ಸುದ್ದಿ

ಕಾಡಿನ ನಾಶವಾಗುತ್ತಿರುವ ಹಿನ್ನೆಲೆ ಬಗ್ಗೆ ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಹೇಳಿದ್ದೇನು..?

123

ನೀರಿನ  ಸಂರಕ್ಷಣೆಗಾಗಿ ನ್ಯೂಸ್ ​18 ಹಮ್ಮಿಕೊಂಡಿರುವ  #Mission Paani ಆಂದೋಲನ  ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್​ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್​ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು.

ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ. 2016ರಲ್ಲಿಯೂ ಸಹ ತಮಿಳುನಾಡಿನಲ್ಲಿ ಬರಗಾಲ ಬಂದಿತ್ತು. ಇದು ಹೀಗೆಯೇ ಮುಂದುವರೆದರೆ ನಮ್ಮ ವಿನಾಶ ನಿಶ್ಚಿತ. ಹಾಗಾಗಿ ನೀರನ್ನು ಉಳಿಸುವ ಕೆಲವೊಂದು ಕಾರ್ಯಗಳನ್ನು ಮಾಡಬೇಕಿದೆ ಎಂದರು.

ಮಳೆ ನೀರು ಕೊಯ್ಲು: ನೀರು ಅತ್ಯಮೂಲ್ಯ ಸಂಪನ್ಮೂಲವಾಗಿದೆ. ನದಿ, ಕೊಳ, ಕೆರೆ, ಬಾವಿಯ ನೀರನ್ನು ಸಂರಕ್ಷಿಸುವುದರ ಜೊತೆಗೆ ಮುಖ್ಯವಾಗಿ ನೀರಿನ ಮೂಲವಾದ ಮಳೆ ನೀರನ್ನು ಉಳಿಸಿಕೊಳ್ಳಬೇಕಾಗಿದೆ. ಈ ಮಳೆನೀರು ಕೊಯ್ಲು ಮೂಲಕ ಮಳೆ ನೀರನ್ನು ವರ್ಷಪೂರ್ತಿ ನಮ್ಮ ಬಳಕೆಗೆ ಹಿಡಿದಿಟ್ಟುಕೊಳ್ಳಬೇಕು ಎಂದು ತಿಳಿಸಿದರು. ಸದ್ಗುರು ಅವರು ಮಾತನಾಡುತ್ತಾ ತಮಿಳಿನ ಗಾದೆಯೊಂದನ್ನು ಹೇಳಿದರು. ‘ಕಾವೇರಿ ನಡೆದುಕೊಂಡು ಬಂದರೆ ಮಾತ್ರ ಅವಳು ಅದೃಷ್ಟಲಕ್ಷ್ಮಿ. ಅವಳೇನಾದರೂ ಧಾವಿಸಿ ಬಂದರೆ ಭದ್ರಕಾಳಿ’ ಎಂದು ಹೇಳಿದರು. ಕಾಡು ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು.

 ರಾಷ್ಟ್ರ ರಾಜಧಾನಿಯಲ್ಲೇ ನೀರಿನ ಬವಣೆ ಹೆಚ್ಚು; ಬಡವರ ಗೋಳು ಕೇಳುವವರಿಲ್ಲ, ನೀರಿನ ಕೊರತೆ ಬೇಸಿಗೆಯಲ್ಲಿ ಮಾತ್ರ ಗಮನಹರಿಸಬೇಕಾದ ವಿಷಯವಲ್ಲ. ಮಳೆಗಾಲದಲ್ಲಿಯೇ ಹರಿದು ಹೋಗುವ ನೀರನ್ನು ಸಂರಕ್ಷಿಸಿ, ಮುಂದಿನ ದಿನಗಳಿಗೆ ಹಿಡಿದಿಟ್ಟುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಇದಕ್ಕೆ ಚೆನ್ನೈ ನಗರವನ್ನು ಉದಾಹರಣೆಯನ್ನಾಗಿ ನೀಡಿದ ಅವರು, ಒಂದಾನೊಂದು ಕಾಲದಲ್ಲಿ ಚೆನ್ನೈನಲ್ಲಿ 1500 ಕೆರೆಗಳಿದ್ದವು. ಆದರೆ ಈಗ ಒಂದು ಕೆರೆಯೂ ಸಹ ಇಲ್ಲ. ಇದಕ್ಕೆ ಕಾರಣ ಕೆರೆಗಳಿದ್ದ ಜಾಗದಲ್ಲಿ ನಗರಗಳನ್ನು ನಿರ್ಮಿಸಿರುವುದು ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಸ್ ಕಂದಕಕ್ಕೆ ಬಿದ್ದು 6 ಮಂದಿ ಸಾವು, 39 ಜನರಿಗೆ ತೀವ್ರ ಗಾಯ….!

    ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್‍ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…

  • ಸಿನಿಮಾ

    ದಂಡುಪಾಳ್ಯ-2 ಟ್ರೈಲರ್ ನೋಡಿದ್ರೆ, ಶಾಕ್ ಆಗ್ತೀರಾ !!!

    ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್‍ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.

  • ಕರ್ನಾಟಕ

    ರಾಷ್ಟ್ರಪತಿ ಕರ್ನಾಟಕದ ಬಗ್ಗೆ ಹಾಗೂ ಕರ್ನಾಟಕದ ಗಣ್ಯರ ಬಗ್ಗೆ ಹೊಗಳಿದ್ದಾರೆ…!ತಿಳಿಯಲು ಇದನ್ನು ಓದಿ..

    ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.

  • ಸುದ್ದಿ

    ಬೆಳಕೇ ಇಲ್ಲದೆ ಕತ್ತಲಲ್ಲಿದ್ದ ದೊಡ್ಡಿಗಳಿಗೆ ಬೆಳಕಿನ “ಸೌಭಾಗ್ಯ”ರೂಪಿಸಿದ ಮೋದಿ…..!

    ಎಂಟೆಕ್‌ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್‌ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…