ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.

ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಪ್ರಣಾಳಿಕೆ ರಚಿಸಿರುವ ಸಚಿವ ಡಾ.ಸುಧಾಕರ್ ನೇತೃತ್ವದ ಸಮಿತಿಯು ವಿವಿಧ ವಲಯಗಳ ನಿರೀಕ್ಷೆಗಳು, ಅಗತ್ಯತೆಗಳ ಕುರಿತು ವಲಯವಾರು ತಜ್ಞರ ಜೊತೆ ಸಂವಾದ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿ, ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ.
ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?:
ಬಿಪಿಎಲ್ ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ.
ಕೈಗೆಟುಕುವ ದರದಲ್ಲಿ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸಲು ರಾಜ್ಯದ ಪ್ರತಿ ಮಹಾನಗರ ಪಾಲಿಕೆಯ ವಾರ್ಡ್‍ಗಳಲ್ಲಿ ಅಟಲ್ ಆಹಾರ ಕೇಂದ್ರವನ್ನು ಸ್ಥಾಪಿಸುತ್ತೇವೆ.
ಪೋಷಣೆ ಯೋಜನೆಯ ಮೂಲಕ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ಮತ್ತು ಪ್ರತಿ ತಿಂಗಳು 5 ಕೆಜಿ ಶ್ರೀ ಅನ್ನ- ಸಿರಿ ಧಾನ್ಯವನ್ನು ಒಳಗೊಂಡ ಪಡಿತರ ಕಿಟ್ ನೀಡುತ್ತೇವೆ.
ವಿಶ್ವೇಶ್ವರಯ್ಯ ವಿದ್ಯಾ ಯೋಜನೆ ಇದರಡಿ ಸರ್ಕಾರಿ ಶಾಲೆಗಳನ್ನು ಅತ್ಯುನ್ನತ ಶ್ರೇಣಿಗೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಬುದ್ಧರು ಹಾಗೂ ಸಂಸ್ಥೆಗಳ ಜತೆ ಸಹಭಾಗಿತ್ವ ಹೊಂದಲಾಗುತ್ತದೆ.
ಸಮನ್ವಯ ಯೋಜನೆ ಇದರಡಿ ತ್ವರಿತಗತಿಯಲ್ಲಿ SME ಗಳು ಮತ್ತು ITI ಗಳ ನಡುವೆ ಸಮನ್ವಯತೆ ಸಾಧಿಸುತ್ತೇವೆ. ಪ್ರತಿಭಾವಂತ ಯುವ ವೃತ್ತಿಪರರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಕ್ರಿಯಾತ್ಮಕ ಪರಿಸರ ವ್ಯವಸ್ಥೆಯನ್ನು ನಿರ್ಮಾಣ ಮಾಡುತ್ತೇವೆ.
ಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿ ಯೋಜನೆಯನ್ನು ಪ್ರಾರಂಭಿಸುತ್ತೇವೆ. ಈ ಯೋಜನೆಯಡಿ ಎಸ್‍ಸಿ, ಎಸ್‍ಟಿ ಸಮುದಾಯದ ಮಹಿಳೆಯರು 5 ವರ್ಷಗಳ ಅವಧಿಗೆ ಮಾಡುವ ಸ್ಥಿರ ಠೇವಣಿಗಳ ಮೇಲೆ – 10 ಸಾವಿರದವರೆಗೆ ತಾಳಿಯಾಗುವ ಠೇವಣಿ ನೀಡುತ್ತೇವೆ.
ಬೆಂಗಳೂರಿನ ಅಪಾರ್ಟ್‌ಮೆಂಟ್‌ಗಳಲ್ಲಿ ಸುಲಲಿತ ಜೀವನಕ್ಕೆ ಕರ್ನಾಟಕ ಅಪಾರ್ಟ್ ಮೆಂಟ್ ಮಾಲೀಕತ್ವ ಕಾಯಿದೆ 1972ಕ್ಕೆ ಸೂಕ್ತ ತಿದ್ದುಪಡಿಗಳನ್ನು ತರುತ್ತೇವೆ ಹಾಗೂ ಕಂದುಕೊರತೆಗಳ ಪರಿಹಾರಕ್ಕೆ ಆನ್ ಲೈನ್ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುತ್ತೇವೆ.
ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುತ್ತೇವೆ.

