ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ
ಕೋಲಾರ: ಮಾಲೂರು ತಾಲ್ಲೂಕಿನ ತರ್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ 27-08-2021 ರಂದು ನೊಂದ ಬಾಲಕಿಯ ಹೇಳಿಕೆಯ ಪಡೆದು, ಅದರ ಅನ್ವಯ ಮಾಲೂರು ಪೋಲೀಸ್ ಠಾಣಾಧಿಕಾರಿ ಸಿ.ಆರ್. 262/2021 ರಂತೆ ಕಲಂ 376 (2) (ಎನ್) ಐ.ಪಿ.ಸಿ. ಮತ್ತು ಪೋಕ್ಸೊ ಕಾಯ್ದೆ ಅಡಿ ಪೋಲೀಸರು ಪ್ರಕರಣವನ್ನು ದಾಖಲಿಸಿಕೊಂಡು, ತನಿಖೆ ನಡೆಸಿದ ವೃತ್ತ ನಿರೀಕ್ಷಕರಾದ ಮಾರ್ಕೋಡಯ್ಯರವರು ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿರುತ್ತಾರೆ.
ಸ್ಪೆಷಲ್ ಸಿ. (ಪೋಕ್ಸೋ) 58/2021 ರ ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಬಿ.ಪಿ.ದೇವಮಾನೆ ರವರು ವಿಚಾರಣೆ ನಡೆಸಿದ್ದು, ಆರೋಪ ರುಜುವಾತಾದ ಹಿನ್ನಲೆ ಕಲಂ 376 ಐ.ಪಿ.ಸಿ. ಮತ್ತು 6 ಪೋಕ್ಸೊ ಕಾಯ್ದೆ ಅಡಿ 27-02-2023 ರಂದು ಆರೋಪಿಗೆ 20 ವರ್ಷ ಸಜೆ ಜೊತೆಗೆ ರೂ. 25,000/-ಗಳ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳ ಸಜೆಯನ್ನು ವಿಧಿಸಿ, ನೊಂದ ಬಾಲಕಿಗೆ ರೂ.5.00,000/- ಗಳನ್ನು ಪರಿಹಾರ ನೀಡುವಂತೆ ತೀರ್ಪು ಪ್ರಕಟಿಸಿದ್ದಾರೆ. ಸದರಿ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಡಿ.ಲಲಿತ ಕುಮಾರಿ ರವರು ವಾದ ಮಂಡಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…
ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ. ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…
ತಾವು ಬುದ್ದಿವಂತರು ವಿಚಾರವಾದಿಗಳು ಅಂತ ಹೇಳಿಕೊಳ್ಳುವ ಕೆಲವರು ಹಿಂದೂ ದೇವತೆಗಳನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡುಬಿಟ್ಟಿದ್ದಾರೆ. ಅವರಲ್ಲಿ ಒಬ್ಬರು ಪ್ರೊಫೆಸರ್ ಭಗವಾನ್. ಯಾವಾಗಲೂ ಹಿಂದೂ ದೇವತೆಗಳ ಬಗ್ಗೆ ಒಂದಲ್ಲಾ ಒಂದು ಹೇಳಿಕೆ ವಿವಾದಾತ್ಮಕ ಕೊಟ್ಟು ಸುದ್ದಿಯಾಗುವ ಇವರು ಈಗ ಮತ್ತೊಂದು ವಿವಾದದ ಸುದ್ದಿಯಲ್ಲಿದ್ದಾರೆ. ವಿಚಾರವಾದಿ ಆಗಿರುವ ಪ್ರೊಫೆಸರ್ ಭಗವಾನ್ ಮತ್ತೊಂದು ವಿವಾದಾತ್ಮಕ ಪುಸ್ತಕ ಬರೆದಿದ್ದು, ಅದರಲ್ಲಿ ರಾಮ ಒಬ್ಬ ಕುಡುಕ, ಮಾಂಸ ತಿನ್ನುತ್ತಿದ್ದನೆಂದು ಉಲ್ಲೇಖಿಸಿ, ಭಕ್ತರ ಭಾವನೆಗಳನ್ನು ಕೆರಳಿಸುವ ಮೂಲಕ ಇದೀಗ ಮತ್ತೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪ್ರೊಫೆಸರ್ ಭಗವಾನ್ರವರು…
ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…
ಶನಿ ಭಗವಾನನ ‘ಕೆಟ್ಟ ಪ್ರಭಾವ’ದಿಂದ, ಪರಿಣಾಮಗಳಿಂದ ಪಾರಾಗಲು ಭಗವಾನ್ ಹನುಮಂತನ ಪ್ರಾರ್ಥನೆಯೊಂದೇ ಸರ್ವ ಔಷಧಿ.
ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಬಿಳಿ ಕೂದಲನ್ನು ಕಪ್ಪಾಗಿಸುವ ವಿಧಾನಗಳು ಇಲ್ಲಿವೆ. ಒಣಗಿದ ನೆಲ್ಲಿಕಾಯಿಯನ್ನು ಕೊಬ್ಬರಿ ಎಣ್ಣೆಯ ಜೊತೆ ಕುದಿಸಿ, ಅದು ತಣ್ಣಗಾದ ಮೇಲೆ ಅದನ್ನು ತಲೆಗೆ ಹಚ್ಚಬೇಕು. ವಾರಕ್ಕೆ ಎರಡು ಬಾರಿ ಹೀಗೆ ಮಾಡಿದಲ್ಲಿ ಬಿಳಿ ಕೂದಲಿನ ಸಮಸ್ಯೆ ದೂರವಾಗುತ್ತದೆ. ತೆಂಗಿನೆಣ್ಣೆಯೊಡನೆ ನಿಂಬೆಹಣ್ಣಿನ ರಸವನ್ನು ಬೆರೆಸಿ ತಲೆಗೆ ಹಚ್ಚಿ….