ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ. ಕಲ್ಚರ್ಡ್ ಕಮೆಡಿಯನ್ ಎಂದು ಪ್ರಖ್ಯಾತರಾಗಿದ್ದ ಕೆ. ಹಿರಣ್ಣಯ್ಯ ಮತ್ತು ಶಾರದಮ್ಮ ದಂಪತಿಗಳ ಒಬ್ಬನೇ ಮಗ. ಓದಿದ್ದು ಇಂಟರ್ ಮೀಡಿಯೆಟ್ ವರೆಗೆ. 1952ರಲ್ಲಿ ತಂದೆಯೊಂದಿಗೆ ಕೂಡಿಕೊಂಡು ಅವರಿಂದಲೇ ರಂಗಶಿಕ್ಷಣ ಪಡೆದಿದ್ದರು.
ಇಂಟರ್ ಮೀಡಿಯೆಟ್ ಓದಿದ್ದ ಹಿರಣ್ಣಯ್ಯ, ತಂದೆ ಕೆ. ಹಿರಣ್ಣಯ್ಯ 1940ರಲ್ಲಿ ರಚಿಸಿ, ನಿರ್ದೇಶಿಸಿದ ‘ವಾಣಿ’ ಚಲನಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿಮಾ ಜಗತ್ತಿಗೆ ಪಾದಾರ್ಪಣೆ ಮಾಡಿದ್ದರು. ಬಳಿಕ 1948ರಲ್ಲಿ ರಂಗಭೂಮಿಯಲ್ಲಿ ಚಿಕ್ಕ ಪಾತ್ರದಲ್ಲಿ ನಟಿಸಿದ್ದರು.
ಅವರ ‘ಲಂಚಾವತಾರ’ ನಾಟಕವೊಂದೇ 10,000ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡ ದಾಖಲೆ ನಿರ್ಮಿಸಿದೆ.ತಮ್ಮ ಅಸಾಧಾರಣ ನಟನೆಗಾಘಿ ನಟರತ್ನಾಕರ, ಕಲಾಗಜಸಿಂಹ, ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ನಾಟಕ ಅಕಾಡಮಿ ಪ್ರಶಸ್ತಿ, ರಂಗಭೂಮಿ ಪ್ರಶಸ್ತಿ, ಗುಬ್ಬಿವೀರಣ್ಣ ಪ್ರಶಸ್ತಿ, ನೂಜೆರ್ಸಿ, ವಾಷಿಂಗ್‌ಟನ್ ಡಿ.ಸಿ., ಬಾಸ್ಟನ್, ಹೂಸ್ಟನ್, ನೂಯಾರ್ಕ್ ಮುಂತಾದೆಡೆಗಳಿಂದ ಸಂದ ಸನ್ಮಾನ, ನವರತ್ನಾರಾಂ ಪ್ರಶಸ್ತಿ, ಮದರಾಸು, ಹೈದರಾಬಾದು ಕನ್ನಡ ಸಂಘಗಳಿಂದ ಸನ್ಮಾನವೂ ಇವರಿಗೆ ಸಲ್ಲಿವೆ.
ಹಿರಣ್ಣಯ್ಯ ಪತ್ನಿ ಹಾಗೂ ಐವರು ಮಕ್ಕಳನ್ನು ಅಗಲಿದ್ದಾರೆ. ಇವರ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಇಂದು ಸಂಜೆ 6 ಗಂಟೆಗೆ ಹಿರಣ್ಣಯ್ಯ ಅಂತ್ಯ ಸಂಸ್ಕಾರ ನೆರವೇರಲಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ….
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.
ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.