ಸುದ್ದಿ

ತಮಿಳುನಾಡು ವಿರುದ್ಧ 1 ರನ್ ರೋಚಕ ಗೆಲುವು ಸಾಧಿಸಿ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮನೀಶ್ ಪಾಂಡೆ.

By admin

December 02, 2019

ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್‍ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್‍ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್‍ರೈಸರ್ಸ್ ಹೈದರಾಬಾದ್ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಪ್ರಕಾರ ಮದುವೆಯ ಆಚರಣೆ ಇನ್ನೂ ಎರಡು ದಿನಗಳ ಕಾಲ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರು ಭಾಗಿಯಾಗಿದ್ದಾರೆ. 

2012ರಲ್ಲಿ ‘ತೆಲಿಕೆದ ಬೊಳ್ಳಿ’ ತುಳು ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಆಶ್ರಿತಾ ‘ಇಂದ್ರಜಿತ್’, ‘ಒರು ಕಣ್ಣಿಯುನ್ ಮೂನು ಕಲಾವಾನಿಕಲಂ’, ‘ಉದಯಂ ಎನ್.ಎಚ್4’ ಸೇರಿದಂತೆ ಹಲವು ಚಿತಗಳಲ್ಲಿ ನಟಿಸಿದ್ದಾರೆ. ಬ್ಯೂಟಿ ಕಾಂಪಿಟೇಶನ್ ಭಾಗವಹಿಸಿದ ಆಶ್ರಿತಾ ಜಾಹೀರಾತುಗಳಲ್ಲಿಯೂ ಅಭಿನಯಿಸಿದ್ದಾರೆ.ಭಾನುವಾರ ನಡೆದ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮನೀಶ್ ಪಾಂಡೆ ಅವರ ನಾಯಕತ್ವದಲ್ಲಿ ತಮಿಳುನಾಡಿನ ತಂಡದ ವಿರುದ್ಧ ಕರ್ನಾಟಕ ತಂಡ ಜಯಗಳಿಸಿದೆ. ಈ ಪಂದ್ಯದಲ್ಲಿ ಮನೀಶ್ 60 ರನ್‍ಗಳನ್ನು ಗಳಿಸಿದ್ದಾರೆ.