ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ.

ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ. ಅದರಲ್ಲೂ ಎರಡನೇ ದಿನ ನಡೆಯುವ ಹಾಲರುವೆ ಉತ್ಸವ ವಿಭಿನ್ನ ಹಾಗೂ ವಿಶೇಷ ರೀತಿಯಲ್ಲಿ ನಡೆಯುತ್ತದೆ.

ಮಹದೇಶ್ವರ ದೇವಸ್ಥಾನಕ್ಕೆ 9 ಕಿ.ಮೀ ದೂರದಲ್ಲಿ ಬೆಟ್ಟಗುಡ್ಡಗಳ ನಡುವೆ ಒಂದು ಹಳ್ಳ ಹರಿಯುತ್ತದೆ. ಮಹದೇಶ್ವರರು ಇಲ್ಲಿ ಕಾರಯ್ಯ ಬಿಲ್ಲಯ್ಯ ಎಂಬ ಬೇಟೆಗಾರರು ತಂದುಕೊಟ್ಟ ಕಾಡೆಮ್ಮೆ ಹಾಲನ್ನು ಆಕಸ್ಮಿಕವಾಗಿ ಚೆಲ್ಲಿದರು ಎಂಬ ಐತಿಹ್ಯವಿದೆ. ಈ ಹಳ್ಳದ ನೀರು ಹಾಲಿನಂತೆ ಬೆಳ್ಳಗೆ ಇರುವ ಕಾರಣ ಇದಕ್ಕೆ ಹಾಲಹಳ್ಳ ಎಂಬ ಹೆಸರು ಬಂದಿದೆ.

ದೀಪಾವಳಿ ಜಾತ್ರೆಯ ಎರಡನೇ ದಿನ ಬೇಡಗಂಪಣ ಜನಾಂಗದ ಹನ್ನೊಂದು ವರ್ಷದೊಳಗಿನ 101 ಹೆಣ್ಣುಮಕ್ಕಳು ಉಪವಾಸವಿದ್ದು ಹಾಲಹಳ್ಳಕ್ಕೆ ಬಂದು ಸ್ನಾನ ಮಾಡಿ ಹಳ್ಳದಲ್ಲಿ ಹರಿಯುವ ನೀರು ಹೊತ್ತು ತರುತ್ತಾರೆ. ಬರಿಗಾಲಲ್ಲಿ 9 ಕಿ.ಮೀ ಬೆಟ್ಟಗುಡ್ಡ ಹತ್ತಿ ಬರುವ ಇವರನ್ನು ಸತ್ತಿಗೆ ಸೂರಿಪಾನಿ, ಮಂಗಳವಾದ್ಯ ಸಮೇತ ದೇವಸ್ಥಾನಕ್ಕೆ ಕರೆದೊಯ್ಯಲಾಗುತ್ತದೆ ಎಂದು ಪ್ರಧಾನ ಅರ್ಚಕ ಕೆ. ಮಹದೇಶ್ ಹೇಳುತ್ತಾರೆ.ಬೇಡಗಂಪಣ ಬಾಲೆಯರಿಂದ 101 ಕುಂಭದಲ್ಲಿ ತಂದ ನೀರನ್ನು ಮಹದೇಶ್ವರನಿಗೆ ಅಭಿಷೇಕ ಮಾಡಲಾಗುತ್ತದೆ. ಬಳಿಕ ಅಭಿಷೇಕದ ನೀರನ್ನು ಭಕ್ತರಿಗೆ ತೀರ್ಥ ರೂಪದಲ್ಲಿ ನೀಡಲಾಗುತ್ತದೆ. ಈ ತೀರ್ಥ ಸ್ವೀಕರಿಸಲು ಸಾವಿರಾರು ಭಕ್ತರು ಸಾಲುಗಟ್ಟಿ ನಿಂತಿರುತ್ತಾರೆ.

ಮಕ್ಕಳಿಗೆ ಕುಡಿಸಲು ಎದೆ ಹಾಲು ಬಾರದ ತಾಯಂದಿರು ಹರಕೆ ಹೊತ್ತು ಹಾಲರುವೆ ಅಭಿಷೇಕದ ತೀರ್ಥ ಸೇವಿಸಿದರೆ ಹಾಲು ಬರುತ್ತೆ ಎಂಬ ನಂಬಿಕೆಯೂ ಇದೆ. ಹೀಗಾಗಿ ಅಂತಹ ತಾಯಂದಿರು ಸಹ ಹಾಲರುವೆ ಉತ್ಸವದಲ್ಲಿ ಪಾಲ್ಗೊಳ್ಳುತ್ತಾರೆ. ಒಟ್ಟಾರೆ ಏಳು ಮಲೆ ಒಡೆಯನಿಗೆ ದೀಪಾವಳಿಯಲ್ಲಿ ಎಲ್ಲ ಅಭಿಷೇಕಗಳಿಗಿಂತ ಹಾಲರುವೆ ಅಭಿಷೇಕ ವಿಶೇಷವಾದುದ್ದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾರವರ ಪ್ರೇಮ ಕಥೆ ಹಾಗುಅವರ ಸ್ನೇಹವನ್ನು ವಿವರಿಸಿದ್ದಾರೆ.
ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ.
ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…
ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ….
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್ನಲ್ಲಿ ಯಶಸ್ಸು ಕಂಡಿರುವ ವಿರಾಟ್ ಕೊಹ್ಲಿ, ಸದ್ಯ ಕ್ರಿಕೆಟ್ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…