ಸುದ್ದಿ

ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಸಚಿವ. ಈ ಸುದ್ದಿ ನೋಡಿ.!

232

ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ.

ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ ಆಕೆಯನ್ನು ಕಾಟಾಚಾರಕ್ಕೆ ಸರ್ಕಾರಿ ಶಾಲೆಗೆ ಸೇರಿಸಿದ್ದರು. ಆದರೆ ಶಾಲೆ ಮುಗಿದ ಮೇಲೆ ಸಂಗೀತಾ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತ ಕುಟುಂಬಕ್ಕೆ ಸಹಾಯ ಮಾಡುತ್ತಿದ್ದಳು. ಶಾಲೆ ಕಡೆ ಹೆಚ್ಚು ಗಮನ ಕೊಡಲಾಗದೇ, ಕಷ್ಟ ಪಟ್ಟು ಚಿಕ್ಕ ವಯಸ್ಸಿನಲ್ಲಿಯೇ ತಂದೆ, ತಾಯಿಗೆ ಕುಟುಂಬ ನಡೆಸಲು ಸಹಾಯ ಮಾಡುತ್ತಿದ್ದ ಸಂಗೀತಾಳನ್ನು ಕಂಡ ಸಚಿವರು ಆಕೆಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. 

ಈ ಬಗ್ಗೆ ಸ್ವತಃ ಶಿಕ್ಷಣ ಸಚಿವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ. ಸಂಗೀತ ಎಂಬ ಈ ಬಾಲಕಿ ಕೆಂಗೇರಿ ರೈಲ್ವೇ ನಿಲ್ದಾಣದ ಬಳಿ ಹೂವು ಮಾರುತ್ತಿದ್ದಳು. ನಮ್ಮ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಆಕೆಯ ಪೋಷಕರ ಮನ ಒಪ್ಪಿಸಿ ಸಂಗೀತ ಳನ್ನು ರಾಮನಗರದ ಮೊರಾರ್ಜೀ ದೇಸಾಯಿ ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಕೊಡಿಸಲು ಸಜ್ಜಾಗಿದ್ದಾರೆ.ಇಂತಹ ಇನ್ನೂ ಅನೇಕ ಬಾಲ ಕಾರ್ಮಿಕರಿಗೆ ಶಿಕ್ಷಣ ಕೊಡಿಸುವ ಯೋಜನೆ ನಮ್ಮ ಇಲಾಖೆಯದ್ದು..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