ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಕರೆ ಬಂದಿದ್ದು, ನಿಲ್ದಾಣದಲ್ಲಿದ್ದ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ.ಇಂದು ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆಯನ್ನು ಮಾಡಿದ್ದರು. ಇದೇ ವೇಳೆ ನಿಲ್ದಾಣದಲ್ಲಿದ್ದ ಪಾಟ್ನಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದು, ಸ್ಥಳಕ್ಕೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬಂದು ಬ್ಯಾಗ್ ಪರಿಶೀಲನೆ ಮಾಡಿದ್ದಾರೆ.

ಬಾಂಬ್ ಬೆದರಿಕೆ ಕರೆ ಬಂದ ಬೆನ್ನಲ್ಲೇ ಪೊಲೀಸರು ಶ್ವಾನ ದಳದೊಂದಿಗೆ ಕಾರ್ಯಾಚರಣೆಗೆ ಇಳಿದಿದ್ದಾರೆ. ಈ ವೇಳೆ ಅವರಿಗೆ ಗ್ರೇಡ್ ಮಾದರಿಯ ವಸ್ತುವೊಂದು ರೈಲ್ವೇ ನಿಲ್ದಾಣದ ಸಮೀಪ ದೊರಕಿದೆ. ಕೂಡಲೇ ರೈಲ್ವೇ ಸಿಬ್ಬಂದಿ ಹಾಗೂ ಬಾಂಬ್ ನಿಷ್ಕ್ರೀಯ ದಳ ತಂಡ ಅದನ್ನು ದೂರ ತೆಗೆದುಕೊಂಡು ಹೋಗಿ ಪರಿಶೀಲಿಸಿದ್ದಾರೆ. ಸದ್ಯ ಈ ವಸ್ತುವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ನಗರ ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ಅವರು ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ರೈಲ್ವೇ ನಿಲ್ದಾಣದಲ್ಲಿ ಏನೂ ಆಗಿಲ್ಲ. ಸುಮ್ಮನೆ ಆತಂಕ ಪಡುವ ಅಗತ್ಯವಿಲ್ಲ. ರೈಲಿಗೆ ಬಳಕೆ ಮಾಡುವ ಹಳೆಯ ಗ್ರೆನೇಡ್ ರೀತಿಯ ವಸ್ತು ಪತ್ತೆಯಾಗಿದೆ ಅಷ್ಟೇ. ಹೀಗಾಗಿ ಪ್ರಯಾಣಿಕರು ಆತಂಕ ಪಡುವ ಅವಶ್ಯಕತೆ ಇಲ್ಲ. ಇದರಲ್ಲಿ ಸ್ಫೋಟಕ ವಸ್ತುಗಳಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ರೈಲ್ವೇ ನಿಲ್ದಾಣದ ಪ್ರಯಾಣಿಕರು ಆತಂಕಕ್ಕೆ ಒಳಗಾಗಬೇಡಿ. ಅಲ್ಲದೇ ಇಂತಹ ವಸ್ತುಗಳು ಇನ್ನೂ ಇದೆಯಾ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಬಾಂಬ್ ಎಂಬ ಗಾಳಿ ಸುದ್ದಿ ಹರಿದಾಡುತ್ತಿದೆ. ಆದರೆ ಅಂತಹ ಯಾವುದೇ ವಸ್ತು ಸಿಕ್ಕಿಲ್ಲ ಎಂದು ರೈಲ್ವೇ ಎಸ್ಪಿ ರಾಜಪ್ಪ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.ಒಟ್ಟಿನಲ್ಲಿ ಫ್ಲಾಟ್ ಫಾರಂ 1ರಲ್ಲಿ ಗ್ರೆನೇಡ್ ಮಾದರಿಯ ವಸ್ತು ಪತ್ತೆಯಾಗಿದ್ದು, ಈ ವಿಚಾರ ತಿಳಿದಯುತ್ತಿದ್ದಂತೆಯೇ ರೈಲ್ವೇ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಗಾಬರಿಗೊಂಡು ಅಲ್ಲಿಂದ ಜಾಗ ಖಾಲಿ ಮಾಡಲು ಯತ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೆನ್ನೈ, ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾರವರ ಪ್ರೇಮ ಕಥೆ ಹಾಗುಅವರ ಸ್ನೇಹವನ್ನು ವಿವರಿಸಿದ್ದಾರೆ.
ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್, ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .
ಪಕ್ಷಕ್ಕಿಂತಲೂ ದೇಶ ದೊಡ್ಡದು. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕ್ ಮೇಲೆ ವಾಯು ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಚುರುವಿನಲ್ಲಿ ಬಿಜೆಪಿಯ ಸಮಾವೇಶದಲ್ಲಿ ಮಾತನಾಡಿದರು. ಇಂದು ನಿಮ್ಮೆಲ್ಲರ ಜೋಶ್ ನನಗೆ ಅರ್ಥವಾಗುತ್ತಿದೆ. ಇಂದು ನಮ್ಮ ದೇಶ ಸುರಕ್ಷಿತವಾಗಿದ್ದು, ಸುರಕ್ಷಿತರ ಕೈಯಲ್ಲಿದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದರು. 2014ರಲ್ಲಿ ಮೊದಲ ಬಾರಿಗೆ ನನ್ನ ಹೃದಯದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ….
ಈ ಮದುವೆ ಅನ್ನುವುದೇ ವಿಚಿತ್ರ ನೋಡ್ರಿ.ಯಾರು ಯಾವಾಗ ಯಾರನ್ನ,ಏತಕ್ಕೆ ಮದ್ವೆ ಆಗ್ತಾರೆ ಅಂತ ಹೇಳೋದಕ್ಕೆ ಆಗಲ್ಲ.ಇದು ದೇಶ,ಭಾಷೆ ಸಂಸ್ಕೃತಿ ಎಲ್ಲವನ್ನು ಮೀರಿದ್ದು.