ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು.
ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್‌ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ.
ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ.
ಇದರ ಭಾಗವಾಗಿ ತರಕಾರಿ ತೊಳೆಯುವುದು, ಅಡುಗೆ ಮಾಡುವುದು ಎಲ್ಲ ಮಸೀದಿಯ ಪ್ರಾಂಗಣದಲ್ಲಿ ನಡೆಯಲಿದೆ. ಇದಕ್ಕೆ ಅಲ್ಲಿಯ ಜನರೂ ಕೈಗೂಡಿಸುತ್ತಾರಂತೆ.