ಸುದ್ದಿ

ಮೋದಿ ಹುಟ್ಟುಹಬ್ಬಕ್ಕೆ ಜೆಡಿಎಸ್ ಶಾಸಕರಿಂದ ವಿಶೇಷ ಪೂಜೆ….!

32

ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ.

ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ.

ರಾಜಕೀಯ ನಿವೃತ್ತಿ ಮಾತುಗಳನ್ನಾಡಿರುವ ಅವರು ಬಿಜೆಪಿ ನಾಯಕರೊಂದಿಗೆ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