ರಾಜ್ಯದಾದ್ಯಂತ ನಿವೇಶನ ರಹಿತ, ವಸತಿ ರಹಿತ ನಿವಾಸಿಗಳಿಗೆ ಸರ್ವರಿಗೂ ಸೂರು ಯೋಜನೆಯಡಿ 10 ಲಕ್ಷ ವಸತಿ ನಿವೇಶನಗಳನ್ನು ಕಂದಾಯ ಇಲಾಖೆ ಮೂಲಕ ಹಂಚಿಕೆ ಮಾಡುತ್ತೇವೆ.
ಐಎಎಸ್, ಕೆಎಎಸ್, ಬ್ಯಾಂಕಿಂಗ್, ಸರ್ಕಾರಿ ಉದ್ಯೋಗಾಕಾಂಕ್ಷಿಗಳು ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹವನ್ನು ನೀಡುವ ಮೂಲಕ ಮಹತ್ವಾಕಾ೦ಕ್ಷೆಯ ಯುವಜನರಿಗೆ ವೃತ್ತಿ ಬೆಂಬಲವನ್ನು ಒದಗಿಸುತ್ತೇವೆ.
ಮಿಷನ್ ಸ್ವಾಸ್ಥ್ಯ ಕರ್ನಾಟಕದ ಅಡಿ ಸರ್ಕಾರಿ ಆಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿನ ಮೂಲಸೌಕರ್ಯಗಳನ್ನು ಸುಧಾರಿಸುತ್ತೇವೆ. ಮಹಾನಗರ ಪಾಲಿಕೆಯ ಪ್ರತಿ ವಾರ್ಡ್‍ನಲ್ಲಿ ಲ್ಯಾಬೊರೇಟರಿ ಸೌಲಭ್ಯ ಹೊಂದಿರುವ ನಮ್ಮ ಕ್ಲಿನಿಕ್ ಸ್ಥಾಪಿಸುತ್ತೇವೆ. ಹಾಗೂ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಉಚಿತವಾಗಿ ಸಂಪೂರ್ಣ ಆರೋಗ್ಯ ತಪಾಸಣೆಯ ಸೌಲಭ್ಯ ಕಲ್ಪಿಸುತ್ತೇವೆ.
ನಮ್ಮ ಮುಂದಿನ ಪೀಳಿಗೆಗಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಿ, ಅದನ್ನು ರಾಜ್ಯ ರಾಜಧಾನಿ ಪ್ರದೇಶ ಎಂದು ಗುರುತಿಸಲಾಗುತ್ತದೆ. ತಂತ್ರಜ್ಞಾನ ಆಧಾರಿತ ನಗರ ಅಭಿವೃದ್ಧಿ ಕಾರ್ಯಕ್ರಮವನ್ನು ಕಾರ್ಯಗತಗೊಳಿಸುತ್ತೇವೆ. ಸುಲಲಿತ ಜೀವನಕ್ಕೆ ಅನುವುಮಾಡಿಕೊಡುವ ಸುಸಂಘಟಿತ ಸಾರಿಗೆ ಜಾಲ ಸೃಷ್ಟಿಸುತ್ತೇವೆ. ಅಲ್ಲದೇ, ಬೆಂಗಳೂರನ್ನು ಡಿಜಿಟಲ್ ಇನ್ನೋವೇಶನ್‍ನ ಜಾಗತಿಕ ಕೇಂದ್ರವಾಗಿ ರೂಪಿಸಲು ಪೂರಕ ಪರಿಸರ ವ್ಯವಸ್ಥೆ ಕಲ್ಪಿಸುತ್ತೇವೆ.

ಕರ್ನಾಟಕವನ್ನು ಎಲೆಕ್ಟ್ರಿಕ್ ವಾಹನಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸುತ್ತೇವೆ. ಪೂರಕವಾಗಿ, ಚಾಜಿರ್ಂಗ್ ಸ್ಟೇಷನ್‍ಗಳ ಸ್ಥಾಪನೆ, 1,000 ಸ್ಟಾರ್ಟ್ ಅಪ್‍ಗಳಿಗೆ ಪ್ರೋತ್ಸಾಹ, ಹಾಲಿ ಇರುವ ಬಿಎಂಟಿಸಿ ಬಸ್‍ಗಳನ್ನು ಎಲೆಕ್ಟ್ರಿಕ್ ಬಸ್‍ಗಳಾಗಿ ಪರಿವರ್ತಿಸುತ್ತೇವೆ. ಜತೆಗೆ ಬೆಂಗಳೂರಿನ ಹೊರವಲಯದಲ್ಲಿ ಇಬಿ ಸಿಟಿ ಅಭಿವೃದ್ಧಿಗೊಳಿಸುವುದು.
ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಿರು ಶೀತಲೀಕರಣ ಸೌಲಭ್ಯಗಳು ಮತ್ತು ಕೃಷಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 30,000 ಕೋಟಿ ಮೊತ್ತದ ಕೆ-ಅಗ್ರಿ ಫಂಡ್ ಸ್ಥಾಪಿಸುತ್ತೇವೆ. ಎಪಿಎಂಸಿಗಳ ಆಧುನೀಕರಣ ಮತ್ತು ಡಿಜಿಟಲೀಕರಣ ಮಾಡುತ್ತೇವೆ. ಕೃಷಿ ಯಾಂತ್ರೀಕರಣಕ್ಕೆ ಒತ್ತು ನೀಡುತ್ತೇವೆ. ಜತೆಗೆ, 5 ಹೊಸ ಕೃಷಿ ಆಧಾರಿತ ಕೈಗಾರಿಕಾ ಕ್ಲಸ್ಟರ್‍ಗಳು ಮತ್ತು 3 ಹೊಸ ಆಹಾರ ಸಂಸ್ಕರಣಾ ಪಾರ್ಕ್‍ಗಳನ್ನು ಸ್ಥಾಪಿಸುತ್ತೇವೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಅರವಿಂದ್ ಲಿಂಬಾವಳಿ, ಶೋಭಾರಂದ್ಲಾಜೆ, ಧಮೇರ್‍ಂದ್ರ ಪ್ರಧಾನ್ ಇತರರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು. ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ…
ರಿಲಾಯನ್ಸ್ ಜಿಯೋ ಬ್ರಾಡ್ ಬ್ಯಾಂಡ್ ಕ್ಷೇತ್ರದಲ್ಲಿ ಅತೀ ಶೀಘ್ರದಲ್ಲೇ ಸಂಚಲನ ಮೂಡಿಸಲಿದೆ.
ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…
ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…
ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…