ರಾಜಕೀಯ

ಮೋದಿ ನೇತೃತ್ವದ: ಷೇರುಪೇಟೆಯಲ್ಲಿ ಹೂಡಿಕೆದಾರರಿಗೆ ಬಂಪರ್, 2 ದಿನದಲ್ಲಿ 3.86 ಲಕ್ಷ ಕೋಟಿ ರೂ. ಲಾಭ!

49

ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್‌ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ.

ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ ಸೆನ್ಸೆಕ್ಸ್‌ ದಿನದ ವಹಿವಾಟನ್ನು 248.57 ಅಂಕಗಳ ಏರಿಕೆಯೊಂದಿಗೆ 39,683.29 ಅಂಕಗಳ ದಾಖಲೆಯ ಮಟ್ಟದಲ್ಲಿ ಕೊನೆಗೊಳಿಸಿತು. ಇದರ ಪರಿಣಾಮ ಹೂಡಿಕೆದಾರರಿಗೆ 3.86 ಲಕ್ಷ ಕೋಟಿ ರೂ. ಲಾಭ ಆಗಿದೆ.

ಇದೇ ರೀತಿ ರಾಷ್ಟ್ರೀಯ ಷೇರು ಮಾರುಕಟ್ಟೆ ನಿಫ್ಟಿ ಸೂಚ್ಯಂಕ 80.65 ಅಂಗಕಳ ಜಿಗತವನ್ನು ದಾಖಲಿಸಿ ದಿನದ ವಹಿವಾಟನ್ನು 11,924.75ರ ಅಂಕಗಳ ದಾಖಲೆಯ ಮಟ್ಟದಲ್ಲಿ ಕೊನೆಗೊಳಿಸಿತು.ಇಂದಿನ ವಹಿವಾಟಿನಲ್ಲಿ ಟಾಟಾ ಸ್ಟೀಲ್‌ ಶೇ.5.78ರ ಜಿಗಿತವನ್ನು ದಾಖಲಿಸಿ ಅತೀ ದೊಡ್ಡ ಗೇನರ್‌ ಎನಿಸಿಕೊಂಡಿತು.

ಇಂದು ಮುಂಬೈ ಷೇರು ಮಾರುಕಟ್ಟೆಯಲ್ಲಿ ಒಟ್ಟು ಕಂಪೆನಿಗಳ 2,766 ಷೇರುಗಳು ವಹಿವಾಟಿಗೆ ಒಳಪಟ್ಟವು. ಈ ಪೈಕಿ 1,793 ಷೇರುಗಳು ಮುನ್ನಡೆ ಸಾಧಿಸಿದರೆ, 785 ಷೇರುಗಳು ಹಿನ್ನಡೆಗೆ ಗುರಿಯಾದವು. 188 ಷೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತೃತೀಯ ಲಿಂಗ ವರ್ಗಕ್ಕೆ ಮಾದರಿಯಾದ ರಾಣಿ ಕಿಣ್ಣರ್,.!! ಯಾಕೆ ಗೊತ್ತೇ,.?

    ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….

  • ದೇವರು, ದೇವರು-ಧರ್ಮ

    ಹಿಂದೂ ಮಹಾ ಗಣಪತಿ – ಚಿತ್ರದುರ್ಗ ಕರ್ನಾಟಕದ ಅತಿ ಹೆಚ್ಚು ಜನ ಸೇರುವ ಗಣಪತಿ…

    2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.

  • ಸುದ್ದಿ

    ಲೈಂಗಿಕ ಕಿರುಕಳ ನೀಡುತಿದ್ದ ಕಾಮುಕ ಮಾವನ ಹಿಡಿಯಲು ಸೊಸೆ ಮಾಡಿದ ಚಾಣಾಕ್ಷ ಪ್ಲ್ಯಾನ್…..!

    ತನ್ನ ಸೊಸೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ 50 ವರ್ಷದ ಆಟೋ ಚಾಲಕನನ್ನು ಮುಂಬೈ ವಿಹಾರ್ ಪೊಲೀಸರು ಬಂಧಿಸಿದ್ದಾರೆ.  ಮಾವನಿಂದಲೇ ಶೋಷಣೆ ಆಗುತ್ತಿರುವ ಬಗ್ಗೆ ಮಹಿಳೆ ತನ್ನ ಗಂಡನ ಬಳಿ ಹೇಳಿಕೊಂಡಿದ್ದಳು. ಆದರೆ ಗಂಡ ಆಕೆಯ ಮಾತನ್ನು ನಂಬಿರಲಿಲ್ಲ. ಹಾಗಾಗಿ ಮಹಿಳೆ ಸಾಕ್ಷಿ ಸಮೇತ ಮಾವನನ್ನು ಹಿಡಿದಕೊಡುವ ನಿರ್ಧಾರಕ್ಕೆ ಬಂದಿದ್ದರು. ಅಡುಗೆ ಕೋಣೆಯಲ್ಲಿ ಮೊಬೈಲ್ ಕ್ಯಾಮರಾ ಫಿಕ್ಸ್ ಮಾಡಿದಳು. ಮಾವ ಆಕೆಯ ಮೇಲೆ ಶೋಷಣೆ ಮಾಡಲು ಆಗಮಿಸಿದ.  ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂದವ ಸೊಸೆಯ…

  • ಸುದ್ದಿ

    ದೇಹದ ಕೆಟ್ಟ ಕೊಬ್ಬು ಕರಗಬೇಕೆಂದರೆ ದಿನ ನಿತ್ಯ ಈ ಹಣ್ಣನ್ನು ತಿಂದರೆ ಸಾಕು,.!

    ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ  ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ  ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ  ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…

  • ಆರೋಗ್ಯ, ಸರ್ಕಾರಿ ಯೋಜನೆಗಳು

    ಇಂದಿರಾ ಕ್ಯಾಂಟೀನ್ ಆಯ್ತು. ಈಗ “ಇಂದಿರಾ ಕ್ಲಿನಿಕ್” ಶುರು!ಇಲ್ಲಿ ಏನೆಲ್ಲಾ ಉಚಿತ ಸೇವೆ ಸಿಗಲಿದೆ ಗೂತ್ತಾ..?

    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.

  • ಸಿನಿಮಾ

    ಮಗನಂತಿರುವ ದರ್ಶನ್ ಚುನಾವಣೆಯಲ್ಲಿ ನಿಂತಿರುವ ಸುಮಲಾತರವರ ಪರ ನಿಲ್ತಾರ? ದರ್ಶನ್ ಹೇಳಿದ್ದೇನು ಗೊತ್ತಾ?

    ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….