ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ ಶಾಲೆಯ ಮೂಲಕವೇ ಅಂಕಪಟ್ಟಿಗೆ ಅರ್ಜಿ ಸಲ್ಲಿಸಬಹುದು. ಇದರ ಜತೆಗೆ ಆಧಾರ್ ನಕಲು ಪ್ರತಿ ನೀಡಬೇಕು.

ಎಸೆಸೆಲ್ಸಿ ಅಂಕಪಟ್ಟಿಗೆ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳ ಮೊಬೈಲ್ ಸಂಖ್ಯೆಯ ಜತೆಗೆ ಶಾಲೆಯ ಮುಖ್ಯ ಶಿಕ್ಷಕರ ಮೊಬೈಲ್ ಸಂಖ್ಯೆ ಯನ್ನು ಕಡ್ಡಾಯವಾಗಿ ನಮೂದಿಸಲೇ ಬೇಕು. ಮಂಡಳಿಯಿಂದ ಶಾಲೆಗೆ ಬಂದಿರುವ ಅಂಕಪಟ್ಟಿಯನ್ನು ಅಭ್ಯರ್ಥಿಗಳಿಗೆ ವಿತರಣೆ ಮಾಡುವಾಗ ಅಭ್ಯರ್ಥಿಯ ವಿಳಾಸ, ನೋಂದಣಿ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯನ್ನು ಸೂಕ್ಷ್ಮವಾಗಿ ಗಮನಿಸಬೇಕು. ಅಭ್ಯರ್ಥಿಗಳನ್ನು ಹೊರತುಪಡಿಸಿ ಬೇರೆಯಾರಿಗೂ ಅಂಕಪಟ್ಟಿ ನೀಡಕೂಡದು ಎಂದು ಮಂಡಳಿಯಿಂದ ಎಚ್ಚರಿಕೆಯನ್ನು ನೀಡಲಾಗಿದೆ. ಎಸೆಸೆಲ್ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅದೇ ಶೈಕ್ಷಣಿಕ ವರ್ಷದಲ್ಲಿ ಅಂಕಪಟ್ಟಿ ವಿತರಣೆ ಮಾಡಲಾಗುತ್ತದೆ. ಆದರೆ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಥವಾ ಪೂರಕ ಪರೀಕ್ಷೆಯನ್ನು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ, ಖಾಸಗಿ ಅಭ್ಯರ್ಥಿಗಳಿಗೆ, ಪುನರಾವರ್ತಿತ ಅಭ್ಯರ್ಥಿಗಳಿಗೆ ಅಂಕಪಟ್ಟಿ ವಿತರಣೆ ಸ್ವಲ್ಪ ವಿಳಂಬವಾಗುತ್ತದೆ.

ಏಕೆ ಈ ಕ್ರಮ? : ವಿದ್ಯಾರ್ಥಿ ವ್ಯಾಸಂಗ ಮಾಡಿದ ಶಾಲೆಯಿಂದಲೇ ಅಂಕಪಟ್ಟಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಯು ಎರಡನೇ, ಮೂರನೇ ಅಥವಾ ನಾಲ್ಕನೇ ಅಂಕಪಟ್ಟಿಗೆ ಅಥವಾ ತಿದ್ದುಪಡಿ ಅಂಕಪಟ್ಟಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಅರ್ಜಿಯನ್ನು ಸರಿಯಾಗಿ ಪರಿಶೀಲನೆ ಮಾಡದೆ, ಅಪೂರ್ಣ ಮಾಹಿತಿಯನ್ನು ಅರ್ಜಿಯನ್ನು ಮತ್ತು ಅಭ್ಯರ್ಥಿಗಳಿಗೆ ಅಂಕಪಟ್ಟಿ ನೀಡುವಾಗ ತಪ್ಪುಗಳಿರುವುದನ್ನು ಪರಿಶೀಲಿಸದೆ ನೀಡುತ್ತಿರುವುದು ಮಂಡಳಿಯ ಗಮನಕ್ಕೆ ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಶಾಲಾ ಮುಖ್ಯಶಿಕ್ಷಕರಿಗೆ ಅಗತ್ಯ ನಿರ್ದೇಶನ ನೀಡಲಾಗಿದೆ ಎಂದು ಮಂಡಳಿಯ ಹಿರಿಯ ಅಧಿಕಾರಿ “ಉದಯವಾಣಿ’ಗೆ ಮಾಹಿತಿ ನೀಡಿದರು.

