ಸುದ್ದಿ

ಮೆಟ್ರೋದಲ್ಲಿ ತೊಂದರೆಯುಂಟಾಗಿ – ಟ್ರ್ಯಾಕ್ ಮೇಲೆ ನಡೆದು ಸಾಗಿದ ಪ್ರಯಾಣಿಕರು….!

132

ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ.

ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್‍ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಎಂಆರ್ ಸಿ, ಹೂಡಾ ಸಿಟಿ ಸೆಂಟರ್ ಮತ್ತು ಸುಲ್ತಾನಪುರ, ಸಮಯಪುರ ಬಾದಲಿ ಮತ್ತು ಕುತುಬ್ ಮಿನಾರ್ ಮಾರ್ಗ ಮಧ್ಯೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿದೆ. ಸುಲ್ತಾನಪುರ ಮತ್ತು ಕುತುಬ್ ಮಿನಾರ್ ನಿಲ್ದಾಣದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದೆ.

ಹಳದಿ ಮಾರ್ಗದ ಮೆಟ್ರೋ ರೈಲು ಬೆಳಗ್ಗೆ ಸುಲ್ತಾನಪುರ ತಲುಪುವುದರಲ್ಲಿತ್ತು. ರೈಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಓವರ್‍ಹೆಡ್ ವಯರ್ ಕಡಿತಗೊಂಡಿದೆ. ಹೀಗಾಗಿ ಮೆಟ್ರೋ ಸಂಚಾರದಲ್ಲಿ ಅಸ್ತವ್ಯಸ್ತ ಕಂಡು ಬಂದಿದೆ. ಡಿಎಂಆರ್ ಸಿ ಸಿಬ್ಬಂದಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ?ಈ ಲೇಖನಿ ಓದಿ…

    ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.

  • ಸುದ್ದಿ

    ಪತಿಯನ್ನ ಆಸ್ಪತ್ರೆಗೆ ಕಳುಹಿಸಿ, ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ – ಸೆಲ್ಫಿ ವಿಡಿಯೋ ಮಾಡಿ ಮಹಿಳೆ ನೇಣಿಗೆ ಶರಣು…!

    ಚಿಕ್ಕಬಳ್ಳಾಪುರ/ಬೆಂಗಳೂರು: ಮನೆ ಮಾಲೀಕರು ಮತ್ತು ಪೊಲೀಸರ ಕಿರುಕುಳದಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಮಂಜುಳಾ (35) ನೇಣಿಗೆ ಶರಣಾದ ಮಹಿಳೆ. ದೇವನಹಳ್ಳಿ ಪಟ್ಟಣದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾಗುವ ಮೊದಲು ಮಂಜುಳಾ ಮೊಬೈಲ್‍ನಲ್ಲಿ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಬಾಡಿಗೆ ಮನೆ ವಿಚಾರವಾಗಿ ಮಾಲೀಕರು ಮತ್ತು ಮಂಜುಳಾ ನಡುವೆ ಜಗಳ ನಡೆದಿತ್ತು. ಜಗಳದ ಹಿನ್ನೆಲೆಯಲ್ಲಿ ಮಾಲೀಕರು ಮತ್ತು ಮೃತಳ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟೆಲೇರಿದ್ದರು….

  • ಸುದ್ದಿ

    ಪ್ಲಾಸ್ಟಿಕ್‌ನಿಂದ ತಯಾರಿಗೊಂಡ ಈ ಪೆಟ್ರೋಲ್ ದರವನ್ನು ಕೇಳಿದರೆ ನೀವು ಅಚ್ಚರಿಪಡುವುದು ಕಂಡಿತ

    ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್‌ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್‌ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ….

  • ಸಿನಿಮಾ

    ಶೆಟ್ಟರ ಕಥೆಯಲ್ಲಿ, ಬರವಣಿಗೆಯೇ ರಾಜ.. ಗರುಡ ಗಮನ ವೃಷಭ ವಾಹನ ಚಿತ್ರದ ವಿಮರ್ಶೆ

    ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ‌ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ‌ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ‌ ಮಿಡಿಯುವವರು,…

  • ತಂತ್ರಜ್ಞಾನ

    10ನೇ ತರಗತಿ ಬಾಲಕನ 5 ಕೋಟಿ ಒಪ್ಪಂದ !ಈ ಲೇಖನಿ ಓದಿ ಶಾಕ್ ಆಗ್ತೀರಾ…

    ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.

  • ಸುದ್ದಿ

    ಆಪರೇಷನ್ ಕಮಲ ಠುಸ್..? ಉಲ್ಟಾ ಹೊಡೆದ ರಾಜೀನಾಮೆ ಅಸ್ತ್ರ…!

    ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್‌ ಸಿಂಗ್‌ ಪ್ರತಾಪಗೌಡ ಪಾಟೀಲ್‌ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್‌ನ ರಾಮಲಿಂಗಾ ರೆಡ್ಡಿ, ಆನಂದ್‌ ಸಿಂಗ್‌, ಪ್ರತಾಪಗೌಡ ಪಾಟೀಲ್‌ ಅವರು…