ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಬೇರೆಬೇರೆ ಇದ್ದ ಕಾರಣ ಮನೆಯವರು ಧಮಕಿ ಹಾಕಿದ ಘಟನೆ ವಿಜಯಪುರ ದಲ್ಲಿ ನಡೆದಿದೆ.
ನಾವು ಒಬ್ಬರಿಗೊಬ್ಬರು ಪ್ರೀತಿಸಿದ್ದೆವೆ, ಮದುವೆ ಕೂಡ ಆಗಿದ್ದೆವೆ ಆದರೆ ನಮಗೆ ಜೀವನ ನಡೆಸಲು ಬಿಡುತ್ತಿಲ್ಲ. ಹೀಗಾಗಿ ನಮಗೆ ಬದಕಲು ಬಿಡಿ ಎಂದು ಪ್ರೇಮಿಗಳು ಅಂಗಲಾಚುತ್ತಿದ್ದಾರೆ.
5 ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳಿಗೆ ಪೋಷಕರೇ ವಿಲನ್ ಆಗಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ನಾವದಗಿತ ಶೃತಿ ಹಾಗೂ ಆಲಮೇಲ ಪಟ್ಟಣದ ಗೌತಮ್ ಪೋಷಕರ ವಿರೋಧದ ಮಧ್ಯೆಯೂ ಸೆಪ್ಟೆಂಬರ್ 25ರಂದು ಪುಣೆ ಕೋರ್ಟ್ನಲ್ಲಿ ವಿವಾಹವಾಗಿದರು. ಆದರೆ ಅಂತರ್ಜಾತಿಯ ನೆಪವೊಡ್ಡಿ ಪೋಷಕರು ವಿರೋಧಿಸಿದ್ದಾರೆ. ಇದ್ರಿಂದ ನವದಂಪತಿಗಳು ಬಸ್ನಲ್ಲಿ ಪ್ರಯಾಣ ಮಾಡ್ತಲೇ ಕಾಲ ಕಳೆಯುತ್ತಿದ್ದಾರೆ.
ಇನ್ನು ಈ ಜೋಡಿಗೆ ಜೀವ ಭಯ ಇದ್ದು ರಕ್ಷಣೆಗಾಗಿ ಪೊಲೀಸರ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.ಪ್ರೀತಿಸಿ ಮದ್ವೆಯಾದ ಪ್ರೇಮಿಗಳಿಗೆ ಒಂದೆಡೆ ಜೀವ ಭಯವಿದ್ರೆ ಮತ್ತೊಂದೆಡೆ ಸಂಚರಿಸುತ್ತಲೇ ಕಾಲ ಕಳೆಯುತ್ತಿದ್ದಾರೆ. ಇವರಿಗೆ ಸೂಕ್ತ ರಕ್ಷಣೆಯ ಅವ್ಯಕತೆ ಇದೆ.