ಸುದ್ದಿ

ದಾಂಪತ್ಯ ಜೀವನಕ್ಕೆ ಸಪ್ತಪದಿ ತುಳಿದ ‘ಅಗ್ನಿಸಾಕ್ಷಿ’ ಸೀರಿಯಲ್ ನಟಿ ‘ಮಾಯಾ’!

By admin

November 11, 2019

‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ ಜೋಡಿಗೆ ಶುಭಾಶಯವನ್ನು ತಿಳಿಸಿದ್ದಾರೆ. ಇಶಿತಾ ತಮ್ಮ ಮದುವೆಯ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಶೇರ್ಮಾಡಿಕೊಂಡಿದ್ದಾರೆ.

ಮುರುಗಾನಂದ್  ಕೋರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಾರೆ. ಇಶಿತಾ ಕೂಡ ಕಿರುತೆರೆ ಜೊತೆಗೆ ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ. ಮುರುಗಾನಂದ್ ಸಿನಿಮಾಗಳ ಜೊತೆಗೆ ರಿಯಾಲಿಟಿ ಶೋಗಳಲ್ಲಿಯೂ ಕೊರಿಯೋಗ್ರಾಫ್ ಮಾಡುತ್ತಿದ್ದಾರೆ.