ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ. ಕಲ್ಚರ್ಡ್ ಕಮೆಡಿಯನ್ ಎಂದು ಪ್ರಖ್ಯಾತರಾಗಿದ್ದ ಕೆ. ಹಿರಣ್ಣಯ್ಯ ಮತ್ತು ಶಾರದಮ್ಮ ದಂಪತಿಗಳ ಒಬ್ಬನೇ ಮಗ. ಓದಿದ್ದು ಇಂಟರ್ ಮೀಡಿಯೆಟ್ ವರೆಗೆ. 1952ರಲ್ಲಿ ತಂದೆಯೊಂದಿಗೆ ಕೂಡಿಕೊಂಡು ಅವರಿಂದಲೇ ರಂಗಶಿಕ್ಷಣ ಪಡೆದಿದ್ದರು.

ಇಂಟರ್ ಮೀಡಿಯೆಟ್ ಓದಿದ್ದ ಹಿರಣ್ಣಯ್ಯ, ತಂದೆ ಕೆ. ಹಿರಣ್ಣಯ್ಯ 1940ರಲ್ಲಿ ರಚಿಸಿ, ನಿರ್ದೇಶಿಸಿದ ‘ವಾಣಿ’ ಚಲನಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿಮಾ ಜಗತ್ತಿಗೆ ಪಾದಾರ್ಪಣೆ ಮಾಡಿದ್ದರು. ಬಳಿಕ 1948ರಲ್ಲಿ ರಂಗಭೂಮಿಯಲ್ಲಿ ಚಿಕ್ಕ ಪಾತ್ರದಲ್ಲಿ ನಟಿಸಿದ್ದರು.

ಅವರ ‘ಲಂಚಾವತಾರ’ ನಾಟಕವೊಂದೇ 10,000ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡ ದಾಖಲೆ ನಿರ್ಮಿಸಿದೆ.ತಮ್ಮ ಅಸಾಧಾರಣ ನಟನೆಗಾಘಿ ನಟರತ್ನಾಕರ, ಕಲಾಗಜಸಿಂಹ, ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ನಾಟಕ ಅಕಾಡಮಿ ಪ್ರಶಸ್ತಿ, ರಂಗಭೂಮಿ ಪ್ರಶಸ್ತಿ, ಗುಬ್ಬಿವೀರಣ್ಣ ಪ್ರಶಸ್ತಿ, ನೂಜೆರ್ಸಿ, ವಾಷಿಂಗ್‌ಟನ್ ಡಿ.ಸಿ., ಬಾಸ್ಟನ್, ಹೂಸ್ಟನ್, ನೂಯಾರ್ಕ್ ಮುಂತಾದೆಡೆಗಳಿಂದ ಸಂದ ಸನ್ಮಾನ, ನವರತ್ನಾರಾಂ ಪ್ರಶಸ್ತಿ, ಮದರಾಸು, ಹೈದರಾಬಾದು ಕನ್ನಡ ಸಂಘಗಳಿಂದ ಸನ್ಮಾನವೂ ಇವರಿಗೆ ಸಲ್ಲಿವೆ.
ಹಿರಣ್ಣಯ್ಯ ಪತ್ನಿ ಹಾಗೂ ಐವರು ಮಕ್ಕಳನ್ನು ಅಗಲಿದ್ದಾರೆ. ಇವರ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಇಂದು ಸಂಜೆ 6 ಗಂಟೆಗೆ ಹಿರಣ್ಣಯ್ಯ ಅಂತ್ಯ ಸಂಸ್ಕಾರ ನೆರವೇರಲಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…
ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.
ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.
ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.
ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.
ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.