ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು ನಂಬಿದ್ದಾರೆ.

ಮೊದಲು ದಕ್ಷಿಣದತ್ತ ವಾಲಿ ಚಲಿಸುತ್ತಿದ್ದ ಸೂರ್ಯ, ಸಂಕ್ರಮಣ ದಿನದಿಂದ ಉತ್ತರ ದಿಕ್ಕಿಗೆ ತಿರುಗಿ ಚಲಿಸುತ್ತಾನೆ. ಆಯನ ಎಂದರೆ ಚಲಿಸುವುದು, ಆದರಿಂದ ಉತ್ತರಾಯಣ, ದಕ್ಷಿಣಾಯನ ಎಂದು ಹೆಸರು ಸೃಷ್ಟಿಯಾಗಿದ್ದು. ಹೀಗೆ ಸೂರ್ಯ ಪಥ ಬದಲಾಗುವುದರಿಂದ ನಮ್ಮ ದೇಶದಲ್ಲಿ ಈ ಸಮಯಕ್ಕೆ ಚಳಿ ಕಡಿಮೆಯಾಗಿ ಹಗಲು ಹೆಚ್ಚು ಸಂಭವಿಸುತ್ತದೆ.

ಎಲ್ಲಿ ಹೇಗೆ ಹಬ್ಬ ಆಚರಣೆ?
ಕರ್ನಾಟಕದಲ್ಲಿ ಸಂಕ್ರಾಂತಿ ಎಂದು ಆಚರಿಸಿದರೆ, ನೆರೆಯ ತಮಿಳುನಾಡು ಹಾಗೂ ಆಂಧ್ರ ಪ್ರದೇಶದಲ್ಲಿ ಭೋಗಿ, ಕನುಹಬ್ಬ ಎಂದು ಮೂರುದಿನಗಳ ಕಾಲ ಈ ಹಬ್ಬವನ್ನು ಆಚರಿಸುತ್ತಾರೆ. ಮಕರ ಸಂಕ್ರಾಂತಿಯೂ ಸುಗ್ಗಿಯನ್ನು ಸಾರುವ ಹಬ್ಬವಾಗಿದ್ದು, ದ್ರಾವಿಡ ಸಂಪ್ರದಾಯವನ್ನು ಪಾಲಿಸುವವರಿಗೆ ಇದೊಂದು ವಿಶೇಷ ಸಂಭ್ರಮದ ದಿನವಾಗಿರುತ್ತದೆ. ಸಂಕ್ರಾಂತಿ ದಿನದಂದು ವಿವಾಹಿತ ಹಾಗೂ ಅವಿವಾಹಿತ ಹೆಣ್ಣುಮಕ್ಕಳು ಎಳ್ಳು-ಬೆಲ್ಲ, ಕೊಬ್ಬರಿ, ನೆಲಗಡಲೆ, ಕಬ್ಬು ಬಾಳೆಹಣ್ಣು, ಸಕ್ಕರೆ ಅಚ್ಚು ಇತ್ಯಾದಿಗಳನ್ನು ಎಲ್ಲರಿಗೂ ಹಂಚಿ ಸಂಭ್ರಮಿಸುತ್ತಾರೆ. ಆಂಧ್ರದಲ್ಲಿ ಈ ದಿನದಂದು ಶ್ರೀರಾಮನ ಪೂಜೆ ಮಾಡಿ, ರೈತರು ಜಾನುವಾರುಗಳಿಗೆ ಮೈತೊಳೆದು, ಅದನ್ನು ಸಿಂಗರಿಸಿ ಮೆರವಣಿಗೆ ಮಾಡುತ್ತಾರೆ. ಅದರಲ್ಲೂ ಸಂಕ್ರಮಣದ ದಿನದ ಸಂಜೆ ಎತ್ತುಗಳಿಗೆ ಕಿಚ್ಚು ಹಾಯಿಸುವುದು ಈ ಹಬ್ಬದ ವಿಶೇಷ.

