ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ.

ಕೇದಾರನಾಥ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು www.gmvnl.in ಮೂಲಕ 1,500 ರೂ. ಪಾವತಿಸಿ ಬುಕ್ ಮಾಡಬೇಕು. ಬಳಿಕ ಗುಪ್ತಾಕ್ಷಿ ಹಾಗೂ ಕೇದಾರನಾಥದಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ತದನಂತರ ಯಾತ್ರಿಕರು ಆರೋಗ್ಯವಾಗಿದ್ದರೆ ಮಾತ್ರ ಅವರಿಗೆ ಗುಹೆಯಲ್ಲಿ 24 ಗಂಟೆಗಳ ಕಾಲ ಏಕಾಂಗಿಯಾಗಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ. ಸದ್ಯ ಮುಂದಿನ 10 ದಿನಗಳ ತನಕ ಕೇದಾರನಾಥ ಗುಹೆ ಯಾತ್ರಿಕರ ಧ್ಯಾನಕ್ಕೆ ಬುಕ್ ಆಗಿದೆ.

ಹಾಗೆಯೇ ಮೂರು ದಿನಕ್ಕಿಂತ ಹೆಚ್ಚು ದಿನಗಳ ಕಾಲ ಗುಹೆ ಬುಕ್ ಮಾಡುವಂತಿಲ್ಲ. ಒಂದು ಬಾರಿಗೆ ಕೇವಲ ಓರ್ವ ಯಾತ್ರಿಕರಿಗೆ ಮಾತ್ರ ಗುಹೆಗೆ ಪ್ರವೇಶ ನೀಡಲಾಗುತ್ತದೆ. ಜೊತೆಗೆ ಗುಹೆಯಲ್ಲಿ ಫೋನ್ ವ್ಯವಸ್ಥೆ ಕೂಡ ಇದೆ. ಒಂದು ವೇಳೆ ತುರ್ತು ಪರಿಸ್ಥಿತಿ ಎದುರಾದರೆ ಫೋನ್ ಮೂಲಕ ಜಿಎಂವಿಎನ್ ಸಿಬ್ಬಂದಿಯನ್ನು ಸಂಪರ್ಕಿಸಬಹುದು. ಇದೇ ರೀತಿ ಆಧುನಿಕ ಗುಹೆಗಳು ಕೂಡ ಕೇದಾರನಾಥ ಹಾಗೂ ಬದರಿನಾಥ ದೇಗುಲದ ಅಕ್ಕಪಕ್ಕದ ಪರ್ವತಗಳಲ್ಲಿ ನಿರ್ಮಾಣ ಮಾಡಲಾಗಿದೆ.

ಗುಹೆಗೆ ಬಂದ ಯಾತ್ರಿಕರಿಗೆ ಜಿಎಂವಿಎನ್ ಕುಡಿಯುವ ನೀರಿನ ವ್ಯವಸ್ಥೆ, ಊಟ, ಶೌಚಾಲಯ, ವಿದ್ಯುತ್ ಸಂಪರ್ಕ ಹಾಗೂ ಮಲಗಲು ಹಾಸಿಗೆ ಹೀಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸಿಕೊಡುತ್ತದೆ. ಆದರೆ ಒಂದು ಸಲ ಗುಹೆಯನ್ನು ಆನ್ಲೈನ್ ಬುಕ್ ಮಾಡಿದ ಬಳಿಕ ಬುಕ್ಕಿಂಗ್ ಅನ್ನು ರದ್ದು ಮಾಡಿದರೆ ಅಥವಾ ಕಾರಣಾಂತರಗಳಿಂದ ಗುಹೆಯಲ್ಲಿ ಇರಲು ಯಾತ್ರಿಕರು ನಿರಾಕರಿಸಿದರೆ ಪಾವತಿಸಿದ ಹಣವನ್ನು ವಾಪಸ್ ನೀಡುವುದಿಲ್ಲ. ಹಾಗೆಯೇ ಒಂದು ವೇಳೆ ಮಾಡಿದ್ದ ಬುಕ್ಕಿಂಗ್ ರದ್ದಾದಲ್ಲಿ ಆ ದಿನ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಸ್ಥಳದಲ್ಲಿದ್ದ ಯಾತ್ರಿಕರಿಗೆ 990 ರೂಪಾಯಿಯಲ್ಲಿ ಗುಹೆಯಲ್ಲಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಅಲ್ಲಿನ ಆಡಳಿತ ಮಂಡಳಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ. ಅಲ್ಲದೆ ಹೊನೊರ್ ಸರಣಿಯ ಫೋನ್ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ. ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್ಸಂಗ್ ಗ್ಯಾಲಕ್ಸಿ…
ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…
ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…
ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…