ಎಚ್ಚರ ವಹಿಸಿ! : ಇತ್ತೀಚಿನ ದಿನಗಳಲ್ಲಿ ಅಂಕಪಟ್ಟಿಯಲ್ಲಿ ಹಲವು ರೀತಿಯಲ್ಲಿ ಲೋಪವಾಗುತ್ತಿದೆ ಎಂಬ ಆರೋಪ ಬಂದಿರುವ ಹಿನ್ನೆಲೆಯಲ್ಲಿ ಅಂಕಪಟ್ಟಿ ವಿತರಣೆಗೆ ಮುನ್ನ ಸೂಕ್ಷ್ಮ ಪರಿಶೀಲನೆ ಮಾಡಬೇಕು ಎಂದಿದೆ ಪ್ರೌಢಶಿಕ್ಷಣ ಮಂಡಳಿ. ಅಂಕಪಟ್ಟಿಯಲ್ಲಿನ ಅಭ್ಯರ್ಥಿ, ತಂದೆ, ತಾಯಿಯ ಹೆಸರು, ಜನ್ಮ ದಿನಾಂಕ ಇತ್ಯಾದಿ ತಪ್ಪುಗಳಾಗಿದ್ದಲ್ಲಿ ತಿದ್ದುಪಡಿಗೆ ಅರ್ಜಿ ಸಲ್ಲಿಸಿದಾಗ ಅದನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ವಿದ್ಯಾರ್ಥಿಯು ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುವಾಗ ನೀಡಿರುವ ದಾಖಲೆಗಳನ್ನೇ ಪ್ರೌಢಶಾಲೆಗೆ ನೀಡಲಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಪ್ರಾಥಮಿಕ ಶಾಲೆಯಲ್ಲಿ ಒಂದು ರೀತಿಯ ದಾಖಲೆ ಹಾಗೂ ಪ್ರೌಢಶಾಲೆಗೆ ಇನ್ನೊಂದು ರೀತಿಯ ದಾಖಲೆ ನೀಡಿದರೆ ಅಂತಹ ಪ್ರಸ್ತಾವನೆಯನ್ನು ಮಂಡಳಿಗೆ ಸಲ್ಲಿಸುವ ಮೊದಲು ಎಲ್ಲ ನಿಯಮಗಳನ್ನು ಸರಿಯಾಗಿ ಅರಿತುಕೊಳ್ಳಬೇಕು ಎಂದು ಮುಖ್ಯ ಶಿಕ್ಷಕರಿಗೆ ಮಂಡಳಿ ಖಡಕ್ ಎಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬರಿ ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…
ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್ಆರ್ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…
ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ಇಡೀ ದೇಶದ ಗಮನ ಸೆಳೆದಿದೆಮಂಡ್ಯ ಲೋಕಸಭಾ ಕ್ಷೇತ್ರ. ಅದರಲ್ಲೂ ಸುಮಲತಾ ಪರವಾಗಿ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಪ್ರಚಾರ ನಡೆಸುತ್ತಿದ್ದು ಸಿಎಂ ಸೇರಿದಂತೆ ಜೆಡಿಎಸ್ ನಾಯಕರು ಸುಮಲತಾ ಬೆಂಬಲಿಗರಾದ ಸ್ಟಾರ್ ನಟರ ಮೇಲೆ ವಾಗ್ದಾಳಿಯನ್ನೇ ನಡೆಸಿದ್ದಾರೆ. ಸ್ಟಾರ್ ನಟರನ್ನು ಕಳ್ಳೆತ್ತು ಎಂದು ಸಿಎಂ ಟೀಕಿಸಿದ್ದಕ್ಕೆ ಯಶ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ಯಾರ…
; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್, ಇಲೆಕ್ಟ್ರಾನಿಕ್ಸ್ ಕಂಮ್ಯೂನಿಕೇಷನ್ , ಇಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಂಮ್ಯೂನಿಕೇಷನ್ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್ ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…
ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಇಡೀ ದೇಶದ ಗಮನ ಸೆಳೆಯುತ್ತಿದೆ. ಉಭಯ ಪಕ್ಷಗಳ ಅಭ್ಯರ್ಥಿಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಈ ಮೊದಲು ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರು ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದರು. ಇದೀಗ ಮೈತ್ರಿ ಪಕ್ಷದ ಅಭ್ಯರ್ಥಿ ಹಾಗೂ…
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು, 32 ಒಬಿಸಿ, 9…