ಎಳ್ಳಿಗೆ ಮಹತ್ವ ಯಾಕೆ?
ಮಕರ ಸಂಕ್ರಾಂತಿಯ ಇನ್ನೊಂದು ಹೆಸರು ಉತ್ತರಾಯಣ ಪುಣ್ಯಕಾಲ. ಇಡೀ ಉತ್ತರಾಯಣವೇ ದೇವತೆಗಳಿಗೆ ಪ್ರಿಯವಾದದ್ದು. ದೇವಕಾರ್ಯ, ಶುಭ ಕಾರ್ಯಗಳಿಗೆ ಈ ದಿನ ಬಹಳ ಪ್ರಾಶಸ್ತ್ಯವಾಗಿದೆ. ಇಂತಹ ಉತ್ತರಾಯಣವನ್ನು ಪ್ರಾರಂಭಿಸುವ ದಿನವಾದ ಮಕರ ಸಂಕ್ರಾಂತಿಗೆ ವಿಶೇಷವಾದ ಮಾನ್ಯತೆಯಿದೆ. ಈ ದಿನ ಶ್ರದ್ಧಾಭಕ್ತಿಯಿಂದ ಮಾಡುವ ಸ್ನಾನ, ಧ್ಯಾನ, ದಾನ, ಹೋಮ, ಪೂಜೆ, ತರ್ಪಣ, ಶ್ರಾದ್ಧ ಮುಂತಾದುವುಗಳಿಗೆ ವಿಶೇಷವಾದ ಫಲ ಸಿಗುತ್ತದೆ ಎನ್ನುವ ವಿಚಾರ ಹಲವು ಶಾಸ್ತ್ರಗಳಲ್ಲಿ ಉಲ್ಲೇಖವಾಗಿದೆ.

ಸಂಕ್ರಾಂತಿ ದಿನದಂದು ಕಪ್ಪು ಎಳ್ಳಿನೊಂದಿಗೆ ಸ್ನಾನ ಮಾಡಿ ಎಳ್ಳುದಾನ ಕೊಟ್ಟರೆ ಒಳ್ಳೆಯದಾಗುತ್ತದೆ ಎನ್ನುವ ನಂಬಿಕೆಯಿದೆ. ಹಾಗೆಯೇ ದೇವಾಲಯಗಳಲ್ಲಿ ಎಳ್ಳೆಣ್ಣೆ ಹಾಕಿ ದೀಪ ಬೆಳಗಬೇಕು. ಈ ದಿನ ನಾವು ಮಾಡಿದ ದಾನ ಧರ್ಮಗಳ ಪುಣ್ಯವು ಜನ್ಮ ಜನ್ಮದಲ್ಲೂ ಸದಾ ನಮಗೆ ಶ್ರೇಯಸ್ಸು ಸಿಗುವಂತೆ ಸೂರ್ಯನು ಅನುಗ್ರಹಿಸುತ್ತಾನೆ ಎಂದು ಹಿರಿಯರು ಹೇಳುತ್ತಾರೆ. `ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತನಾಡು’ ಎಂಬ ಕನ್ನಡದ ಗಾದೆಗೆ ಸಂಕ್ರಾಂತಿ ಹಬ್ಬವೇ ಮೂಲವಾಗಿರುವುದು ಎಂದು ಹಲವರು ಹೇಳುತ್ತಾರೆ.

ಸಂಕ್ರಾಂತಿಯು ಸೌರಮಾನದ ಹಬ್ಬ. ಮಕರ ಮಾಸದದಲ್ಲಿ ಮಾಡುವ ಮಕರ ಸಂಕ್ರಮಣ ಆಚರಣೆ, ಚಾಂದ್ರಮಾನದಂತೆ ಪುಷ್ಪಮಾಸದಲ್ಲಿ ಇದು ಬರುತ್ತದೆ. ಎಳ್ಳಿನ ಹಬ್ಬ ಎಂದೇ ಪ್ರಸಿದ್ಧಿಯಾಗಿರುವ ಸಂಕ್ರಮಣ ಹಬ್ಬದಲ್ಲಿ ಎಳ್ಳನ್ನು ನಾನಾ ರೂಪದಲ್ಲಿ ಬಳಸುತ್ತಾರೆ. ಕೆಲವರು ಎಳ್ಳಿನಿಂದ ಸ್ನಾನ ಮಾಡುತ್ತಾರೆ. ಎಳ್ಳಿನ ನೀರಿನಿಂದ ತರ್ಪಣ ಕೊಡುತ್ತಾರೆ, ಎಳ್ಳಿನಿಂದ ಮಾಡಿದ ಗೋವನ್ನು ದಾನ ಮಾಡುತ್ತಾರೆ. ಮಕ್ಕಳಿಗೆ ಆರತಿ ಎತ್ತಿ, ಗುರು ಹಿರಿಯರಿಗೆ ನಮಸ್ಕಾರ ಮಾಡಿ ಆರ್ಶಿವಾದ ಪಡೆಯುವುದು ಸಂಕ್ರಾತಿ ಹಬ್ಬದ ಒಂದು ವಿಶೇಷ ಪದ್ಧತಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. 27 ವರ್ಷದ ಮಂಜುನಾಥ್ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…
ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್ಮೆಷಿನ್, ಫ್ರಿಜ್ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ.
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.
ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…
ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.