ಸುದ್ದಿ

ಪ್ರೇಯಸಿಯೊಂದಿಗೆ ಪತ್ನಿಯನ್ನೂ ಮರುಮದ್ವೆಯಾದ ಸಿಆರ್‌ಪಿಎಫ್ ಯೋಧ…ಕಾರಣ?

69

ರಾಯ್ಪುರ್: ಸಿಆರ್‌ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್‍ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.

Colorful Hindu wedding in India

ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್‌ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್‌ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಪ್ರೀತಿಸುತ್ತಿದ್ದರು.

ಸ್ಥಳೀಯರು ಪ್ರಕಾರ ಅನಿಲ್ ಪೈಕ್ರಾ ಅವರ ಮೊದಲ ಪತ್ನಿ ಮದುವೆಯಾಗಿ ನಾಲ್ಕು ವರ್ಷಗಳಾದರೂ ಮಕ್ಕಳಾಗಿರಲಿಲ್ಲ. ಹೀಗಾಗಿ ತಾವೂ ಪ್ರೀತಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯನ್ನು ಮದುವೆಯಾಗಲು ನಿರ್ಧರಿಸಿದರು. ಈ ಮದುವೆಗೆ ಮೊದಲ ಪತ್ನಿ ಕೂಡ ಒಪ್ಪಿಗೆ ಸೂಚಿಸಿದ್ದರು. ಆದ್ದರಿಂದ ಅನಿಲ್ ರಜೆ ಮೇಲೆ ಗ್ರಾಮಕ್ಕೆ ಬಂದಾಗ ತನ್ನ ಪ್ರೇಯಸಿಯ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದರು. ಇದೀಗ ಸಂಪ್ರದಾಯದಂತೆ ಪ್ರೇಯಸಿಯ ಜೊತೆ ಪತ್ನಿಯನ್ನು ಮರು ಮದುವೆಯಾಗಿದ್ದಾರೆ ಎಂದು ಪತ್ರಕರ್ತ ರಾಜೇಶ್ ಪಾಂಡೆ ಅವರು ತಿಳಿಸಿದ್ದಾರೆ.

ಕಾನೂನಿನ ಪ್ರಕಾರ ಸರ್ಕಾರಿ ಕೆಲಸದಲ್ಲಿರುವವರು ಮೊದಲ ಪತ್ನಿ ಬದುಕಿರುವಾಗಲೇ ಮತ್ತೊಂದು ಮದುವೆಯಾಗಬಾರದು. ಸೇವಾ ನಿಯಮಗಳ ಪ್ರಕಾರ ಏಕಕಾಲಕ್ಕೆ ಇಬ್ಬರು ಮಹಿಳೆಯರನ್ನು ಮದುವೆಯಾಗುವಂತಿಲ್ಲ. ಈ ರೀತಿ ಮಾಡಿದರೆ ನಿಯಮ ಉಲ್ಲಂಘಿಸಿದಂತಾಗುತ್ತದೆ. ಯಾವುದೇ ಜಾತಿ, ಧರ್ಮದ ಹೊರತಾಗಿ ಎಲ್ಲ ಸರ್ಕಾರಿ ನೌಕರರಿಗೂ ಈ ನಿಯಮ ಅನ್ವಯಿಸುತ್ತದೆ. ಆದರೆ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ವಿವಾಹವಾಗಿದ್ದಾರೆ. ಈ ಮೂಲಕ ಮುಂದೆ ಅವರಿಗೆ ಸಮಸ್ಯೆಯಾಗಲಿದೆ ಎಂದು ಸಿಆರ್ ಪಿಎಫ್ ವಕ್ತಾರ ಬಿಸಿ ಪತ್ರ ಅವರು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿದ್ಯುತ್ ದರ ಪ್ರತಿ ಯೂನಿಟ್ ಗೆ 33 ಪೈಸೆ ಏರಿಕೆ…ಕಾರಣ?

    ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್‍ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್‍ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ….

  • ದೇಶ-ವಿದೇಶ

    ಸೇನೆಯ ಮೇಲೆ ಕಲ್ಲು ತೂರಾಟ, ನಡೆಸಿದ ಯುವಕನಿಗೆ 10 ಲಕ್ಷ ಪರಿಹಾರ..!

    ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

  • ಜೀವನಶೈಲಿ

    ಮನೆಗಳಲ್ಲಿ ಮೂಲೆಗುಂಪಾಗಿರುವ ಈ ಹರಳೆಣ್ಣೆಯ ಮಹತ್ವ ಗೊತ್ತಾದ್ರೆ, ಈಗ್ಲೇ ಬಳಸೋದಕ್ಕೆ ಶುರು ಮಾಡ್ತೀರಾ…

    ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.

  • ಕರ್ನಾಟಕ

    ವೈದ್ಯರ ಮುಷ್ಕರದ ಪರಿಣಾಮ ರೋಗಿಗಳ ಸಾವು..!ತಿಳಿಯಲು ಈ ಲೇಖನ ಓದಿ..

    ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.

  • Uncategorized

    ಹಳ್ಳಿ ಹುಡುಗರಿಂದ ಕ್ರಿಕೆಟ್ ಕನ್ನಡದಲ್ಲಿ ಲೈವ್ ಕಾಮೆಂಟ್ರಿ

    ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ …. ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್‌ ಹಂತ ಪ್ರವೇಶಿಸಿತು. 237 ರನ್‌ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್‌ ಅಲಿ ಮತ್ತು ಫಕ್ರ್ ಜಮಾನ್‌ ಮೊದಲ ವಿಕೆಟ್‌ಗೆ 68 ಎಸೆತಗಳಲ್ಲಿ 74…