ಸುದ್ದಿ

ಕಪ್ಪು ಹಣ ಆಯ್ತು, ಬಂಗಾರದ ಬೇಟೆಗಿಳಿದ ಮೋದಿ ಸರ್ಕಾರ : ಚಿನ್ನ ರೂಪದ ಕಾಳಧನದ ಮೇಲೆ ಮೋದಿ ಸರ್ಜಿಕಲ್ ಸ್ಟ್ರೈಕ್…!

44

ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್‌ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ.

ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ ಸಕ್ರಮಗೊಳಿಸಲು ಮುಂದಾಗಿದೆ. ‘ಚಿನ್ನ ಕ್ಷಮಾದಾನ ಯೋಜನೆ’(ಗೋಲ್ಡ್‌ ಅಮ್ನೆಸ್ಟಿ ಸ್ಕೀಮ್‌) ಮೂಲಕ ದೇಶದಲ್ಲಿ ಸಂಗ್ರಹವಾಗಿರುವ ಚಿನ್ನದ ಲೆಕ್ಕವನ್ನು ಹೊರತೆಗೆಯಲು ಸರಕಾರ ನಿರ್ಧರಿಸಿದೆ.

ಕಾಳಧನ ಬಳಸಿ ಚಿನ್ನದಲ್ಲಿ ಹೂಡಿಕೆ ಮಾಡಿದವರು ಅದನ್ನು ಸ್ವಯಂ ಆಗಿ ಘೋಷಿಸಿಕೊಳ್ಳಲು ಹೊಸ ಯೋಜನೆಯಿಂದ ಸಾಧ್ಯವಾಗಲಿದೆ. ಸೂಕ್ತ ತೆರಿಗೆಯನ್ನು ಪಾವತಿಸಿ ಅಕ್ರಮವನ್ನು ಸಕ್ರಮ ಮಾಡಿಕೊಳ್ಳಬಹುದು. ಅಕ್ರಮ ಆಸ್ತಿಗೆ ಸಂಬಂಧಿಸಿದ ಶಿಕ್ಷೆಗಳಿಂದ ಪಾರಾಗಬಹುದು. ಕ್ಷಮಾದಾನ ಯೋಜನೆಯಲ್ಲಿ ಒಬ್ಬ ವ್ಯಕ್ತಿ ಇಟ್ಟುಕೊಳ್ಳಬಹುದಾದ ಕನಿಷ್ಠ ಚಿನ್ನದ ಪ್ರಮಾಣವನ್ನು ನಿಗದಿ ಪಡಿಸುವ ಸಾಧ್ಯತೆಗಳಿವೆ. ಅದಕ್ಕಿಂತ ಹೆಚ್ಚಿನ ಚಿನ್ನಕ್ಕೆ ತೆರಿಗೆ ಅನ್ವಯ. ತೆರಿಗೆ ದರ ಇನ್ನೂ ಅಂತಿಮವಾಗಿಲ್ಲ. ಬಹುಶಃ ಶೇಕಡಾ 30 ಮತ್ತು ಶಿಕ್ಷಣ ಸೆಸ್‌ ಸೇರಿ ಶೇ.33 ಆಗ ಬಹುದು ಎಂಬ ನಿರೀಕ್ಷೆ ಇದೆ.

ಕಾಳಧನಿಕರು ಚಿನ್ನದಲ್ಲಿ ಅಕ್ರಮವಾಗಿ ದೊಡ್ಡ ಪ್ರಮಾಣದಲ್ಲಿ ಹಣವನ್ನು ಹೂಡಿಕೆ ಮಾಡಿದ್ದಾರೆ. ಚಿನ್ನದ ಅಕ್ರಮ ಸಕ್ರಮ ಯೋಜನೆಯಿಂದ ಕಾಳಧನವು ಸರಕಾರದ ಲೆಕ್ಕಕ್ಕೆಸಿಗುತ್ತದೆ. ತೆರಿಗೆ ಆದಾಯವೂ ಸರಕಾರಕ್ಕೆ ದೊರೆಯುತ್ತದೆ. 2017ರಲ್ಲಿ ಆದಾಯ ಘೋಷಣೆ ಯೋಜನೆ(ಐಡಿಎಸ್‌)-2 ಅಂದರೆ, ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಯೋಜನೆಯನ್ನು (ಪಿಎಂಜಿಕೆವೈ) ಆರಂಭಿಸಲಾಗಿತ್ತು. ನೋಟು ಅಮಾನ್ಯತೆ ಬಳಿಕ ಜಾರಿಯಾದ ಯೋಜನೆಗೆ ಅಷ್ಟೇನೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ. ಆದಾಗ್ಯೂ, ಇದೇ ಮಾದರಿಯಲ್ಲಿ ಚಿನ್ನದ ಕ್ಷಮಾದಾನ ಯೋಜನೆ ಆರಂಭಿಸಲು ಸರಕಾರ ಸಜ್ಜಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಈ ಹೊಸ ವರದಿ ಪ್ರಕಾರ ಖಾಸಗಿ ಆಸ್ಪತ್ರೆಗಳು ಜನರಿಂದ 1700% ಅಧಿಕವಾಗಿ ಹಣ ಸ್ವೀಕರಿಸುತ್ತಿದ್ದಾರೆ ಎನುತ್ತೆ..!

    ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

  • ಸುದ್ದಿ

    ಕಾಫಿ ಡೇ ಮಾಲೀಕ,ಮಾಜಿ ಸಿ ಎಂ ಎಸ್‌.ಎಂ.ಕೃಷ್ಣ ಅಳಿಯ, ಸಿದ್ಧಾರ್ಥ ನೇತ್ರಾವತಿ ನದಿ ಬಳಿ ಕಾಣೆ……!

    ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್‌ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…

  • inspirational, ಕಾನೂನು

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ‍್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…

  • ಸುದ್ದಿ, ಸ್ಪೂರ್ತಿ

    ಗಂಗೆ ಮಲೀನವಾಗಬಾರದೆಂದು ಪ್ರತಿದಿನ ನದಿಯಲ್ಲಿ ತೇಲುವ ಪ್ಲಾಸ್ಟಿಕ್ ಬಾಟಲಿಗಳನ್ನು ಎತ್ತುತ್ತಿರುವ ಮೀನುಗಾರ. ಈ ಸುದ್ದಿ ನೋಡಿ.

    ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು  ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…

  • inspirational

    ವಯಸ್ಸನ್ನು ಕಡಿಮೆ ಮಾಡುವ ಹಿಪ್ಪುನೇರಳೆ ಹಣ್ಣು, ಕಂಡರೆ ಬಿಡಬೇಡಿ. ಈ ಮಾಹಿತಿ ನೋಡಿ.

    ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…