಾಗಿ ಸೊರಗಿದ್ದು, ಸಾಲದ ಕಂತು ಮರುಪಾವತಿ ಮುಗಿದ ರೈತರ ಖಾತೆಗಳಿಗೆ ಮರುಪಾವತಿ ಹಣ ಬಂದಿಲ್ಲ. ರೈತರಿಗೆ ಹೊಸ ಸಾಲ ಸಿಗುತ್ತಿಲ್ಲ. ಇದರಿಂದ ರೈತರಿಗೆ ತೊಂದರೆಯಾಗಿದೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